May 2023

ಹವಾಮಾನ ವರದಿ: ರಾಜ್ಯದಲ್ಲಿ ಮೇ.8ರಿಂದ ಚುರುಕಾಗಲಿದೆ ಮಳೆ

ಸಮಗ್ರ ನ್ಯೂಸ್: ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮೇ 8ರಿಂದ ಚುರುಕು ಪಡೆಯಲಿದೆ. ಶುಕ್ರವಾರ ಬಳ್ಳಾರಿ ಜಿಲ್ಲೆಯ ಹಗರಿ, ತುಮಕೂರಿನ ಮಿಡಿಗೇಶಿ, ಕಲಬುರಗಿಯ ಚಿತ್ತಾಪುರ, ಬೆಂಗಳೂರು ನಗರದ ಜ್ಞಾನಭಾರತಿ ವಿವಿ ಕ್ಯಾಂಪಸ್, ಬಳ್ಳಾರಿಯ ಕುರುಗೋಡು, ಕೋಲಾರ ಹಾಗೂ ರಾಮನಗರ ಸೇರಿ ರಾಜ್ಯದ ಹಲವೆಡೆ ಮುಂಗಾರು ಪೂರ್ವ ಮಳೆ ಬಿದ್ದಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಒಳನಾಡಿನ ಕಲಬುರಗಿ, ರಾಯಚೂರು, ಯಾದಗಿರಿ, ಬೀದರ್, ವಿಜಯಪುರ ಜಿಲ್ಲೆಯ ಒಂದೆರಡು ಕಡೆ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಮತ್ತು ಉತ್ತರ […]

ಹವಾಮಾನ ವರದಿ: ರಾಜ್ಯದಲ್ಲಿ ಮೇ.8ರಿಂದ ಚುರುಕಾಗಲಿದೆ ಮಳೆ Read More »

ನೀಟ್ ಪರೀಕ್ಷೆ ನಡುವೆ ಪ್ರಧಾನಿ ಮೋದಿ ರೋಡ್ ಶೋ| ಪರೀಕ್ಷಾರ್ಥಿಗಳಿಗೆ ತೊಂದರೆ ಹಿನ್ನಲೆ ಸಮಯ ಬದಲಾವಣೆಗೆ ಹೆಚ್ ಡಿಕೆ ಆಗ್ರಹ

ಸಮಗ್ರ ನ್ಯೂಸ್: ಇದೇ 7ರಂದು ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣೆಗಾಗಿ ಹಮ್ಮಿಕೊಂಡಿರುವ ರೋಡ್ ಶೋದಿಂದ ನೀಟ್ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗಲಿದೆ. ಈ ಕಾರಣಕ್ಕೆ ಪ್ರಧಾನಿಗಳು ರೋಡ್ ಶೋ ವೇಳಾಪಟ್ಟಿಯನ್ನು ಬದಲಿಸಿಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಭಾನುವಾರ ನೀಟ್ ಪರೀಕ್ಷೆಯ ( NEET Exam ) ನಡುವೆಯೂ ಪ್ರಧಾನಿ ಮೋದಿ ರೋಡ್ ಶೋ ವಿಚಾರದ ಬಗ್ಗೆ ವಿದ್ಯಾರ್ಥಿಗಳ ಪೋಷಕರು ಹಾಗೂ ಸಾರ್ವಜನಿಕರಿಂದ ಬರುತ್ತಿರುವ

ನೀಟ್ ಪರೀಕ್ಷೆ ನಡುವೆ ಪ್ರಧಾನಿ ಮೋದಿ ರೋಡ್ ಶೋ| ಪರೀಕ್ಷಾರ್ಥಿಗಳಿಗೆ ತೊಂದರೆ ಹಿನ್ನಲೆ ಸಮಯ ಬದಲಾವಣೆಗೆ ಹೆಚ್ ಡಿಕೆ ಆಗ್ರಹ Read More »

ಮತ್ತೊಂದು ಇತಿಹಾಸ ಸೃಷ್ಟಿಸಿದ ನೀರಜ್ ಚೋಪ್ರಾ| ದೋಹಾ ಡೈಮಂಡ್ ಲೀಗ್ ಪ್ರಶಸ್ತಿಗೆ ಮುತ್ತಿಕ್ಕಿದ‌ ಚಿನ್ನದ ಹುಡುಗ

ಸಮಗ್ರ ನ್ಯೂಸ್: ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಶುಕ್ರವಾರ ದೋಹಾದಲ್ಲಿ ನಡೆದ ಡೈಮಂಡ್ ಲೀಗ್‌ನಲ್ಲಿ ಜಾವೆಲಿನ್‌ ಅನ್ನು 88.67 ಮೀಟರ್‌ ದೂರಕ್ಕೆ ಎಸೆಯುವ ಮೂಲಕ ದೋಹಾ ಡೈಮಂಡ್ ಲೀಗ್ 2023 ಪ್ರಶಸ್ತಿಯನ್ನು ಗೆದ್ದಿದ್ದಾರೆ. ದೋಹಾದ ಕತಾರ್ ಸ್ಪೋರ್ಟ್ಸ್ ಕ್ಲಬ್ ನಲ್ಲಿ ನಡೆದ ಸ್ಪರ್ಧೆಯಲ್ಲಿ ನೀರಜ್ ಮೊದಲ ಪ್ರಯತ್ನದಲ್ಲಿ 88.67 ಮೀಟರ್ ದೂರ ಜಾವೆಲಿನ್ ಎಸೆದರು. ನೀರಜ್ ಅವರ ಈ ಮೊದಲ ಥ್ರೋ ಸ್ಪರ್ಧೆಯ ಅತ್ಯುತ್ತಮ ಎಸೆತವಾಗಿತ್ತು. ಆದರೆ, ಮತ್ತೊಮ್ಮೆ ನೀರಜ್ ಜಾವಲಿನ್‌ ಅನ್ನು ಇನ್ನೂ

ಮತ್ತೊಂದು ಇತಿಹಾಸ ಸೃಷ್ಟಿಸಿದ ನೀರಜ್ ಚೋಪ್ರಾ| ದೋಹಾ ಡೈಮಂಡ್ ಲೀಗ್ ಪ್ರಶಸ್ತಿಗೆ ಮುತ್ತಿಕ್ಕಿದ‌ ಚಿನ್ನದ ಹುಡುಗ Read More »

ವಿಟ್ಲ: ಮರ ಬಿದ್ದು ವಿದ್ಯುತ್ ಕಂಬ ಕಟ್

ಸಮಗ್ರ ನ್ಯೂಸ್: ಮರ ತುಂಡಾಗಿ ಬಿದ್ದು, ಮೂರು ವಿದ್ಯುತ್ ಕಂಬಗಳು ಧರೆಗುರುಳಿದ ಘಟನೆ ವಿಟ್ಲದ ಕರೋಪಾಡಿ ಪಂಚಾಯತ್ ವ್ಯಾಪ್ತಿಯ ಸಾಯ ಎಂಬಲ್ಲಿ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಲಿಲ್ಲ. ಆದರೆ ಸಮೀಪದ ತೋಟಗಳಿಗೆ ಭಾರೀ ಹಾನಿಯಾಗಿ ಅಪಾರ ನಷ್ಟ ಉಂಟಾಗಿದೆ. ಅಲ್ಲದೆ ವಿದ್ಯುತ್ ಕಂಬಗಳು ತುಂಡಾಗಿದ್ದು, ವಿದ್ಯುತ್ ಸಂಪರ್ಕ ಇಲ್ಲದೆ ಗ್ರಾಮಸ್ಥರು ತೊಂದರೆ ಅನುಭವಿಸಿದ್ದಾರೆ. ಈ ಬಗ್ಗೆ ವಿದ್ಯುತ್ ಇಲಾಖೆಗೆ ಮಾಹಿತಿ ನೀಡಲಾಗಿದ್ದು, ಕಂಬವನ್ನು ವೀಕ್ಷಿಸಿ ಹಾಗೆಯೇ ತೆರಳಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸಾಯ ಎಂಬಲ್ಲಿ ವಿದ್ಯುತ್

ವಿಟ್ಲ: ಮರ ಬಿದ್ದು ವಿದ್ಯುತ್ ಕಂಬ ಕಟ್ Read More »

ಸುಳ್ಯ ಕ್ಷೇತ್ರಕ್ಕೆ ಬಿಜೆಪಿ ಶಾಸಕ, ಸಂಸದರ ಕೊಡುಗೆ ಏನು? ಬೆಳ್ತಂಗಡಿ, ಪುತ್ತೂರುಗೆ ಬರುವ ಅನುದಾನ ಸುಳ್ಯಕ್ಕೆ ಏಕಿಲ್ಲ? ಕಾಂಗ್ರೆಸ್ ನಿಂದ ಪ್ರಶ್ನೆಗಳ ಸುರಿಮಳೆ

ಸಮಗ್ರ ನ್ಯೂಸ್: ಕಳೆದ ೫ ವರ್ಷದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಮೂರುವರೆ ಸಾವಿರ ಕೋಟಿ ಅನುದಾನ ತಂದಿದ್ದಾರೆ, ಪುತ್ತೂರಿನ ಅಭಿವೃದ್ಧಿಗೆ ಎರಡೂವರೆ ಸಾವಿರ ಕೋಟಿ ಅನುದಾನ ತರಿಸಲಾಗಿದೆಯೆಂದು ಎಂದು ನಳಿನ್ ಕುಮಾರ್ ಕಟೀಲ್ ಹೇಳುತ್ತಾರೆ. ಸುಳ್ಯ ಕ್ಷೇತ್ರದ ಅಭಿವೃದ್ಧಿಗೆ ಕೇವಲ 150 ರಿಂದ 200 ಕೋಟಿ ಮಾತ್ರ ಬಂದಿದೆಯಂತೆ. ಹಾಗಾದರೆ ಇಲ್ಲಿಗೆ ಇದು ಸಾಕೇ? ಸುಳ್ಯ ಕ್ಷೇತ್ರಕ್ಕೆ ಬಿಜೆಪಿ ಶಾಸಕರ, ಸಂಸದರ ಕೊಡುಗೆ ಏನು? ಎಂದು ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ ಪ್ರಶ್ನಿಸಿದ್ದಾರೆ.

ಸುಳ್ಯ ಕ್ಷೇತ್ರಕ್ಕೆ ಬಿಜೆಪಿ ಶಾಸಕ, ಸಂಸದರ ಕೊಡುಗೆ ಏನು? ಬೆಳ್ತಂಗಡಿ, ಪುತ್ತೂರುಗೆ ಬರುವ ಅನುದಾನ ಸುಳ್ಯಕ್ಕೆ ಏಕಿಲ್ಲ? ಕಾಂಗ್ರೆಸ್ ನಿಂದ ಪ್ರಶ್ನೆಗಳ ಸುರಿಮಳೆ Read More »

ಸುಳ್ಯ: ಐವರ್ನಾಡಿನ ಯುವಕ ನಾಪತ್ತೆ

ಸಮಗ್ರ ನ್ಯೂಸ್: ಐವರ್ನಾಡಿನ ಯುವಕನೋರ್ವ ನಾಪತ್ತೆಯಾದ ಬಗ್ಗೆ ಮೇ.5 ರಂದು ವರದಿ ಯಾಗಿದೆ. ಪುರುಷೋತ್ತಮ ಅಜ್ಜಾವರ ನಾಪತ್ತೆಯಾದ ವ್ಯಕ್ತಿ. ಇವರು ಐವರ್ನಾಡು ಗ್ರಾಮದ ಶಾಂತಿಮೂಲೆ ಎಂಬಲ್ಲಿ ವಾಸವಾಗಿದ್ದು ಮೇ.5 ರಂದು ಕಾಣೆಯಾಗಿದ್ದಾರೆ. ಪತ್ತೆಯಾದಲ್ಲಿ 9901680985, 9481973374, 7760375654, 8296739252 ಈ ನಂಬರಿಗೆ ತಿಳಿಸುವಂತೆ ಕೋರಲಾಗಿದೆ.

ಸುಳ್ಯ: ಐವರ್ನಾಡಿನ ಯುವಕ ನಾಪತ್ತೆ Read More »

ಸುಳ್ಯದ ಯುವಕ ಕುಂದಾಪುರ ಸಮೀಪ ಹೊಳೆಯಲ್ಲಿ ಮುಳುಗಿ ನಾಪತ್ತೆ; ತೀವ್ರ ಶೋಧ

ಸಮಗ್ರ ನ್ಯೂಸ್: ಸುಳ್ಯದ ಯುವಕ ಕುಂದಾಪುರ ತಾಲೂಕಿನ ಬಿದ್ಕಲ್ ಕಟ್ಟೆ ಸಮೀಪದ ಸೌಡ ಎಂಬಲ್ಲಿ ಹೊಳೆಯಲ್ಲಿ ಮುಳುಗಿ ನಾಪತ್ತೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ಮಡ್ತಿಲ ಮೀರನಾಥ್ ಗೌಡ ಎಂಬುವರ ಮಗ ಸುಹಾಸ್ಂ.ಎಂ. (21) ಎಂಬಾತ ನಾಪತ್ತೆಯಾಗಿರುವ ಯುವಕ. ಈತ ಮೂಡಬಿದ್ರೆಯ ಆಯುರ್ವೇದ ಔಷಧಿ ಕಂಪೆನಿಯೊಂದರ ಮೆಡಿಕಲ್ ರೆಪ್ ಆಗಿ ಕೆಲಸ ಮಾಡುತ್ತಿದ್ದ. ಶುಕ್ರವಾರ ಬೆಳಿಗ್ಗೆಯಷ್ಟೇ ತನ್ನ ಮನೆಯಿಂದ ಬಂದು ಸ್ನೇಹಿತರೊಂದಿಗೆ ಕುಂದಾಪುರದ ಸೌಡ ಹೊಳೆಗೆ ಈಜಲು ತೆರಳಿದ್ದರು.ಹೊಳೆಯಲ್ಲಿ ನೀರಿಗಿಳಿದ ಸುಹಾಸ್ ಹೊಳೆಯಲ್ಲಿ

ಸುಳ್ಯದ ಯುವಕ ಕುಂದಾಪುರ ಸಮೀಪ ಹೊಳೆಯಲ್ಲಿ ಮುಳುಗಿ ನಾಪತ್ತೆ; ತೀವ್ರ ಶೋಧ Read More »

ಒಂದೇ ಮನೆಯ ಮೂವರು ಮಹಿಳೆಯರು ಸೇರಿ 6 ಮಂದಿಯನ್ನು ಗುಂಡಿಕ್ಕಿ ಹತ್ಯೆ!

ಸಮಗ್ರ ನ್ಯೂಸ್: ಜಮೀನು ವಿವಾದದ ಗಲಾಟೆಯಲ್ಲಿ ಒಂದೇ ಕುಟುಂಬದ ಆರು ಸದಸ್ಯರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಶುಕ್ರವಾರ ಮಧ್ಯಪ್ರದೇಶದ ಮೊರೆನಾದಲ್ಲಿ ನಡೆದಿದೆ. ಘಟನೆಯ ಆಘಾತಕಾರಿ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಈ ವೀಡಿಯೋದಲ್ಲಿ ಇಬ್ಬರು ರೈಫಲ್ ಗಳನ್ನು ಹಿಡಿದು ಇನ್ನೊಂದು ಗುಂಪಿನ ಕಡೆ ಗುಂಡು ಹಾರಿಸಿರುವುದು ದಾಖಲಾಗಿದೆ. ನಂತರ ಕೆಲವರು ಅವರನ್ನು ಕೋಲುಗಳಿಂದ ಥಳಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡಿದ್ದ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಧೀರ್ ಸಿಂಗ್ ತೋಮರ್ ಮತ್ತು ಗಜೇಂದ್ರ ಸಿಂಗ್ ತೋಮರ್ ಕುಟುಂಬಗಳ ನಡುವೆ

ಒಂದೇ ಮನೆಯ ಮೂವರು ಮಹಿಳೆಯರು ಸೇರಿ 6 ಮಂದಿಯನ್ನು ಗುಂಡಿಕ್ಕಿ ಹತ್ಯೆ! Read More »

ಮಂಗಳೂರು: 43 ವರ್ಷಗಳ ಬಳಿಕ ಮತ್ತೆ ತನ್ನವರಿಗಾಗಿ ಅರಸುತ್ತಿರುವ ಮಹಿಳೆ

ಸಮಗ್ರ ನ್ಯೂಸ್: ಸುಮಾರು 43 ವರ್ಷಗಳ ಹಿಂದೆ ಬಾಲಕಿಯೊಬ್ಬಳು ತನ್ನ ಕುಟುಂಬದವರನ್ನು ಆಕಸ್ಮಿಕವಾಗಿ ಕಳೆದುಕೊಂಡಿದ್ದು , ಈಗ ಆಕೆ ತನ್ನ ಕುಟುಂಬದವರನ್ನು ಹುಡುಕಾಡುತ್ತಿದ್ದಾರೆ. ಇವರು ಮಂಗಳೂರು ಬಸವನ ಗುಡಿ ರಸ್ತೆಯ ಕಾರ್ ಸ್ಟ್ರೀಟ್ ನಿವಾಸಿ ಛಾಯಾ ಗಾಣಿಗ (48) ಇವರು ಸದಾನಂದ ಗಾಣಿಗ ಮತ್ತು ಗಿರಿಜಾ ಗಾಣಿಗ ದಂಪತಿಯ ಪುತ್ರಿಯಾಗಿದ್ದು, 43 ವರ್ಷಗಳ ನಂತರ ಕುಟುಂಬವನ್ನು ಅರಸುತ್ತಿದ್ದಾರೆ. ಇವರು ಐದು ವರ್ಷಗಳ ಹಿಂದೆ ತನ್ನ ಕುಟುಂಬವನ್ನು ಕಳೆದುಕೊಂಡಿದ್ದು ಅದಾದ ಬಳಿಕ ಛಾಯಾ ಅವರನ್ನು ಕುಟುಂಬವೊAದು ದತ್ತು ಪಡೆದು

ಮಂಗಳೂರು: 43 ವರ್ಷಗಳ ಬಳಿಕ ಮತ್ತೆ ತನ್ನವರಿಗಾಗಿ ಅರಸುತ್ತಿರುವ ಮಹಿಳೆ Read More »

ಒಲಿಂಪಿಕ್ಸ್ ಪದಕ ವಿಜೇತೆ ಟೋರಿ ಬೋವಿ ಅನುಮಾನಾಸ್ಪದ ಸಾವು

ಸಮಗ್ರ ನ್ಯೂಸ್: 2016ರ ಒಲಿಂಪಿಕ್ಸ್‌ ಕ್ರೀಡೆಯಲ್ಲಿ ಮೂರು ಪದಕ ಹಾಗೂ ಎರಡು ಬಾರಿ ವಿಶ್ವಚಾಂಪಿಯನ್‌ ಶಿಪ್‌ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದ ಟೋರಿ ಬೋವಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಹಲವು ದಿನಗಳ ಹಿಂದೆ ಆರೋಗ್ಯ ತಪಾಸಣೆಗಾಗಿ ತೆರಳಿದ್ದ ಬೋವಿ ಫ್ಲೋರಿಡಾದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಆದರೂ ಈ ಬಗ್ಗೆ ಸಂಬಂಧಪಟ್ಟ ಇಲಾಖೆ ತನಿಖೆ ನಡೆಸಲು ಹಿಂದೇಟು ಹಾಕಿದೆ ಎಂಬ ಆರೋಪಗಳು ಕೇಳಿಬಂದಿದೆ. ಟೋರಿ 2016ರ ಒಲಿಂಪಿಕ್ಸ್‌ನಲ್ಲಿ ಮೂರು ಪದಗಳನ್ನು ಗೆದ್ದುಕೊಂಡಿದ್ದರು. ಕೊನೆಯದ್ದಾಗಿ 2022ರಲ್ಲಿ ಅಂತಾರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು. ಇದೀಗ ಬೋವಿಯ ಅನುಮಾನಾಸ್ಪದ

ಒಲಿಂಪಿಕ್ಸ್ ಪದಕ ವಿಜೇತೆ ಟೋರಿ ಬೋವಿ ಅನುಮಾನಾಸ್ಪದ ಸಾವು Read More »