May 2023

ಬೆರಳಿಗೆ ಹಚ್ಚುವ ಚುನಾವಣಾ ಶಾಯಿಯ ಇತಿಹಾಸ ಗೊತ್ತೇ? 35 ದೇಶಗಳಿಗೆ ರಪ್ತಾಗುತ್ತಿದೆ ನಮ್ಮ ರಾಯಲ್ ಶಾಯಿ!!

ಸಮಗ್ರ ನ್ಯೂಸ್: ಪ್ರತಿಯೊಬ್ಬರೂ ತಾವು ಮತದಾನ ಮಾಡಿದ ಮೇಲೆ ತಮ್ಮ ಕೈಯ ತೋರು ಬೆರಳನ್ನು ಏಕೆ ತೋರಿಸುತ್ತಿದ್ದಾರೆ ಎಂಬ ಸಂದೇಹ ಚಿಕ್ಕ ಮಕ್ಕಳಲ್ಲಿ ಮೂಡಿದರೂ ದೊಡ್ಡವರಾದವರಿಗೆ ಈ ಬಗ್ಗೆ ಸಹಜವಾಗಿ ಗೊತ್ತೇ ಇರುತ್ತದೆ. ಹೌದು, ವ್ಯಕ್ತಿಯೊಬ್ಬನಿಗೆ ಸಾಂವಿಧಾನಿಕವಾಗಿ ಬಂದಿರುವ ಮತದಾನದ ಹಕ್ಕನ್ನು ಅವನು ಚಲಾಯಿಸಿದ್ದಾನೆ ಎಂಬುದನ್ನು ಸೂಚಿಸುವ ಹಾಗೂ ಒಂದೇ ಬಾರಿ ಮಾಡಬೇಕಾಗಿರುವ ತನ್ನ ಸರಿಯಾದ ಹಕ್ಕನ್ನು ಚಲಾಯಿಸಿದ್ದಾನೆ ಎಂದು ಖಾತರಿಪಡಿಸುವ ಸಂಕೇತವಾಗಿ ಅವನ/ಅವಳ ಕೈಯ ತೋರು ಬೆರಳಿಗೆ ಸುಲಭವಾಗಿ ಅಳಿಸಲಾಗದಂತಹ ಒಂದು ಶಾಯಿಯ ಗುರುತನ್ನು ಹಾಕಿರುತ್ತಾರೆ. […]

ಬೆರಳಿಗೆ ಹಚ್ಚುವ ಚುನಾವಣಾ ಶಾಯಿಯ ಇತಿಹಾಸ ಗೊತ್ತೇ? 35 ದೇಶಗಳಿಗೆ ರಪ್ತಾಗುತ್ತಿದೆ ನಮ್ಮ ರಾಯಲ್ ಶಾಯಿ!! Read More »

ಪಾಕ್‌ ಜೈಲಿನಲ್ಲಿದ್ದ ಭಾರತೀಯರ ರಿಲೀಸ್

ಸಮಗ್ರ ನ್ಯೂಸ್: ಪಾಕಿಸ್ತಾನದ ಇಸ್ಲಾಮಾಬಾದ್ ಜಲಗಡಿಯೊಳಗೆ ಮೀನುಗಾರಿಕೆಯ ಆರೋಪದ ಮೇಲೆ 199 ಭಾರತೀಯರನ್ನು ಪಾಕ್‌ ಜೈಲಿನಲ್ಲಿ ಬಂಧಿಸಲಾಗಿತ್ತು. ಮೇ 12ರ ಶುಕ್ರವಾರದಂದು ಪಾಕ್‌ ಅಧಿಕಾರಿಗಳು ಬಿಡುಗಡೆ ಮಾಡಲಿದ್ದಾರೆ. ಸಿಂಧ್‌ನ ಜೈಲು ವಿಭಾಗದ ಪೊಲೀಸ್‌ ಅಧಿಕಾರಿಗಳು ಮಾಹಿತಿ ನೀಡಿ, ಭಾರತೀಯ ಮೀನುಗಾರರನ್ನು ಲಾಹೋರ್‌ಗೆ ಕಳುಹಿಸಿ, ಅಲ್ಲಿಂದ ವಾಘಾ ಗಡಿಯಲ್ಲಿ ಭಾರತೀಯ ಅಧಿಕಾರಿಗಳಿಗೆ ಹಸ್ತಾಂತರ ಮಾಡಲಾಗುತ್ತದೆ. ಅಷ್ಟು ದಿನಗಳು ಮೀನುಗಾರರು ಲಾಂಧಿ ಜೈಲಿನಲ್ಲಿ ಇರಿಸಲಾಗುವುದು ಎಂಬುದಾಗಿ ತಿಳಿದುಬಂದಿದೆ. 654 ಭಾರತೀಯ ಮೀನುಗಾರರು ಕರಾಚಿ ಜೈಲುಗಳಲ್ಲಿದ್ದು ಅಂದಾಜು 83 ಪಾಕಿಸ್ತಾನಿ ಮೀನುಗಾರರು

ಪಾಕ್‌ ಜೈಲಿನಲ್ಲಿದ್ದ ಭಾರತೀಯರ ರಿಲೀಸ್ Read More »

ಅಬ್ಬಾ…! ಚುನಾವಣಾ ಅಕ್ರಮದಲ್ಲಿ ಕೋಟಿ ಕೋಟಿ ನಗ-ನಗದು ವಶಕ್ಕೆ ಪಡೆದ ಅಧಿಕಾರಿಗಳು| ಇಲ್ಲಿದೆ ಫುಲ್ ಡೀಟೈಲ್ಸ್…

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭಾ ಚುನಾವಣೆಯ ಸೋಮವಾರ ಬಹಿರಂಗ ಪ್ರಚಾರಕ್ಕೆ ತೆರೆಬಿದ್ದಿದ್ದು, ಈವರೆಗೆ ಚುನಾವಣಾ ಆಯೋಗ 375.60 ಕೋಟಿ ರೂ. ಮೌಲ್ಯದ ನಗದು, ಮದ್ಯ, ಅಕ್ರಮ ವಸ್ತುಗಳನ್ನು ವಶಕ್ಕೆ ಪಡೆದಿದೆ. ಒಟ್ಟು 24.21 ಕೋಟಿ ರೂ. ಮೌಲ್ಯದ ಉಚಿತ ಉಡುಗೊರೆ, 83.66 ಕೋಟಿ ಮೌಲ್ಯದ ಒಟ್ಟು 22.27 ಲಕ್ಷ ಲೀಟರ್ ಮದ್ಯ, 23.66 ಕೋಟಿ ಮೌಲ್ಯದ 1,954 ಕೆಜಿ ಡ್ರಗ್ಸ್ ಹಾಗೂ 96.59 ಕೋಟಿ ಮೌಲ್ಯದ ಚಿನ್ನ, ಬೆಳ್ಳಿಯನ್ನು ಜಪ್ತಿ ಮಾಡಿದೆ. ವಿಚಕ್ಷಣ ದಳ, ಸ್ಥಿರ ಕಣ್ಗಾವಲು

ಅಬ್ಬಾ…! ಚುನಾವಣಾ ಅಕ್ರಮದಲ್ಲಿ ಕೋಟಿ ಕೋಟಿ ನಗ-ನಗದು ವಶಕ್ಕೆ ಪಡೆದ ಅಧಿಕಾರಿಗಳು| ಇಲ್ಲಿದೆ ಫುಲ್ ಡೀಟೈಲ್ಸ್… Read More »

ಸೇತುವೆಯಿಂದ ಉರುಳಿದ ಬಸ್; 14 ಮಂದಿ‌ ಸಾವು

ಸಮಗ್ರ ನ್ಯೂಸ್: ಬಸ್ಸೊಂದು ಸೇತುವೆಯಿಂದ ಉರುಳಿಬಿದ್ದು 14 ಮಂದಿ ಪ್ರಯಾಣಿಕರು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ ನಡೆದಿದೆ. ಸುಮಾರು 70-80 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು 50 ಅಡಿ ಸೇತುವೆಯಿಂದ ಬಿದ್ದು ದೊಡ್ಡ ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ 14 ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಆದರೆ ನಿಖರವಾದ ಸಂಖ್ಯೆ ಇನ್ನೂ ತಿಳಿದುಬಂದಿಲ್ಲ ಎಂದು ಜಿಲ್ಲಾಧಿಕಾರಿ ಶಿವರಾಜ್ ಸಿಂಗ್ ಹೇಳಿದ್ದಾರೆ. ಇಂದೋರ್ ಗೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಡೊಂಗರ್ಗಾಂವ್ ಪ್ರದೇಶದಲ್ಲಿ ಸೇತುವೆಯಿಂದ ಕೆಳಗೆ ಬಿದ್ದಿದೆ.

ಸೇತುವೆಯಿಂದ ಉರುಳಿದ ಬಸ್; 14 ಮಂದಿ‌ ಸಾವು Read More »

ಮೇ.10 ಕರ್ನಾಟಕದಲ್ಲಿ ಪ್ರಜಾಪ್ರಭುತ್ವದ ಹಬ್ಬ| 224 ಕ್ಷೇತ್ರಗಳ‌ ಮತದಾರರಿಗೆ ಇಲ್ಲಿದೆ ಪ್ರಮುಖ ಮಾಹಿತಿ

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭೆ ಚುನಾವಣೆಗೆ ಮೇ. 10 ರ ನಾಳೆ ಮತದಾನ ನಡೆಯಲಿದ್ದು, ಈಗಾಗಲೇ ಬಹಿರಂಗ ಪ್ರಚಾರಕ್ಕೆ ತೆರೆಬಿದ್ದಿದೆ. ಮೇ. 10 ರ ನಾಳೆ ರಾಜ್ಯಾದ್ಯಂತ ಒಂದೇ ಹಂತದಲ್ಲಿ 224 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, 1.56 ಲಕ್ಷ ಪೊಲೀಸರು ಬಿಗಿ ಭದ್ರತೆ ನಿಯೋಜಿಸಲಾಗಿದೆ. ಒಟ್ಟು 304 ಡಿವೈಎಸ್ ಪಿಗಳು, 991 ಪಿಐಗಳು, 2610 ಪಿಎಸ್ ಐಗಳು, 5803 ಎಎಸ್ ಐಗಳು,46, 421 ಪೊಲೀಸರು, 27,900 ಗೃಹ ರಕ್ಷಕರು ಸೇರಿದಂತೆ 84.119 ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.

ಮೇ.10 ಕರ್ನಾಟಕದಲ್ಲಿ ಪ್ರಜಾಪ್ರಭುತ್ವದ ಹಬ್ಬ| 224 ಕ್ಷೇತ್ರಗಳ‌ ಮತದಾರರಿಗೆ ಇಲ್ಲಿದೆ ಪ್ರಮುಖ ಮಾಹಿತಿ Read More »

Public holiday; ಕರ್ನಾಟಕ ವಿಧಾನಸಭಾ ಚುನಾವಣಾ ಹಿನ್ನಲೆ| ನಾಳೆ ಸಾರ್ವತ್ರಿಕ ರಜೆ ಘೋಷಣೆ

ಸಮಗ್ರ ನ್ಯೂಸ್: ಮೇ. 10 ಬುಧವಾರದಂದು ಕರ್ನಾಟಕ ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದೆ. ಅಂದು ಮತದಾನಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಎಲ್ಲಾ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಕಚೇರಿಗಳಿಗೆ, ಶಾಲಾ- ಕಾಲೇಜುಗಳಿಗೆ, ಸಂಘ-ಸಂಸ್ಥೆಗಳಿಗೆ ಹಾಗೂ ಖಾಸಗಿ ಸಂಸ್ಥೆಗಳಿಗೆ ಸಾರ್ವತ್ರಿಕ ರಜೆಯನ್ನು ಘೋಷಣೆ ಮಾಡಲಾಗಿದೆ. ಈ ಸಂಬಂಧ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಕರ್ನಾಟಕ ವಿಧಾನಸಭಾ ಚುನಾವಣೆಗೆ ಮೇ.10ರಂದು ಮತದಾನ ನಡೆಯಲಿದೆ. ಮತ ಚಲಾಯಿಸಲು ಅನುಕೂಲವಾಗುವಂತೆ ಆಯಾ ಮತ ಕ್ಷೇತ್ರಗಳ ಎಲ್ಲಾ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಕಚೇರಿಗಳಿಗೆ,

Public holiday; ಕರ್ನಾಟಕ ವಿಧಾನಸಭಾ ಚುನಾವಣಾ ಹಿನ್ನಲೆ| ನಾಳೆ ಸಾರ್ವತ್ರಿಕ ರಜೆ ಘೋಷಣೆ Read More »

ವಿಧಾನಸಭಾ ಚುನಾವಣೆಗೆ ಹಿಂದೆಂದೂ ಕಾಣದ ಭದ್ರತೆ| ಸುಸೂತ್ರ ಮತದಾನಕ್ಕೆ ಬಿಗಿ ಕ್ರಮ

ಸಮಗ್ರ ನ್ಯೂಸ್: 2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು ರಾಜ್ಯದೆಲ್ಲೆಡೆ ಶಾಂತಿಯುತ ಮತದಾನಕ್ಕಾಗಿ ಚುನಾವಣಾ ಆಯೋಗ ಮತ್ತು ಪೊಲೀಸ್ ಇಲಾಖೆ ಬಿಗಿ ಭದ್ರತೆ ಕ್ರಮಗಳನ್ನು ಕೈಗೊಂಡಿದೆ. ಈ ಕುರಿತು ಮಾಹಿತಿ ನೀಡಿರುವ ಕರ್ನಾಟಕ ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್, ವಿಧಾನಸಭೆ ಚುನಾವಣೆ ಹಿನ್ನೆಲೆ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ರಾಜ್ಯದಾದ್ಯಂತ ಒಟ್ಟು 1.60 ಲಕ್ಷ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಭದ್ರತಾ ಕಾರ್ಯದಲ್ಲಿ 304 ಡಿವೈಎಸ್‌ಪಿ, 991 ಪೊಲೀಸ್ ಸಬ್ ಇನ್ಸ್‌ಪೆಕ್ಟರ್, 2610

ವಿಧಾನಸಭಾ ಚುನಾವಣೆಗೆ ಹಿಂದೆಂದೂ ಕಾಣದ ಭದ್ರತೆ| ಸುಸೂತ್ರ ಮತದಾನಕ್ಕೆ ಬಿಗಿ ಕ್ರಮ Read More »

ಕೊನೆ ಓವರ್ ಗಳಲ್ಲಿ ಗೆಲುವಿನ ನಗೆಬೀರಿದ ಕೆಕೆಆರ್| ಮತ್ತೆ ಮಿಂಚಿದ ರಿಂಕುಸಿಂಗ್

ಸಮಗ್ರ ನ್ಯೂಸ್: ಈಡನ್‌ ಗಾರ್ಡನ್ಸ್‌ ಮೈದಾನದಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಪಂಜಾಬ್‌ ಕಿಂಗ್ಸ್‌ ತಂಡ ನಾಯಕ ಶಿಖರ್‌ ಧವನ್‌ (57ರನ್‌, 47 ಎಸೆತ, 9 ಬೌಂಡರಿ, 1 ಸಿಕ್ಸರ್‌) ಹಾಗೂ ಇನ್ನಿಂಗ್ಸ್‌ನ ಕೊನೆಯಲ್ಲಿ ಶಾರುಖ್‌ ಖಾನ್‌ (21 ರನ್‌, 8 ಎಸೆತ, 3 ಬೌಂಡರಿ, 1 ಸಿಕ್ಸರ್‌) ನೆರವಿನಿಂದ 7 ವಿಕೆಟ್‌ಗೆ 179 ರನ್‌ ಪೇರಿಸಿತು. ವರುಣ್‌ ಚಕ್ರವರ್ತಿ ತಮ್ಮ 4 ಓವರ್‌ಗಳ ಕೋಟಾದಲ್ಲಿ 26 ರನ್‌ಗೆ 3 ವಿಕೆಟ್‌

ಕೊನೆ ಓವರ್ ಗಳಲ್ಲಿ ಗೆಲುವಿನ ನಗೆಬೀರಿದ ಕೆಕೆಆರ್| ಮತ್ತೆ ಮಿಂಚಿದ ರಿಂಕುಸಿಂಗ್ Read More »

ರಾಜ್ಯದಲ್ಲಿ ಮೋಚಾ ಚಂಡಮಾರುತ ಅಬ್ಬರ| ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆ| ಇನ್ನೆರಡು ದಿನವೂ ಮುಂದುವರಿಯಲಿದೆ ವರ್ಷಧಾರೆ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಮೇ 10 ರಂದು ವಿಧಾನಸಭಾ ಚುನಾವಣೆ ನಡೆಯಲಿದೆ. ಆದರೆ ಮುಂದಿನ ಐದು ದಿನಗಳಲ್ಲಿ ಕರ್ನಾಟಕದ ರಾಜಧಾನಿ ಮತ್ತು ರಾಜ್ಯದ ಇತರ ಭಾಗಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ. ಹೀಗಾಗಿ ಮತದಾನದ ಪ್ರಮಾಣದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ತುಮಕೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಚಾಮರಾಜನಗರ, ರಾಮನಗರ, ಚನ್ನಪಟ್ಟಣ, ಕೋಲಾರ, ದೊಡ್ಡಬಳ್ಳಾಪುರ ಸೇರಿದಂತೆ

ರಾಜ್ಯದಲ್ಲಿ ಮೋಚಾ ಚಂಡಮಾರುತ ಅಬ್ಬರ| ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆ| ಇನ್ನೆರಡು ದಿನವೂ ಮುಂದುವರಿಯಲಿದೆ ವರ್ಷಧಾರೆ Read More »

ಐಎಎಸ್ ಅಧಿಕಾರಿ ಕೊಲೆ ಪ್ರಕರಣ; ಕೈದಿ ರಿಲೀಸ್ ಖಂಡಿಸಿ ಬಿಹಾರ ಸರ್ಕಾರಕ್ಕೆ ಸುಪ್ರೀಂ ನೋಟಿಸ್

ಸಮಗ್ರ ನ್ಯೂಸ್: ದರೋಡೆಕೋರ, ರಾಜಕಾರಣಿ ಆನಂದ್ ಮೋಹನ್ ಅವರನ್ನು ಅವಧಿಗೂ ಮುನ್ನವೇ ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು, ಸುಪ್ರೀಂ ಕೋರ್ಟ್ ಬಿಹಾರ ಸರ್ಕಾರಕ್ಕೆ ಮೇ 8ರಂದು ನೋಟಿಸ್ ಜಾರಿ ಮಾಡಿದೆ. ಸರಕಾರ ಎರಡು ವಾರಗಳಲ್ಲಿ ಉತ್ತರಿಸಬೇಕು ಎಂದು ನ್ಯಾಯಾಲಯಕ್ಕೆ ಎಚ್ಚರಿಕೆ ನೀಡಿದೆ. ಐಎಎಸ್ ಅಧಿಕಾರಿ ಜಿ ಕೃಷ್ಣಯ್ಯ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿದ್ದ ಆನಂದ್ ಮೋಹನ್‌ನನ್ನು ಬಿಹಾರ ಸರ್ಕಾರ ಇತ್ತೀಚೆಗೆ ಬಿಡುಗಡೆ ಮಾಡಿದ್ದನ್ನು ಪ್ರಶ್ನಿಸಿ ಕೃಷ್ಣಯ್ಯ ಪತ್ನಿ ಉಮಾ ಕೃಷ್ಣಯ್ಯ ಸುಪ್ರೀಂ ಕೋರ್ಟ್ಗೆ ಮನವಿ ಸಲ್ಲಿಸಿದ್ದರು. ನಿತೀಶ್

ಐಎಎಸ್ ಅಧಿಕಾರಿ ಕೊಲೆ ಪ್ರಕರಣ; ಕೈದಿ ರಿಲೀಸ್ ಖಂಡಿಸಿ ಬಿಹಾರ ಸರ್ಕಾರಕ್ಕೆ ಸುಪ್ರೀಂ ನೋಟಿಸ್ Read More »