May 2023

ಪುತ್ತೂರಿನ ಯುವತಿ ಬೆಂಗಳೂರಿನಲ್ಲಿ ಆತ್ಮಹತ್ಯೆ

Samagra news: ಪುತ್ತೂರು ತಾಲೂಕಿನ ಕೆಯ್ಯೂರಿನ ಯುವತಿಯೋರ್ವರು ಬೆಂಗಳೂರುನಲ್ಲಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಕೆಯ್ಯೂರು ಗ್ರಾಮದ ಮಾಡಾವು ಸ್ಥಾನತ್ತಾರು ಚಂದ್ರಶೇಖರ ರೈ ಮತ್ತು ಆಶಾ ಕಾರ್ಯಕರ್ತೆಯಾಗಿರುವ ಸೋಮಾವತಿ ರೈ ದಂಪತಿಯ ಏಕೈಕ ಪುತ್ರಿ ಶ್ರುತಿ ಸಿ.ರೈ (22)ಮೃತಪಟ್ಟವರು. ಕಳೆದೆರಡು ವರ್ಷಗಳಿಂದ ಬೆಂಗಳೂರುನಲ್ಲಿ ಅನಿಮೇಷನ್ ಶಿಕ್ಷಣ ಪಡೆಯುತ್ತಿದ್ದ ಅವರು ಅಲ್ಲೇ ವಾಸ್ತವ್ಯವಿದ್ದರು. ಕೋರ್ಸ್‌ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿದ್ದರು. ಬಾಡಿಗೆ ರೂಮ್‌ನಲ್ಲಿದ್ದ ಅವರು ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು […]

ಪುತ್ತೂರಿನ ಯುವತಿ ಬೆಂಗಳೂರಿನಲ್ಲಿ ಆತ್ಮಹತ್ಯೆ Read More »

ರಾಣಿ ಅಬ್ಬಕ್ಕ ಶಕ್ತಿ ದೇಶದ ಮಹಿಳೆಯರಲ್ಲಿ ಕಾಣುತ್ತಿದೆ| ಮೂಲ್ಕಿಯಲ್ಲಿ ಪ್ರಧಾನಿ ಮೋದಿ ಅಭಿಮತ

ಸಮಗ್ರ ನ್ಯೂಸ್: ರಾಣಿ ಅಬ್ಬಕ್ಕ ಶಕ್ತಿ ಏನೆಂದು ಎಲ್ಲರಿಗೂ ಗೊತ್ತಿದೆ. ದೇಶದ ಪ್ರತಿ ಮಹಿಳೆಯರಲ್ಲೂ ರಾಣಿ ಅಬ್ಬಕ್ಕ ಕಾಣಿಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮಂಗಳೂರಿನ ಮುಲ್ಕಿಯಲ್ಲಿ ಬಿಜೆಪಿ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದಂತ ಪ್ರಧಾನಿ ನರೇಂದ್ರ ಮೋದಿಯವರು, ರಾಣಿ ಅಬ್ಬಕ್ಕ ಶಕ್ತಿ ಏನೆಂದು ಎಲ್ಲರಿಗೂ ಗೊತ್ತಿದೆ. ದೇಶದ ಪ್ರತಿ ಮಹಿಳೆಯರಲ್ಲೂ ರಾಣಿ ಅಬ್ಬಕ್ಕ ಕಾಣಿಸ್ತಿದ್ದಾರೆ. ರಾಣಿ ಅಬ್ಬಕ್ಕ ರೀತಿಯ ನಮ್ಮ ಮಹಿಳೆಯರಲ್ಲೂ ಸಾಮರ್ಥ್ಯ ಇದೆ. ಕಾಂಗ್ರೆಸ್​ ಆಡಳಿತದಲ್ಲಿ ಮಹಿಳೆಯರಿಗೆ ಸುರಕ್ಷತೆ ಇರಲಿಲ್ಲ. ಮಹಿಳೆಯರಿಗಾಗಿ ಶೌಚಾಲಯ ಇರಲಿಲ್ಲ,

ರಾಣಿ ಅಬ್ಬಕ್ಕ ಶಕ್ತಿ ದೇಶದ ಮಹಿಳೆಯರಲ್ಲಿ ಕಾಣುತ್ತಿದೆ| ಮೂಲ್ಕಿಯಲ್ಲಿ ಪ್ರಧಾನಿ ಮೋದಿ ಅಭಿಮತ Read More »

‘ದಿ ಕಾಶ್ಮೀರ್ ಫೈಲ್ಸ್’ ಬಳಿಕ ವಿವಾದದ ಸುಳಿಯಲ್ಲಿ ‘ದಿ ಕೇರಳ ಸ್ಟೋರಿ’| 36 ಸಾವಿರ ಹುಡುಗಿಯರ ನಾಪತ್ತೆ ಪ್ರಕರಣದ ಹಿನ್ನಲೆಯ ಕಥೆ| ವಿವಾದದ ಸುಳಿಯಲ್ಲಿ ಸಿನಿಮಾ| ಪ್ರದರ್ಶನ ತಡೆಗೆ ಸುಪ್ರೀಂ ನಕಾರ

ಸಮಗ್ರ ನ್ಯೂಸ್: ‘ದಿ ಕೇರಳ ಸ್ಟೋರಿ’ ಟ್ರೈಲರ್ ಬಿಡುಗಡೆಯಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ದಿ ಕೇರಳ ಸ್ಟೋರಿ ಕೇರಳದ ಸುಮಾರ 36 ಸಾವಿರ ಹುಡುಗಿಯರ ನಾಪತ್ತೆಯನ್ನು ಈ ಸಿನಿಮಾದಲ್ಲಿ ತೋರಿಸಲು ಹೊರಟಿದ್ದು, ವಿದೇಶದಲ್ಲಿ ಕೆಲಸ ಕೊಡಿಸುವ ನೆಪದಲ್ಲಿ ಮತಾಂತರ ಮತ್ತು ಐಸಿಸ್ ಉಗ್ರಗಾಮಿಗಳನ್ನು ಆಗಿಸುವ ವಿಷಯವನ್ನು ಈ ಸಿನಿಮಾ ಒಳಗೊಂಡಿದೆ. ದಿ ಕೇರಳ ಸ್ಟೋರಿ ಟೀಸರ್ ಈ ಹಿಂದಿ ರಿಲೀಸ್ ಆಗಿದ್ದು, ಸಿನಿಮಾವನ್ನು ಬ್ಯಾನ್ ಮಾಡಬೇಕು ಎಂದು ಕೇರಳದ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ ಎಂದು

‘ದಿ ಕಾಶ್ಮೀರ್ ಫೈಲ್ಸ್’ ಬಳಿಕ ವಿವಾದದ ಸುಳಿಯಲ್ಲಿ ‘ದಿ ಕೇರಳ ಸ್ಟೋರಿ’| 36 ಸಾವಿರ ಹುಡುಗಿಯರ ನಾಪತ್ತೆ ಪ್ರಕರಣದ ಹಿನ್ನಲೆಯ ಕಥೆ| ವಿವಾದದ ಸುಳಿಯಲ್ಲಿ ಸಿನಿಮಾ| ಪ್ರದರ್ಶನ ತಡೆಗೆ ಸುಪ್ರೀಂ ನಕಾರ Read More »

Dharmasthala mass marriage| ಇಂದು(ಮೇ.3) ಧರ್ಮಸ್ಥಳದಲ್ಲಿ 51ನೇ ಉಚಿತ ಸಾಮೂಹಿಕ ವಿವಾಹ| ಗೃಹಸ್ಥಾಶ್ರಮಕ್ಕೆ ಕಾಲಿಡಲಿದ್ದಾರೆ 201 ಜೋಡಿ

ಸಮಗ್ರ ನ್ಯೂಸ್: ಪ್ರಸಿದ್ಧ ಧರ್ಮಕ್ಷೇತ್ರ ಧರ್ಮಸ್ಥಳದಲ್ಲಿ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಇಂದು (ಮೇ3) ನಡೆಯಲಿದ್ದು , 201 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ವಿವಾಹ ಸಮಾರಂಭ ಅವರವರ ಜಾತಿ ಸಂಪ್ರದಾಯದಂತೆ ಮೇ 3ರ ಬುಧವಾರ ಸಂಜೆ 6.40ರ ಗೋಧೂಳಿ ಲಗ್ನದಲ್ಲಿ 201 ಜೋಡಿಗಳು ಸಾಮೂಹಿಕ ವಿವಾಹ ನಡೆಯಲಿದೆ. ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಹಾಗೂ ಅವರ ಪತ್ನಿ ಹೇಮಾವತಿ ಹೆಗ್ಗಡೆ ಅವರು ಜೋಡಿಗಳಿಗೆ ಮಂಗಳಸೂತ್ರ ವಿತರಣೆ ಮಾಡುತ್ತಾರೆ. ಕಾರ್ಯಕ್ರಮದ ಎಲ್ಲಾ ವೆಚ್ಚವನ್ನು ಶ್ರೀ ಧರ್ಮಸ್ಥಳ

Dharmasthala mass marriage| ಇಂದು(ಮೇ.3) ಧರ್ಮಸ್ಥಳದಲ್ಲಿ 51ನೇ ಉಚಿತ ಸಾಮೂಹಿಕ ವಿವಾಹ| ಗೃಹಸ್ಥಾಶ್ರಮಕ್ಕೆ ಕಾಲಿಡಲಿದ್ದಾರೆ 201 ಜೋಡಿ Read More »

ವೇಶ್ಯೆಯರೊಂದಿಗೆ ಲೈಂಗಿಕ ಸಂಪರ್ಕ ಆರೋಪ| ಕ್ರಿಕೆಟಿಗ ಮೊಹಮ್ಮದ್ ಶಮಿ ಬಂಧನಕ್ಕೆ ಸುಪ್ರೀಂಗೆ ಮೊರೆ

ಸಮಗ್ರ ನ್ಯೂಸ್: ಮೊಹಮ್ಮದ್ ಶಮಿ ವಿರುದ್ಧದ ಬಂಧನದ ವಾರೆಂಟ್‌ ಗೆ ಸ್ಥಳೀಯ ನ್ಯಾಯಾಲಯ ನೀಡಿದ್ದ ತಡೆಯಾಜ್ಞೆಯನ್ನು ಹಿಂತೆಗೆದುಕೊಳ್ಳುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಕಲ್ಕತ್ತಾ ಹೈಕೋರ್ಟ್ ಆದೇಶದ ವಿರುದ್ಧ ಭಾರತ ಕ್ರಿಕೆಟ್ ತಂಡದ ಆಟಗಾರ ಮೊಹಮ್ಮದ್ ಶಮಿ ಅವರ ಪತ್ನಿ ಮಂಗಳವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಭಾರತೀಯ ಕ್ರಿಕೆಟ್ ತಂಡದ ಆಟಗಾರ ಮೊಹಮ್ಮದ್ ಶಮಿ ಅವರ ಪತ್ನಿ ಮಾರ್ಚ್ 28, 2023 ರ ಕಲ್ಕತ್ತಾ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿದ್ದಾರೆ. ಪಶ್ಚಿಮ ಬಂಗಾಳದ ಸೆಷನ್ಸ್ ಕೋರ್ಟ್ ಶಮಿ

ವೇಶ್ಯೆಯರೊಂದಿಗೆ ಲೈಂಗಿಕ ಸಂಪರ್ಕ ಆರೋಪ| ಕ್ರಿಕೆಟಿಗ ಮೊಹಮ್ಮದ್ ಶಮಿ ಬಂಧನಕ್ಕೆ ಸುಪ್ರೀಂಗೆ ಮೊರೆ Read More »

“ಶ್… ಮಾತಿನ ಮೇಲೆ ನಿಗಾ ಇರಲಿ”| ಚುನಾವಣಾ ಆಯೋಗದಿಂದ ಪಕ್ಷಗಳ ಸ್ಟಾರ್ ಪ್ರಚಾರಕರಿಗೆ ಎಚ್ಚರಿಕೆ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಪ್ರಚಾರದ ಮಟ್ಟ ಕುಸಿಯುತ್ತಿರುವುದನ್ನು ಚುನಾವಣಾ ಆಯೋಗ ಮಂಗಳವಾರ ಗಂಭೀರವಾಗಿ ಪರಿಗಣಿಸಿದೆ ಮತ್ತು ಸಂಯಮದಿಂದ ವರ್ತಿಸುವಂತೆ ಪಕ್ಷಗಳಿಗೆ ಸೂಚಿಸಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪ್ರಚಾರದ ಮಟ್ಟ ಕುಸಿಯುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಚುನಾವಣಾ ಆಯೋಗವು ಕರ್ನಾಟಕದ ರಾಜಕೀಯ ಪಕ್ಷಗಳಿಗೆ ‘ತಮ್ಮ ಹೇಳಿಕೆಗಳಲ್ಲಿ ಎಚ್ಚರಿಕೆ ಮತ್ತು ಸಂಯಮವನ್ನು ಕಾಪಾಡಿಕೊಳ್ಳಿ’ ಎಂದು ಖಡಕ್ ಸೂಚನೆ ನೀಡಿದೆ. ಮೇ.10ರಂದು ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದೆ. ಮತದಾನ ಸಮೀಪಿಸುತ್ತಿದ್ದಂತೆ, ಕರ್ನಾಟಕದಲ್ಲಿ ಪಕ್ಷಗಳ ನಾಯಕರು, ಸ್ಟಾರ್ ಪ್ರಚಾರಕರು ಹದ್ದುಮೀರಿದ ನಡೆಯನ್ನು ಹಲವೆಡೆ ತೋರುತ್ತಿದ್ದಾರೆ. ಈ

“ಶ್… ಮಾತಿನ ಮೇಲೆ ನಿಗಾ ಇರಲಿ”| ಚುನಾವಣಾ ಆಯೋಗದಿಂದ ಪಕ್ಷಗಳ ಸ್ಟಾರ್ ಪ್ರಚಾರಕರಿಗೆ ಎಚ್ಚರಿಕೆ Read More »

ಪುತ್ತೂರಿನಲ್ಲಿ ನೈತಿಕ ಪೊಲೀಸ್ ಗಿರಿ| ಯುವತಿ ಜೊತೆ ಮಾತನಾಡಿದ್ದಕ್ಕೆ ಮುಸ್ಲಿಂ ಯುವಕನ ಮೇಲೆ ಹಲ್ಲೆಗೈದ ಹಿಂದೂ ಯುವಕರು

ಸಮಗ್ರ ನ್ಯೂಸ್: ಭಜರಂಗದಳ ನಿಷೇಧದ ಕುರಿತು ಕಾಂಗ್ರೆಸ್‌ ಪ್ರಣಾಳಿಕೆ ಬಿಡುಗಡೆ ಮಾಡಿದ ಬಳಿಕ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಇದರ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ ಮಾಡಲಾಗಿದೆ. ಯುವತಿ ಜತೆ ಮಾತನಾಡಿದ್ದಕ್ಕೆ ಹಿಂದು ಸಂಘಟನೆ ಕಾರ್ಯಕರ್ತರು ಮುಸ್ಲಿಂ ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ. ಮೊಹಮ್ಮದ್‌ ಪಾರಿಶ್ (18) ಎಂಬ ಯುವಕನಿಗೆ ಹಿಂದು ಕಾರ್ಯಕರ್ತರು ಥಳಿಸಿದ್ದು, ಪುತ್ತೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಫಾರಿಶ್‌ಗೆ ಚಿಕಿತ್ಸೆ ನೀಡಲಾಗುತ್ತಿದೆ. ಹಿಂದೂ ಯುವತಿ ಜೊತೆ ಮಾತನಾಡಿದ್ದಕ್ಕಾಗಿ ಪ್ರಥಮ ಪಿಯುಸಿ ವಿದ್ಯಾರ್ಥಿ ಮೇಲೆ

ಪುತ್ತೂರಿನಲ್ಲಿ ನೈತಿಕ ಪೊಲೀಸ್ ಗಿರಿ| ಯುವತಿ ಜೊತೆ ಮಾತನಾಡಿದ್ದಕ್ಕೆ ಮುಸ್ಲಿಂ ಯುವಕನ ಮೇಲೆ ಹಲ್ಲೆಗೈದ ಹಿಂದೂ ಯುವಕರು Read More »

ಇಂದು ಕರಾವಳಿಯಲ್ಲಿ ನಮೋ| ಮೂಲ್ಕಿಯಲ್ಲಿ ಬೃಹತ್ ರ್ಯಾಲಿ

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ. ಮತ ಭೇಟೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮೇ 3 ರಂದು ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ 13 ವಿಧಾನಸಭಾ ಕ್ಷೇತ್ರಗಳಿಂದ 2.5 ಲಕ್ಷಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆಯಿದೆ. ಕೊಳ್ನಾಡು ಮೈದಾನದಲ್ಲಿ 70 ಎಕರೆ ಜಾಗದಲ್ಲಿ ರ್ಯಾಲಿ ನಡೆಯಲಿದ್ದು, ಭಾಗವಹಿಸುವವರಿಗೆ ಆಸನ ವ್ಯವಸ್ಥೆ ಮಾಡಲು ಬೃಹತ್ ಪಂಗಡವನ್ನು ನಿರ್ಮಿಸಲಾಗುತ್ತಿದೆ. ಭದ್ರತಾ

ಇಂದು ಕರಾವಳಿಯಲ್ಲಿ ನಮೋ| ಮೂಲ್ಕಿಯಲ್ಲಿ ಬೃಹತ್ ರ್ಯಾಲಿ Read More »

ರಾಜ್ಯಕ್ಕೆ ಬ್ರಾಹ್ಮಣ ಮುಖ್ಯಮಂತ್ರಿ!? ಸಂಶಯ ಸೃಷ್ಟಿಸಿದ ಎಚ್ ಡಿ ಕೆ ಹೇಳಿಕೆ

ಸಮಗ್ರ ನ್ಯೂಸ್: ಬಿಜೆಪಿ ಯಾವುದೇ ಬೆಲೆ ತೆತ್ತಾದರೂ ಲಿಂಗಾಯತ ಸಮುದಾಯದವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜನತಾದಳ ( ಜಾತ್ಯತೀತ ) ನಾಯಕ ಎಚ್‌ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಈ ಮೂಲಕ ತೆರೆಮರೆಗೆ ಸರಿದಿದ್ದ ಬ್ರಾಹ್ಮಣ ‌ಮುಖ್ಯಮಂತ್ರಿ ವಿಚಾರ ಮತ್ತೆ‌ ಮುನ್ನಲೆಗೆ‌ ಬಂದಿದೆ. ಬಾದಾಮಿ ತಾಲೂಕಿನ ಚಿಕ್ಕಮುಚ್ಚಳಗುಡ್ಡ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ, ಯಾವುದೇ ಕಾರಣಕ್ಕೂ ಬಿಜೆಪಿ ಲಿಂಗಾಯತರನ್ನು ಸಿಎಂ ಮಾಡಲ್ಲ. ಬಿಜೆಪಿಯೊಳಗೆ ಬ್ರಾಹ್ಮಣರನ್ನು ಸಿಎಂ ಮಾಡುವ ಕೆಲಸ ಸದ್ದಿಲ್ಲದೆ ನಡೆದಿದೆ ಎಂದು ಆರೋಪಿಸಿದರು.

ರಾಜ್ಯಕ್ಕೆ ಬ್ರಾಹ್ಮಣ ಮುಖ್ಯಮಂತ್ರಿ!? ಸಂಶಯ ಸೃಷ್ಟಿಸಿದ ಎಚ್ ಡಿ ಕೆ ಹೇಳಿಕೆ Read More »

ವಿಧಾನಸಭಾ ಚುನಾವಣೆ ಹಿನ್ನಲೆ| ಮೇ.10ರಂದು ರಾಜ್ಯಾದ್ಯಂತ ಸಾರ್ವತ್ರಿಕ ರಜೆ ಘೋಷಣೆ

ಸಮಗ್ರ‌ ನ್ಯೂಸ್: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೇ 10ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ. ತುರ್ತು ಸೇವೆ ಹೊರತುಪಡಿಸಿ ಎಲ್ಲಾ ಕೇಂದ್ರ, ರಾಜ್ಯ ಸರ್ಕಾರಿ, ಖಾಸಗಿ ಸಂಸ್ಥೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಶಾಲಾ, ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ. ಮತದಾನ ದಿನವಾದ ಮೇ 10 ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಈ ರಜೆ ಸೌಲಭ್ಯ ತುರ್ತು ಸೇವೆಗಳಿಗೆ ಅನ್ವಯವಾಗುವುದಿಲ್ಲ. ಅಂದು ಮತ ಚಲಾಯಿಸಲು ಅನುಕೂಲವಾಗುವಂತೆ ಕೇಂದ್ರ, ರಾಜ್ಯ ಸರ್ಕಾರಿ ಕಚೇರಿ, ಶಾಲೆ, ಕಾಲೇಜು, ವಿವಿಧ ಸಂಘ-ಸಂಸ್ಥೆ, ಅನುದಾನಿತ,

ವಿಧಾನಸಭಾ ಚುನಾವಣೆ ಹಿನ್ನಲೆ| ಮೇ.10ರಂದು ರಾಜ್ಯಾದ್ಯಂತ ಸಾರ್ವತ್ರಿಕ ರಜೆ ಘೋಷಣೆ Read More »