May 2023

ಪುತ್ತೂರು: ಚುನಾವಣಾ ಹಿನ್ನೆಲೆಯಲ್ಲಿ ನಾಲ್ವರು ಹಿಂದೂ ಕಾರ್ಯಕರ್ತರ ಗಡಿಪಾರು

ಸಮಗ್ರ ನ್ಯೂಸ್: ಮೇ.10ರಂದು ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನಲೆಯಲ್ಲಿ ಕ್ರಿಮಿನಲ್ ಹಿನ್ನೆಲೆಯುಳ್ಳ ನಾಲ್ಕು ಮಂದಿಯನ್ನು ಪುತ್ತೂರಿನಿಂದ ಗಡಿಪಾರು ಮಾಡಲಾಗಿದೆ. ಹಿಂದೂ ಸಂಘಟನೆ ಕಾರ್ಯಕರ್ತರಾಗಿರುವ ಬನ್ನೂರು ಮೂಲದ ಪ್ರಜ್ವಲ್, ಪ್ರತಾಪ್, ಜಗ್ಗ ಯಾನೆ ಅಚ್ಚು, ಅವಿನಾಶ್ ಅವರು ಗಡಿಪಾರು ಆಗಿದ್ದಾರೆ. ಈ ನಾಲ್ಕು ಮಂದಿ ಚುನಾವಣೆಯ ಸಂದರ್ಭ ಶಾಂತಿ ಭಂಗ ಮಾಡಬಹುದೆಂಬ ನಿಟ್ಟಿನಲ್ಲಿ ನಗರ ಠಾಣೆಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಕೆಲವು ದಿನಗಳಿಂದ ಇವರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಬಳಗದಲ್ಲಿ ಗುರುತಿಸಿಕೊಂಡಿದ್ದರು. ಇದೇ ಕಾರಣದಿಂದ […]

ಪುತ್ತೂರು: ಚುನಾವಣಾ ಹಿನ್ನೆಲೆಯಲ್ಲಿ ನಾಲ್ವರು ಹಿಂದೂ ಕಾರ್ಯಕರ್ತರ ಗಡಿಪಾರು Read More »

ಕಡಬ: ನದಿಯಲ್ಲಿ ಮುಳುಗಿ ಸಹೋದರಿಯರಿಬ್ಬರು ದುರ್ಮರಣ| ಇಬ್ಬರ ಶವವೂ ಪತ್ತೆ; ಶೋಕಸಾಗರದಲ್ಲಿ ಕುಟುಂಬ

ಸಮಗ್ರ ನ್ಯೂಸ್: ರಜೆ ಅವಧಿಯಲ್ಲಿ ಕಾರ್ಯಕ್ರಮಕ್ಕೆ ಸಂಬಂಧಿಗಳ ಮನೆಗೆ ಬಂದಿದ್ದ ಸಹೋದರಿಯಬ್ಬರು ನದಿಯಲ್ಲಿ ಮುಳುಗಿ‌ ಸಾವನ್ನಪ್ಪಿದ ಘಟನೆ ಕಡಬ ತಾಲೂಕಿನ ಬಳ್ಪ ಸಮೀಪದ ಕೇನ್ಯ ಗ್ರಾಮದಲ್ಲಿ ನಡೆದಿದೆ. ಮೇ.8ರ ಸಂಜೆ ಈ ದುರ್ಘಟನೆ ಸಂಭವಿಸಿದ್ದು, ಮೂಲತಃ ಕಣ್ಕಲ್ ನವರಾಗಿದ್ದು ಬೆಂಗಳೂರಿನಲ್ಲಿ ಇಂಜಿನಿಯರ್ ಆಗಿರುವ ಸತೀಶ್ ಅಮ್ಮಣ್ಣಾಯ ಅವರ ಪುತ್ರಿಯರಾದ ಹಂಸಿತಾ ( 15 ) ಮತ್ತು ಅವಂತಿಕಾ ( 11 ) ಎಂಬ ಸಹೋದರಿಯರು ನೀರು ಪಾಲಾದ ದುರ್ದೈವಿಗಳು. ಸಹೋದರಿಯರು ನೀರುಪಾಲಾದ ಸುದ್ದಿ ತಿಳಿದು ಆಗಮಿಸಿದ ಅಗ್ನಿ

ಕಡಬ: ನದಿಯಲ್ಲಿ ಮುಳುಗಿ ಸಹೋದರಿಯರಿಬ್ಬರು ದುರ್ಮರಣ| ಇಬ್ಬರ ಶವವೂ ಪತ್ತೆ; ಶೋಕಸಾಗರದಲ್ಲಿ ಕುಟುಂಬ Read More »

ಸುಳ್ಯ: ವೋಟರ್ಸ್ ಸ್ಲಿಪ್ ಜೊತೆ ಬಿಜೆಪಿ ಕರಪತ್ರ ಹಂಚಿದರಾ ಬಿಎಲ್ಒಗಳು? ಸಮಗ್ರ ತನಿಖೆಗೆ ಚುನಾವಣಾಧಿಕಾರಿ ಆದೇಶ

ಸಮಗ್ರ ನ್ಯೂಸ್: ವೋಟರ್ಸ್ ಸ್ಲಿಪ್ ಅನ್ನು ಮತದಾರರ ಮನೆಗೆ ತಲುಪಿಸುವ ವೇಳೆ ಬಿಜೆಪಿ ಪಕ್ಷದ ಪ್ರಚಾರದ ಕರಪತ್ರವನ್ನು ಕೂಡ ಜತೆಗೆ ವಿತರಿಸಿದ್ದಾರೆ ಎಂದು ಆರೋಪ‌ ಕೇಳಿಬಂದಿದ್ದು ಬಿಎಲ್‌ಒಗಳಿಬ್ಬರ ಮೇಲೆ ತನಿಖೆ ನಡೆಸಲು ಸುಳ್ಯ ಚುನಾವಣಾಧಿಕಾರಿಗಳು ಆದೇಶಿಸಿದ್ದಾರೆ. ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಜಾಲ್ಸೂರು ಗ್ರಾಮದ ಎರಡು ಬೂತ್ ಗಳಲ್ಲಿ ಬಿ.ಜೆ.ಪಿ.ಯ ಪ್ರಚಾರ ಸಾಮಾಗ್ರಿಯನ್ನು ವೋಟರ್ಸ್ ಸ್ಲಿಪ್ ನೊಂದಿಗೆ ಕೊಟ್ಟಿರುವುದಾಗಿ ಹೇಳಲಾಗಿದ್ದು ಈ ಬಗ್ಗೆ ಚುನಾವಣಾಧಿಕಾರಿಗಳಿಗೆ ದೂರು ಬಂದಿದೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಚುನಾವಣಾಧಿಕಾರಿಗಳು

ಸುಳ್ಯ: ವೋಟರ್ಸ್ ಸ್ಲಿಪ್ ಜೊತೆ ಬಿಜೆಪಿ ಕರಪತ್ರ ಹಂಚಿದರಾ ಬಿಎಲ್ಒಗಳು? ಸಮಗ್ರ ತನಿಖೆಗೆ ಚುನಾವಣಾಧಿಕಾರಿ ಆದೇಶ Read More »

ಕಡಬ: ಕುಮಾರಧಾರಾದಲ್ಲಿ ಮುಳುಗಿ ಬಾಲಕಿಯರಿಬ್ಬರು ನೀರುಪಾಲು| ಒಬ್ಬಳ ಶವ ಪತ್ತೆ

ಸಮಗ್ರ ನ್ಯೂಸ್: ಸ್ನಾನಕ್ಕೆಂದು ತೆರಳಿದ್ದ ಇಬ್ಬರು ಬಾಲಕಿಯರು ನೀರಲ್ಲಿ ಮುಳುಗಿ ಕಣ್ಮರೆಯಾದ ಘಟನೆ ಕಡಬ ತಾಲೂಕಿನ ಕೇನ್ಯ ಎಂಬಲ್ಲಿ ನಡೆದಿದೆ. ಕೇನ್ಯ ಗ್ರಾಮದ ಕಣ್ಕಲ್ ಬಳಿಯ ಪಳ್ಳ ಎಂಬಲ್ಲಿ ಕುಮಾರಧಾರ ಹೊಳೆಯಲ್ಲಿ ಇಬ್ಬರು ಹೆಣ್ಣು ಮಕ್ಕಳು ಸಂಜೆ 4 ಗಂಟೆ ಸುಮಾರಿಗೆ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದರು. ಸ್ಥಳಕ್ಕೆ ಅಗ್ನಿ ಶಾಮಕ ದಳ ಸ್ಥಳಕ್ಕೆ ಆಗಮಿಸಿದ್ದು ಕಾಣೆಯಾದವರ ಪೈಕಿ ಒರ್ವ ಬಾಲಕಿಯ ಮೃತದೇಹ ಪತ್ತೆಯಾಗಿದ್ದು, ಸ್ಥಳಿಯರ ಸಹಕಾರದೊಂದಿಗೆ ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿದುಬಂದಿದೆ. ಬೆಂಗಳೂರಿನಲ್ಲಿ ನೆಲೆಸಿರುವ ಸತೀಶ್ ಅಮ್ಮಣ್ಣಾಯ

ಕಡಬ: ಕುಮಾರಧಾರಾದಲ್ಲಿ ಮುಳುಗಿ ಬಾಲಕಿಯರಿಬ್ಬರು ನೀರುಪಾಲು| ಒಬ್ಬಳ ಶವ ಪತ್ತೆ Read More »

ಬೆಳ್ತಂಗಡಿ: ರಸ್ತೆ ಬಿಟ್ಟು ಗುಡ್ಡಕ್ಕೆ ಡಿಕ್ಕಿ ಹೊಡೆದ ಬಸ್| ಮಹಿಳೆ ಸಾವು, ಐದು ಮಂದಿ‌ ಜಖಂ

ಖಾಸಗಿ ಬಸ್ಸೊಂದು ರಸ್ತೆ ಬದಿಯ ಬರೆಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಮೃತಪಟ್ಟು, ಐವರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ತಾಲೂಕಿನ ನಾವೂರು ಬಳಿ ನಡೆದಿದೆ. ಮೃತರನ್ನು ಇಂದಬೆಟ್ಟು ಗ್ರಾಮದ ಸುಂದರಿ (60) ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಪ್ರಯಾಣಿಕರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಬೆಳ್ತಂಗಡಿ: ರಸ್ತೆ ಬಿಟ್ಟು ಗುಡ್ಡಕ್ಕೆ ಡಿಕ್ಕಿ ಹೊಡೆದ ಬಸ್| ಮಹಿಳೆ ಸಾವು, ಐದು ಮಂದಿ‌ ಜಖಂ Read More »

‌ಮಂಗಳೂರು: ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಎಸ್ಡಿಪಿಐ ಕಾರ್ಯಕರ್ತನಿಂದ ಹಲ್ಲೆ| ಆರೋಪಿಯ ಬಂಧನ

ಸಮಗ್ರ ನ್ಯೂಸ್: ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಪಕ್ಷದ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ. ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನಾಟೆಕಲ್ನಲ್ಲಿ ಎಸ್ಡಿಪಿಐ ವಾಹನ ಮತ್ತು ಕಾಂಗ್ರೆಸ್ನ ಪ್ರಚಾರ ವಾಹನ ಮುಖಾಮುಖಿಯಾದ ವೇಳೆ ಎರಡು ಪಕ್ಷಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಎಸ್ಡಿಪಿಐ ಕಾರ್ಯಕರ್ತರು ಆಯೋಜಿಸಿದ್ದ ಬೈಕ್ ಮತ್ತು ರಿಕ್ಷಾ ರ್ಯಾಲಿಯಿಂದ ರಸ್ತೆ ಸಂಚಾರಕ್ಕೆ ಅಡ್ಡಿ ಉಂಟಾದ ಕಾರಣ

‌ಮಂಗಳೂರು: ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಎಸ್ಡಿಪಿಐ ಕಾರ್ಯಕರ್ತನಿಂದ ಹಲ್ಲೆ| ಆರೋಪಿಯ ಬಂಧನ Read More »

ತಾಂತ್ರಿಕ ದೋಷದಿಂದ ಮನೆ ಮೇಲೆ ಬಿದ್ದ ಮಿಗ್-21 ವಿಮಾನ| ಮೂವರು ಗ್ರಾಮಸ್ಥರು ಸಾವು

ಸಮಗ್ರ ನ್ಯೂಸ್: ಭಾರತೀಯ ವಾಯುಪಡೆಯ MiG-21 ಯುದ್ಧ ವಿಮಾನ ರಾಜಸ್ಥಾನದ ಹನುಮಾನ್‌ಗಢ ಬಳಿ ಪತನಗೊಂಡಿದೆ. ಇದು ಮನೆಯೊಂದರ ಮೇಲೆ ಬಿದ್ದ ಪರಿಣಾಮ ಮೂವರು ಗ್ರಾಮಸ್ಥರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಇನ್ನೂ, ವಿಮಾನ ಪೈಲೆಟ್‌ಗಳು ಸುರಕ್ಷಿತವಾಗಿದ್ದಾರೆ. ವಿಮಾನವು ಹನುಮಾನ್‌ಗಢ್ ಜಿಲ್ಲೆಯ ಪಿಲಿಬಂಗಾ ಬಳಿ ತಾಂತ್ರಿಕ ದೋಷದಿಂದಾಗಿ ಸೂರತ್‌ಗಢ ವಾಯುನೆಲೆಯಿಂದ ಟೇಕ್ ಆಫ್ ಆದ ಕೆಲವೇ ಹೊತ್ತಲ್ಲಿ ಪತನಗೊಂಡಿದೆ. ಪೈಲಟ್ ಮತ್ತು ಸಹ ಪೈಲಟ್ ಸಕಾಲದಲ್ಲಿ ವಿಮಾನದಿಂದ ಜಿಗಿದರು ಮತ್ತು ಪ್ಯಾರಾಚೂಟ್ ಸಹಾಯದಿಂದ ಡ್ರೈನ್ ಪ್ರದೇಶದಲ್ಲಿ ಸುರಕ್ಷಿತವಾಗಿ ಇಳಿದಿದ್ದಾರೆ.

ತಾಂತ್ರಿಕ ದೋಷದಿಂದ ಮನೆ ಮೇಲೆ ಬಿದ್ದ ಮಿಗ್-21 ವಿಮಾನ| ಮೂವರು ಗ್ರಾಮಸ್ಥರು ಸಾವು Read More »

SSLC ಫಲಿತಾಂಶ ಪ್ರಕಟ| ಈ ಬಾರಿ 83.89 ರಷ್ಟು ವಿದ್ಯಾರ್ಥಿಗಳು ಪಾಸ್

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭಾ ಚುನಾವಣಾ ಭರದಲ್ಲಿಯೇ ಪ್ರೌಢ ಶಿಕ್ಷಣ ಪರೀಕ್ಷಾ ಮಂಗಳ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಿದ್ದು ಈ ಬಾರಿ ಶೇ.83.89 ರಷ್ಟು ಫಲಿತಾಂಶ ಲಭ್ಯವಾಗಿದೆ. SSLC ಪರೀಕ್ಷೆಗಳನ್ನು 2023 ಮಾರ್ಚ್ 31 ರಿಂದ ಏಪ್ರಿಲ್ 15ರವರೆಗೆ ಕೈಗೊಳ್ಳಲಾಗಿದ್ದು ಒಟ್ಟು ರಾಜ್ಯದ 15,498 ಪ್ರೌಢಶಾಲೆಗಳ 8.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದರು. ರಾಜ್ಯಾದ್ಯಂತ ಒಟ್ಟು 3,305 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದಿದ್ದವು. ಪರೀಕ್ಷೆ ಬರೆದವರಲ್ಲಿ 700619 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದು, ನಾಲ್ಕು

SSLC ಫಲಿತಾಂಶ ಪ್ರಕಟ| ಈ ಬಾರಿ 83.89 ರಷ್ಟು ವಿದ್ಯಾರ್ಥಿಗಳು ಪಾಸ್ Read More »

ಕೇರಳ: ಪ್ರವಾಸಿಗರಿದ್ದ ಬೋಟ್ ಮುಳುಗಿ ಮಕ್ಕಳು ಸೇರಿದಂತೆ 22 ಮಂದಿ ಸಾವು…!!

Samagra news: ಪ್ರವಾಸಿಗರಿದ್ದ ಬೋಟ್ ಒಂದು ಮುಳುಗಿ 22 ಮಂದಿ ಸಾವನಪ್ಪಿ ಘಟನೆ ಕೇರಳದಲ್ಲಿ ಮಲಪ್ಪುರಂನಲ್ಲಿ ಸಂಭವಿಸಿದೆ. ಕೇರಳದ ಮಲಪ್ಪುರಂನ ತನೂರ್‌ ಪ್ರದೇಶದಲ್ಲಿ ಈ ಘಟನೆ ನಡೆದಿದೆ. 40 ಪ್ರಯಾಣಿಕರು ದೋಣಿಯಲ್ಲಿ ಇದ್ದರು. ಘಟನೆಯ ವೇಳೆ ದೋಣಿಯಡಿ ಇನ್ನಷ್ಟು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಮಗುಚಿ ಬಿದ್ದ ದೋಣಿಯನ್ನು ದಡಕ್ಕೆ ತರುವ ಪ್ರಯತ್ನ ನಡೆಯುತ್ತಿದೆ. ಅಪಘಾತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಹಿನ್ನೆಲೆಯಲ್ಲಿ ತನಿಖೆ ನಡೆಯುತ್ತಿದೆ. ಸದ್ಯ ಸಾವಿನ ಸಂಖ್ಯೆ ಈಗ 22ಕ್ಕೆ ಏರಿದೆ.

ಕೇರಳ: ಪ್ರವಾಸಿಗರಿದ್ದ ಬೋಟ್ ಮುಳುಗಿ ಮಕ್ಕಳು ಸೇರಿದಂತೆ 22 ಮಂದಿ ಸಾವು…!! Read More »

ಮದ್ಯಪ್ರಿಯರಿಗೆ ಬಿಗ್ ಶಾಕ್| ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಎಣ್ಣೆ ಸಿಗಲ್ಲ

ಸಮಗ್ರ ನ್ಯೂಸ್: ವಿಧಾನಸಭೆ ಚುನಾವಣೆ ಮತ್ತು ಮತ ಎಣಿಕೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 3 ದಿನ ಮದ್ಯ ಮಾರಾಟ ಬಂದ್ ಆಗಲಿದೆ. ಎಲ್ಲೆಡೆ ಮದ್ಯಕ್ಕೆ ಭಾರಿ ಬೇಡಿಕೆ ಕಂಡು ಬಂದಿದೆ. ಮದ್ಯ ಮಾರಾಟ ಮಳಿಗೆಗಳಲ್ಲಿ ಭಾನುವಾರ ಖರೀದಿ ಭರಾಟೆ ಜೋರಾಗಿತ್ತು. ಸೋಮವಾರ ಸಂಜೆ 5 ಗಂಟೆಯಿಂದ ಮದ್ಯ ಮಾರಾಟ ಮತ್ತು ಸಾಗಾಣಿಕೆಗೆ ನಿಷೇಧ ಹೇರಲಾಗಿದೆ. ಮೇ 9, 10, 13 ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್ ಆಗಲಿದೆ. ಮತದಾನ ಮುಕ್ತಾಯಕ್ಕೆ ನಿಗದಿಪಡಿಸಿದ ದಿನಾಂಕದ 48 ಗಂಟೆಗಳ ಮೊದಲ

ಮದ್ಯಪ್ರಿಯರಿಗೆ ಬಿಗ್ ಶಾಕ್| ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಎಣ್ಣೆ ಸಿಗಲ್ಲ Read More »