May 2023

‘ಕುಸ್ತಿಪಟುಗಳ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಸಾಬೀತಾದರೆ ನೇಣಿಗೆ ಶರಣು’ | ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಸವಾಲು

ಸಮಗ್ರ ನ್ಯೂಸ್: ಕುಸ್ತಿಪಟುಗಳು ಹಾಗೂ ಭಾರತೀಯ ಕುಸ್ತಿ ಫೆಡರೇಶನ್‌(ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್‌ಭೂಷಣ್‌ ಸಿಂಗ್‌ ನಡುವಿನ ಹಗ್ಗಜಗ್ಗಾಟ ಕೊನೆಗೊಳ್ಳುವಂತೆ ಕಾಣುತ್ತಿಲ್ಲ. ಸವಾಲು-ಪ್ರತಿಸವಾಲು ಮುಂದುವರಿಯುತ್ತಿದ್ದು, ಇದೀಗ ಭೂಷಣ್‌ ವಿಡಿಯೋ ಸಂದೇಶವೊಂದರ ಮೂಲಕ ಮತ್ತೊಂದು ಸವಾಲು ಹಾಕಿದ್ದಾರೆ. ಭಾನುವಾರ ವಿಡಿಯೋವೊಂದನ್ನು ಹರಿಬಿಟ್ಟಿರುವ ಭೂಷಣ್‌, ‘ಪ್ರತಿಭಟನಾ ನಿರತ ಕುಸ್ತಿಪಟುಗಳು ತಾವು ಮಾಡಿರುವ ಆರೋಪಗಳ ಪೈಕಿ ಒಂದೇ ಒಂದು ಆರೋಪವನ್ನು ಸಾಬೀತು ಮಾಡಲಿ ಸಾಕು. ನಾನು ನೇಣು ಬಿಗಿದುಕೊಳ್ಳುತ್ತೇನೆ’ ಎಂದಿದ್ದಾರೆ. ‘ಪ್ರಕರಣವನ್ನು ದೆಹಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹೀಗಾಗಿ ಹೆಚ್ಚಿಗೆ ಮಾತನಾಡುವುದಿಲ್ಲ. ಕಳೆದ 11 […]

‘ಕುಸ್ತಿಪಟುಗಳ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಸಾಬೀತಾದರೆ ನೇಣಿಗೆ ಶರಣು’ | ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಸವಾಲು Read More »

ಬಿಜೆಪಿಗೆ ಮತ ಹಾಕದಿದ್ದರೆ ಕೇಂದ್ರದ ಯೋಜನೆಗಳಿಗೆ ಬ್ರೇಕ್| ಜೆ.ಪಿ ನಡ್ಡಾ ಹೇಳಿಕೆಗೆ ಕಾಂಗ್ರೆಸ್ ನಿಂದ ತೀವ್ರ ಆಕ್ಷೇಪ

ಸಮಗ್ರ ನ್ಯೂಸ್: ‘ರಾಜ್ಯದಲ್ಲಿ ಡಬಲ್‌ ಎಂಜಿನ್‌ ಸರ್ಕಾರ ಮುಂದುವರಿದರೆ ಕೇಂದ್ರದ ಯೋಜನೆಗಳು ಮುಂದುವರಿಯುತ್ತವೆ. ಒಂದು ವೇಳೆ ಸಿದ್ದರಾಮಯ್ಯನವರ ಸರ್ಕಾರ ಬಂದರೆ ಅವುಗಳಿಗೆ ಬ್ರೇಕ್‌ ಬೀಳುತ್ತದೆ’ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಹೇಳಿದರು. ಹರಪನಹಳ್ಳಿ ಹಾಗೂ ಕೂಡ್ಲಿಗಿ ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಭಾನುವಾರ ಮತಯಾಚಿಸಿ ಮಾತನಾಡಿದ ಅವರು, ‘ಡಬಲ್‌ ಎಂಜಿನ್‌ ಸರ್ಕಾರ ಮುಂದುವರಿದರೆ ಪ್ರಧಾನ ಮಂತ್ರಿ ಆವಾಸ್‌ ಯೋಜನೆ, ಪ್ರಧಾನ ಮಂತ್ರಿ ಗರೀಬ್‌ ಅನ್ನ ಕಲ್ಯಾಣ ಯೋಜನೆ, ಪ್ರಧಾನ ಮಂತ್ರಿ ಉಜ್ವಲ ಯೋಜನೆಯ

ಬಿಜೆಪಿಗೆ ಮತ ಹಾಕದಿದ್ದರೆ ಕೇಂದ್ರದ ಯೋಜನೆಗಳಿಗೆ ಬ್ರೇಕ್| ಜೆ.ಪಿ ನಡ್ಡಾ ಹೇಳಿಕೆಗೆ ಕಾಂಗ್ರೆಸ್ ನಿಂದ ತೀವ್ರ ಆಕ್ಷೇಪ Read More »

ಕಾಂಗೋ: ಪ್ರವಾಹ, ಭೂಕುಸಿತಕ್ಕೆ 400 ಮಂದಿ ಸಾವು

ಸಮಗ್ರ ನ್ಯೂಸ್: ಕಾಂಗೊದ ಪೂರ್ವಭಾಗದಲ್ಲಿ ಸಂಭವಿಸಿರುವ ಹಠಾತ್ ಪ್ರವಾಹ ಮತ್ತು ಭೂಕುಸಿತದ ಅವಘಡದಿಂದಾಗಿ ಸುಮಾರು 400 ಜನರು ಮೃತಪಟ್ಟಿದ್ದಾರೆ. ಹಲವರು ನಾಪತ್ತೆಯಾಗಿದ್ದಾರೆ. 394 ಜನರ ಶವ ಪತ್ತೆಯಾಗಿದೆ. ನಾಪತ್ತೆಯಾದವರಿಗೆ ಶೋಧ ಮುಂದುವರಿದಿದೆ. ನ್ಯಾಮುಕುಬಿ ಗ್ರಾಮದಲ್ಲಿ ನೂರಾರು ಮನೆಗಳು ಪ್ರವಾಹದಲ್ಲಿ ಕೊಚ್ಚಿಹೋಗಿವೆ. ಸಿಕ್ಕಿ ಉಳಿದಿರುವವರ ರಕ್ಷಣೆಗೆ ಅವಶೇಷಗಳ ನಡುವೆ ತೀವ್ರ ಹುಡುಕಾಟ ನಡೆದಿದೆ. ಮಣ್ಣಿನಡಿಯೂ ಹಲವರು ಸಿಲುಕಿರುವ ಸಾಧ್ಯತೆಗಳಿವೆ. ಧಾರಾಕಾರ ಮಳೆಯಿಂದಾಗಿ ನದಿ ಉಕ್ಕಿ ಹರಿದಿದ್ದು, ನದಿಪಾತ್ರದಲ್ಲಿದ್ದ ಗ್ರಾಮಗಳು ತೀವ್ರ ಪರಿಣಾಮಕ್ಕೆ ತುತ್ತಾಗಿವೆ. ಏನಾಗುತ್ತಿದೆ ಎಂದು ತಿಳಿಯುವಷ್ಟರಲ್ಲಿ ಪ್ರವಾಹ

ಕಾಂಗೋ: ಪ್ರವಾಹ, ಭೂಕುಸಿತಕ್ಕೆ 400 ಮಂದಿ ಸಾವು Read More »

ಮೋಚಾ ಚಂಡಮಾರುತ ಪರಿಣಾಮ| ಮೇ.13ರವರೆಗೂ ರಾಜ್ಯದ ಹಲವೆಡೆ ವ್ಯಾಪಕ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಮೇ 13 ರವರೆಗೆ ಭಾರಿ ಮಳೆಯಾಗಲಿದೆ. ಚಂಡಮಾರುತ ಪರಿಣಾಮ ಮುಂದಿನ 5 ದಿನ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗದಲ್ಲಿ ಮೇ 11 ಮತ್ತು ಮೇ 12ರಂದು ಬಿರುಸಾಗಿ ಮಳೆ ಸುರಿಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ರಾಜ್ಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ತಮಿಳುನಾಡಿನ ಕರಾವಳಿ ಸಮೀಪದ ಬಂಗಾಳಕೊಲ್ಲಿಯ ನೈಋತ್ಯ ಭಾಗದಲ್ಲಿ

ಮೋಚಾ ಚಂಡಮಾರುತ ಪರಿಣಾಮ| ಮೇ.13ರವರೆಗೂ ರಾಜ್ಯದ ಹಲವೆಡೆ ವ್ಯಾಪಕ ಮಳೆ ಸಾಧ್ಯತೆ Read More »

ರಜೆ ನೀಡಿಯೂ ಮತದಾನ ಮಾಡದವರಿಗೆ ಪ್ರವಾಸಿ ತಾಣಗಳಿಗೆ ನೋ ಎಂಟ್ರಿ!!

ಸಮಗ್ರ ನ್ಯೂಸ್: ಮೇ.10ರಂದು ರಾಜ್ಯ ವಿಧಾನಸಭಾ ಚುನಾವಣೆ ಮತದಾನ ನಡೆಯಲಿದೆ. ಮತದಾನಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಈಗಾಗಲೇ ಸರ್ಕಾರ ಎಲ್ಲಾ ನೌಕರರಿಗೆ ಸಾರ್ವತ್ರಿಕ ರಜೆಯನ್ನು ನೀಡಿ ಆದೇಶಿಸಿದೆ. ಇದೇ ವೇಳೆಯಲ್ಲಿ ಮತದಾನದ ಮಹತ್ವವವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಚುನಾವಣಾ ಆಯೋಗದಿಂದ ಸೂಕ್ತ ನಿರ್ದೇಶನವನ್ನು ಜಿಲ್ಲಾಡಳಿತಕ್ಕೆ ನೀಡಲಾಗಿದೆ. ಈ ಹಿನ್ನಲೆಯಲ್ಲಿ ಮಂಡ್ಯ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಮತದಾನ ಮಾಡದವರಿಗೆ ನಿರ್ಬಂಧಿಸಿ ಜಿಲ್ಲಾಡಳಿತ ಆದೇಶಿಸಿದೆ. ಮೇ.10ರಂದು ಮಂಡ್ಯ ಜಿಲ್ಲೆಯ ಪ್ರವಾಸಿ ತಾಣಗಳಾದಂತ ಕೆ ಆರ್ ಎಸ್, ಬೃಂದಾವನ ಗಾರ್ಡನ್, ಮುತ್ತತ್ತಿ, ಶಿವನಸಮುದ್ರ, ರಂಗನತಿಟ್ಟು,

ರಜೆ ನೀಡಿಯೂ ಮತದಾನ ಮಾಡದವರಿಗೆ ಪ್ರವಾಸಿ ತಾಣಗಳಿಗೆ ನೋ ಎಂಟ್ರಿ!! Read More »

ಭಜರಂಗದಳ ಭಜರಂಗಬಲಿ ಆಗಿದ್ದೇಗೆ? ಚುನಾವಣಾ ಸಮಯದಲ್ಲಿ ಅಚ್ಚರಿಯ ಬದಲಾವಣೆ ಕುರಿತು ಕಾಂಗ್ರೆಸ್ ಪ್ರಶ್ನೆ

ಸಮಗ್ರ ನ್ಯೂಸ್: ಕಾಂಗ್ರೆಸ್ ಪಕ್ಷದ ಬಜರಂಗದಳ ಸಂಘಟನೆ ನಿಷೇಧ ವಿಚಾರವಾಗಿ ಬಿಜೆಪಿ ಆಕ್ರೋಶ ಭರಿತ ಪ್ರಚಾರ ಮುಂದುವರೆದಿರುವಂತೆ ಇದಕ್ಕೆ ತಿರುಗೇಟು ನೀಡಿರುವ ಮಾಜಿ ಕೇಂದ್ರ ಸಚಿವ ಮತ್ತು ಹಿರಿಯ ಕಾಂಗ್ರೆಸ್ ನಾಯಪ ಪಿ ಚಿದಂಬರಂ ಬಜರಂಗದಳ ‘ಬಜರಂಗಬಲಿ’ ಆಗಿದ್ದೇಗೆ? ಎಂದು ಪ್ರಶ್ನಿಸಿದ್ದಾರೆ. ರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ‘ನಮ್ಮ ಪಕ್ಷವು ಕರ್ನಾಟಕ ವಿಧಾನಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಬಜರಂಗದಳ ಸಂಘಟನೆ ನಿಷೇಧಿಸುವುದಾಗಿ ಹೇಳಿಲ್ಲ. ಆದರೆ, ದ್ವೇಷ ಬಿತ್ತುವ ಎಲ್ಲ ಸಂಘಟನೆಗಳಿಗೆ ಎಚ್ಚರಿಕೆ

ಭಜರಂಗದಳ ಭಜರಂಗಬಲಿ ಆಗಿದ್ದೇಗೆ? ಚುನಾವಣಾ ಸಮಯದಲ್ಲಿ ಅಚ್ಚರಿಯ ಬದಲಾವಣೆ ಕುರಿತು ಕಾಂಗ್ರೆಸ್ ಪ್ರಶ್ನೆ Read More »

ಕೇರಳದ ಮಲಪ್ಪುರಂನಲ್ಲಿ ಬೋಟ್ ಪಲ್ಟಿ| ಮಹಿಳೆಯರು, ಮಕ್ಕಳು ಸೇರಿ‌ ‌21 ಮಂದಿ ದುರ್ಮರಣ

ಸಮಗ್ರ ನ್ಯೂಸ್: ಕೇರಳದ ಮಲಪ್ಪುರಂ ಜಿಲ್ಲೆಯ ತನೂರ್ ಪ್ರದೇಶದ ತುವಲ್ತಿರಾಮ್ ಬೀಚ್ ಬಳಿ ಭಾನುವಾರ ಸಂಜೆ ಸುಮಾರು 30 ಪ್ರಯಾಣಿಕರಿದ್ದ ಹೌಸ್ ಬೋಟ್ ಪಲ್ಟಿಯಾಗಿ ಮುಳುಗಿದ್ದು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸುಮಾರು 21 ಮಂದಿ ಸಾವನ್ನಪ್ಪಿದ್ದಾರೆ. ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ತನೂರ್ ಕರಾವಳಿ ಬಳಿ ಪ್ರವಾಸಿ ದೋಣಿ ಮಗುಚಿ ಬಿದ್ದಿದೆ. ಈ ಘಟನೆ ಸಂಜೆ 7 ಗಂಟೆ ಸುಮಾರಿಗೆ ನಡೆದಿದೆ. ದೋಣಿಯಲ್ಲಿದ್ದವರೆಲ್ಲರೂ ಪ್ರವಾಸಿಗರಾಗಿದ್ದಾರೆ. ಈ ಘಟನೆಯಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿರುವ ಪ್ರಧಾನಿ

ಕೇರಳದ ಮಲಪ್ಪುರಂನಲ್ಲಿ ಬೋಟ್ ಪಲ್ಟಿ| ಮಹಿಳೆಯರು, ಮಕ್ಕಳು ಸೇರಿ‌ ‌21 ಮಂದಿ ದುರ್ಮರಣ Read More »

ಮಂಗಳೂರು ಆರ್ ಎಸ್ಎಸ್ ನ ಬಹುದೊಡ್ಡ ವಿಕೆಟ್ ಪತನ| ಬಿಜೆಪಿ ತೊರೆದು ಕಾಂಗ್ರೆಸ್ ಕೈ ಹಿಡಿದ ಸತೀಶ್ ಪ್ರಭು

ಸಮಗ್ರ ನ್ಯೂಸ್: ಬಿಜೆಪಿಯ ಹಿರಿಯ ಮುಖಂಡ ಮಾಜಿ ನಗರಾಧ್ಯಕ್ಷ ಸತೀಶ್‌ ಪ್ರಭು ಇಂದು ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ. ಈ ಹಿಂದೆ ಬಿಜೆಪಿಯಲ್ಲಿ ಹಲವು ಹುದ್ದೆಗಳನ್ನು ನಿಭಾಯಿಸಿದ ಸಂಘಟನಾ ಚತುರ ಇಂದು ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಹರೀಶ್‌ ಕುಮಾರ್‌, ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಜೆ.ಆರ್‌ ಲೋಬೋ, ಮಾಜಿ ಮೇಯರ್‌ ಶಶಿಧರ್‌ ಹೆಗ್ಡೆ ಸೇರಿದಂತೆ ಹಲವು ಹಿರಿಯ ನಾಯಕರ ಸಮ್ಮುಖದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಸೇರ್ಪಡೆಯಾದರು. ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಇತ್ತೀಚೆಗೆ ಬಿಜೆಪಿ ಜನಹಿತ ಸಾಧನೆ ಅಸಾಧ್ಯ ಎಂಬುವುದನ್ನು ಮನಗಂಡಿದ್ದೇನೆ.

ಮಂಗಳೂರು ಆರ್ ಎಸ್ಎಸ್ ನ ಬಹುದೊಡ್ಡ ವಿಕೆಟ್ ಪತನ| ಬಿಜೆಪಿ ತೊರೆದು ಕಾಂಗ್ರೆಸ್ ಕೈ ಹಿಡಿದ ಸತೀಶ್ ಪ್ರಭು Read More »

ಗರ್ಲ್​ಫ್ರೆಂಡ್​ ಜತೆಗಿದ್ದರೂ ಮತ್ತೊಂದು ಯುವತಿಯ ಮೇಲೆ ಕಾಮದಾಸೆ; ಆರೋಪಿ ಜೈಲಿಗೆ

ಸಮಗ್ರ ನ್ಯೂಸ್: ಬಸ್ ನಲ್ಲಿ ಯುವತಿಯ ಜೊತೆ ಅಸಭ್ಯವಾಗಿ ವರ್ತಿಸಿದ್ದಕ್ಕೆ‌ ಡ್ರೈವರ್​ ಮತ್ತು ಕಂಡಕ್ಟರ್​ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಪುದುಚೇರಿಯಲ್ಲಿ ನಡೆದಿದೆ. ಸಂತ್ರಸ್ತೆಯು ತಮಿಳುನಾಡಿನ ತಿಂಡಿವನಂ ಮೂಲದವಳು. ಆರೋಪಿಯನ್ನು ಶರತ್​ ಎಂದು ಗುರುತಿಸಲಾಗಿದೆ. ಆರೋಪಿ ಶರತ್​ ತನ್ನ ಗರ್ಲ್​ಫ್ರೆಂಡ್​ ಜತೆ ಬಸ್​ ಏರಿದ್ದು ಬಳಿಕ ಆಕೆಯನ್ನು ಮಲಗಿಕೊಂಡಿದ್ದಾಳೆ. ಈ ವೇಳೆ ಸಂತ್ರಸ್ತೆ ಬೆಂಗಳೂರಿಗೆ ತಲುಪಲು ಪುದುಚೇರಿಯಿಂದ ಸ್ಲೀಪರ್​ ಕೋಚ್​ ಬಸ್​ ಏರಿದ್ದಳು. ಬಸ್​ ಸ್ವಲ್ಪ ದೂರ ಪ್ರಯಾಣಿಸಿದ ಕೂಡಲೇ ಹಿಂದಿನ ಸೀಟಿನಲ್ಲಿದ ಶರತ್​ ಮೈಮುಟ್ಟಲು ಶುರು ಮಾಡಿದ.

ಗರ್ಲ್​ಫ್ರೆಂಡ್​ ಜತೆಗಿದ್ದರೂ ಮತ್ತೊಂದು ಯುವತಿಯ ಮೇಲೆ ಕಾಮದಾಸೆ; ಆರೋಪಿ ಜೈಲಿಗೆ Read More »

ಕರ್ನಾಟಕ ವಿಧಾನಸಭಾ ಚುನಾವಣೆ| ಇಂದು(ಮೇ.8) ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ

ಸಮಗ್ರ ನ್ಯೂಸ್: ಮೇ. 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆ ಬಹಿರಂಗ ಪ್ರಚಾರಕ್ಕೆ ಮೇ.8ರ ಸಂಜೆ ತೆರೆ ಬೀಳಲಿದೆ. ಬಹಿರಂಗ ಪ್ರಚಾರ ಅಂತ್ಯಗೊಂಡ ನಂತರ ಮತದಾರರಲ್ಲದವರು ಆ ಕ್ಷೇತ್ರಗಳನ್ನು ಬಿಟ್ಟು ತೆರಳಬೇಕಿದ್ದು, ಸ್ಟಾರ್ ಪ್ರಚಾರಕರು ಕ್ಷೇತ್ರಗಳಲ್ಲಿ ಉಳಿಯುವಂತಿಲ್ಲ. ಆಯಾ ಕ್ಷೇತ್ರಗಳ ಮಟ್ಟಪಟ್ಟಿಯಲ್ಲಿ ಹೆಸರಿಲ್ಲದ ರಾಜಕೀಯ ನಾಯಕರುಗಳೂ ಸೇರಿದಂತೆ ಎಲ್ಲಾ ಮುಖಂಡರು ಜಾಗ ಖಾಲಿ ಮಾಡಬೇಕು ಎಂದು ಚುನಾವಣಾ ಆಯೋಗ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಮತದಾನ ಮುಕ್ತಾಯದ 48 ಗಂಟೆಗೂ ಮುನ್ನ ಬಹಿರಂಗ ಪ್ರಚಾರ ಅಂತ್ಯವಾಗಲಿದೆ. ಅದರಂತೆ

ಕರ್ನಾಟಕ ವಿಧಾನಸಭಾ ಚುನಾವಣೆ| ಇಂದು(ಮೇ.8) ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ Read More »