May 2023

ಸುಳ್ಯ ಕಾಂಗ್ರೆಸ್ ನ ಆಂತರಿಕ ಗೊಂದಲಕ್ಕೆ ಎಳ್ಳುನೀರು| ಬಗೆಹರಿದ ಅಸಮಾಧಾನ; ಒಗ್ಗಟ್ಟಿನ ಮಂತ್ರ ಜಪಿಸಿದ ಕೈ ಪಾಳಯ

ಸಮಗ್ರ ನ್ಯೂಸ್: ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಮತ್ತು ನಂತರದ ಪಕ್ಷದೊಳಗಿನ ಗೊಂದಲಗಳ ಬಗ್ಗೆ ಕೆಪಿಸಿಸಿ ಮತ್ತು ಎ ಐ ಸಿ ಸಿ ನಿರ್ದೇಶನದಂತೆ ಮಾಜಿ ಸಚಿವ ಬಿ ರಮಾನಾಥ ರೈ ಯವರ ನೇತೃತ್ವದಲ್ಲಿ ಎ ಐ ಸಿ ಸಿ ಸದಸ್ಯ ಮಹಾರಾಷ್ಟ್ರದ ಮಾಜಿ ಸಚಿವ ಸುನಿಲ್ ಕೇದಾರ್ ಉಪಸ್ಥಿತಿಯಲ್ಲಿ ಬಂಟ್ವಾಳ ದಲ್ಲಿ ರಮಾನಾಥ ರೈ ಯವರ ನಿವಾಸದಲ್ಲಿ ಸಭೆ ನಡೆಸಲಾಗಿದೆ. ಸುಳ್ಯ ಮತ್ತು ಕಡಬ ಬ್ಲಾಕ್ ಅಧ್ಯಕ್ಷರು ಅಭ್ಯರ್ಥಿ ಕೃಷ್ಣಪ್ಪ ಮತ್ತು ಅಭ್ಯರ್ಥಿ […]

ಸುಳ್ಯ ಕಾಂಗ್ರೆಸ್ ನ ಆಂತರಿಕ ಗೊಂದಲಕ್ಕೆ ಎಳ್ಳುನೀರು| ಬಗೆಹರಿದ ಅಸಮಾಧಾನ; ಒಗ್ಗಟ್ಟಿನ ಮಂತ್ರ ಜಪಿಸಿದ ಕೈ ಪಾಳಯ Read More »

ಕಾಂಗ್ರೆಸ್ ನಿಂದ ಪ್ರಣಾಳಿಕೆ ಬಿಡುಗಡೆ| ಮತದಾರನ ಸೆಳೆಯಲು ‘ಸರ್ವಜನಾಂಗದ ಶಾಂತಿಯ ತೋಟ’ ಹೆಸರಿನಲ್ಲಿ ಮಹತ್ವದ ಘೋಷಣೆ

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ಬಿಜೆಪಿ `ಪ್ರಜಾ ಪ್ರಣಾಳಿಕೆ’ ಬಿಡುಗಡೆ ಮಾಡಿದ ಬೆನ್ನಲ್ಲೇ ಇಂದು ಕಾಂಗ್ರೆಸ್ ಚುನಾವಣೆ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ.ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಚುನಾವಣಾ ಪ್ರಣಾಳಿಕೆ ಬಿಡುಗಡೆ ವೇಳೆ ಮಾತನಾಡಿದ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್, ಎಲ್ಲ

ಕಾಂಗ್ರೆಸ್ ನಿಂದ ಪ್ರಣಾಳಿಕೆ ಬಿಡುಗಡೆ| ಮತದಾರನ ಸೆಳೆಯಲು ‘ಸರ್ವಜನಾಂಗದ ಶಾಂತಿಯ ತೋಟ’ ಹೆಸರಿನಲ್ಲಿ ಮಹತ್ವದ ಘೋಷಣೆ Read More »

ರಾಜ್ಯದಲ್ಲಿ ಇಂದಿನಿಂದ ಮತ್ತೆರಡು ದಿನ ‘ನಮೋ’ ಪ್ರಚಾರ| ಕಾಂಗ್ರೆಸ್, ಜೆಡಿಎಸ್ ನಿಂದಲೂ ಮತ ಬೇಟೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಲಿದ್ದಾರೆ. ಇಂದು(ಮೇ.2) ಚಿತ್ರದುರ್ಗ, ಹೊಸಪೇಟೆ, ಸಿಂಧನೂರು, ಕಲಬುರ್ಗಿ, ನಾಳೆ ಮೂಡಬಿದರೆ, ಅಂಕೋಲಾ, ಬೈಲಹೊಂಗಲದಲ್ಲಿ ನಡೆಯುವ ಸಮಾವೇಶದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಚಿತ್ರದುರ್ಗಕ್ಕೆ ಆಗಮಿಸಲಿರುವ ಮೋದಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ವಿಜಯನಗರ ಜಿಲ್ಲಾ ಕೇಂದ್ರ ಹೊಸಪೇಟೆಯಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದು, ಸಂಜೆ 4 ಗಂಟೆಗೆ ರಾಯಚೂರು ಜಿಲ್ಲೆ ಸಿಂಧನೂರಿನಲ್ಲಿ ನಡೆಯುವ

ರಾಜ್ಯದಲ್ಲಿ ಇಂದಿನಿಂದ ಮತ್ತೆರಡು ದಿನ ‘ನಮೋ’ ಪ್ರಚಾರ| ಕಾಂಗ್ರೆಸ್, ಜೆಡಿಎಸ್ ನಿಂದಲೂ ಮತ ಬೇಟೆ Read More »

ಕರಾವಳಿ, ಒಳನಾಡಿನ ಹಲವೆಡೆ ವ್ಯಾಪಕ ಮಳೆ ಮುನ್ಸೂಚನೆ| ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡು ವ್ಯಾಪ್ತಿಯ ಕೆಲವು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಬುಧವಾರ ಸಹ ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲೆಯ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು ‘ಯೆಲ್ಲೊ ಅಲರ್ಟ್‌’ ನೀಡಲಾಗಿದೆ. ಕರಾವಳಿ ಭಾಗದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲೂ ಮಳೆಯಾಗಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಕಲಬುರಗಿ, ರಾಯಚೂರು, ಯಾದಗಿರಿ, ಕೊಪ್ಪಳ

ಕರಾವಳಿ, ಒಳನಾಡಿನ ಹಲವೆಡೆ ವ್ಯಾಪಕ ಮಳೆ ಮುನ್ಸೂಚನೆ| ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆ ಸಾಧ್ಯತೆ Read More »

ಲಕ್ನೋ ವಿರುದ್ಧ ಗೆದ್ದು ಬೀಗಿದ ಆರ್ ಸಿಬಿ| 18 ರನ್ ಗಳ ರೋಚಕ ಜಯ

ಸಮಗ್ರ ನ್ಯೂಸ್: ಐಪಿಎಲ್ 2023 ರ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 18 ರನ್ ಗಳಿಂದ ರೋಚಕವಾಗಿ ಗೆದ್ದುಕೊಂಡಿದೆ. ಇದರೊಂದಿಗೆ ಕಳೆದ ಪಂದ್ಯದ ಸೋಲಿಗೆ ಸೇಡು ತೀರಿಸಿಕೊಂಡಂತಾಗಿದೆ. ಈ ಆಟದಲ್ಲಿ ಬೌಲರ್ ಗಳದ್ದೇ ಮೇಲುಗೈ. ಬ್ಯಾಟಿಗರು ರನ್ ಗಳಿಸಲು ಪರದಾಡಿದರು. ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 126 ರನ್ ಗಳಿಸಿತು. ಫಾ ಡು ಪ್ಲೆಸಿಸ್ 44 ರನ್, ವಿರಾಟ್ ಕೊಹ್ಲಿ

ಲಕ್ನೋ ವಿರುದ್ಧ ಗೆದ್ದು ಬೀಗಿದ ಆರ್ ಸಿಬಿ| 18 ರನ್ ಗಳ ರೋಚಕ ಜಯ Read More »

ಬೆಂಗಳೂರಿನಲ್ಲಿ ಭಾರೀ ಮಳೆ; ಕೆರೆಯಂತಾದ ರಸ್ತೆಗಳು

ಸಮಗ್ರ ನ್ಯೂಸ್: ಅರಬ್ಬೀ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ ಬೆಂಗಳೂರು ಮಹಾನಗರದ ಹಲವೆಡೆ ವರ್ಷಧಾರೆಯಾಗಿದೆ . ಬೆಳಗ್ಗೆ ನಗರದ ಹಲವೆಡೆ ಮೋಡಕವಿದ ವಾತಾವರಣ ಇತ್ತು. ಮಧ್ಯಾಹ್ನದ ವೇಳೆಗೆ ಸುಡು ಬಿಸಿಲು ಆರಂಭವಾಗಿದ್ದರೂ ಸಂಜೆ ಹೊತ್ತಿಗೆ ಕಾರ್ಪೊರೇಷನ್ ವೃತ್ತ, ಮೈಸೂರು ಬ್ಯಾಂಕ್ ವೃತ್ತ, ಮೆಜೆಸ್ಟಿಕ್ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದೆ. ಏಕಾಏಕಿ ಸುರಿದ ಮಳೆಗೆ ನಗರದ ಹಲವು ರಸ್ತೆಗಳು ಕೆರೆಯಂತಾದವು. ವಾಹನ ಸವಾರರು ಸಂಚಾರಕ್ಕೆ ಪರದಾಟ ನಡೆಸಿದರು. ಭಾನುವಾರ ಸಂಜೆ ನಗರದ ಕಾರ್ಪೊರೇಷನ್ ವೃತ್ತ, ಮೈಸೂರು ಬ್ಯಾಂಕ್ ವೃತ್ತ,

ಬೆಂಗಳೂರಿನಲ್ಲಿ ಭಾರೀ ಮಳೆ; ಕೆರೆಯಂತಾದ ರಸ್ತೆಗಳು Read More »

ಸಾಮಾಜಿಕ ಜಾಲತಾಣಗಳಲ್ಲಿ ನನ್ನನ್ನು ತೇಜೋವಧೆ| ಇದರಿಂದ ಪಕ್ಷ ಸಂಘಟನೆ ಮಾಡಲು, ಪಕ್ಷದ ಅಭ್ಯರ್ಥಿ ಪರ ಕೆಲಸ ಮಾಡಲು ಇನ್ನಷ್ಟು ಸ್ಫೂರ್ತಿ: ಹಾರಿಸ್ ಬೈಕಂಪಾಡಿ

ಸಮಗ್ರ ನ್ಯೂಸ್: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಲ್ಲೇ ಸುದೀರ್ಘವಾಗಿ ಗುರುತಿಸಿಕೊಂಡಿದ್ದ ನಾನು ಮೊಯಿದಿನ್ ಬಾವರವರಿಗೆ ಟಿಕೆಟ್ ಪಡೆಯಲು ಕಟ್ಟಾ ಬೆಂಬಲಿಗನಾಗಿ ಕೊನೆಯ ತನಕ ಪ್ರಾಮಾಣಿಕವಾಗಿ ಪ್ರಯತ್ನಿಸಿ ಅವರ ಜೊತೆಗಿದ್ದೆ. ಹೈಕಮಾಂಡ್ ಇನಾಯತ್ ಅಲಿಯವರಿಗೆ ಟಿಕೆಟ್ ನೀಡಿದಾಗ ಪಕ್ಷ ನಿಷ್ಠೆಯಲ್ಲಿರುವ ನನಗೆ ಅನಿವಾರ್ಯವಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲೇಬೇಕಾಯಿತು. ರಾಜಕೀಯ ಜೀವನದಲ್ಲಿ ಪಕ್ಷಕ್ಕೆ ಕಪ್ಪುಚುಕ್ಕೆಯಾಗುವ ಯಾವುದನ್ನೂ ಮಾಡದೆ ಒಬ್ಬ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ, ಕೆಪಿಸಿಸಿ ಅಲ್ಪ ಸಂಖ್ಯಾತ ಘಟಕದ ರಾಜ್ಯ ಸಂಘಟನಾ ಕಾರ್ಯದರ್ಶಿಯಾದ ನನಗೆ ಮೊಯ್ದಿನ್ ಬಾವರನ್ನು ಬೆಂಬಲಿಸಲು ಮಾನಸಿಕವಾಗಿ

ಸಾಮಾಜಿಕ ಜಾಲತಾಣಗಳಲ್ಲಿ ನನ್ನನ್ನು ತೇಜೋವಧೆ| ಇದರಿಂದ ಪಕ್ಷ ಸಂಘಟನೆ ಮಾಡಲು, ಪಕ್ಷದ ಅಭ್ಯರ್ಥಿ ಪರ ಕೆಲಸ ಮಾಡಲು ಇನ್ನಷ್ಟು ಸ್ಫೂರ್ತಿ: ಹಾರಿಸ್ ಬೈಕಂಪಾಡಿ Read More »

ಜಿಎಸ್ ಟಿ‌ ಸಂಗ್ರಹದಲ್ಲಿ ಭಾರೀ ಏರಿಕೆ| ಏಪ್ರಿಲ್ ಒಂದೇ ತಿಂಗಳಲ್ಲಿ ದಾಖಲೆ ತೆರಿಗೆ ಸಂಗ್ರಹ

ಸಮಗ್ರ ನ್ಯೂಸ್: 2023ರ ಏಪ್ರಿಲ್ ತಿಂಗಳಲ್ಲಿ ಸಂಗ್ರಹಿಸಿದ ಒಟ್ಟು ಜಿಎಸ್ಟಿ ಆದಾಯ 1,87,035 ಕೋಟಿ ರೂಪಾಯಿ ತಲುಪಿದೆ. ಇದರಲ್ಲಿ ಸಿಜಿಎಸ್ಟಿ 38,440 ಕೋಟಿ ರೂ., ಎಸ್ಜಿಎಸ್ಟಿ 47,412 ಕೋಟಿ ರೂ., ಐಜಿಎಸ್ಟಿ 89,158 ಕೋಟಿ ರೂ., (ಸರಕುಗಳ ಆಮದಿನ ಮೇಲೆ ಸಂಗ್ರಹಿಸಿದ 34,972 ಕೋಟಿ ರೂ.ಸೇರಿದಂತೆ) ಮತ್ತು ಸೆಸ್ 12,025 ಕೋಟಿ ರೂಪಾಯಿ ಆಗಿದೆ. ಸಿಜಿಎಸ್ಟಿಗೆ 45,864 ಕೋಟಿ ರೂ., ಐಜಿಎಸ್ಟಿಯಿಂದ ಎಸ್ಜಿಎಸ್ಟಿಗೆ 37,959 ಕೋಟಿ ರೂ. ನಿಯಮಿತ ಇತ್ಯರ್ಥದ ನಂತರ 2023ರ ಏಪ್ರಿಲ್ ತಿಂಗಳಲ್ಲಿ ಕೇಂದ್ರ

ಜಿಎಸ್ ಟಿ‌ ಸಂಗ್ರಹದಲ್ಲಿ ಭಾರೀ ಏರಿಕೆ| ಏಪ್ರಿಲ್ ಒಂದೇ ತಿಂಗಳಲ್ಲಿ ದಾಖಲೆ ತೆರಿಗೆ ಸಂಗ್ರಹ Read More »

ದಶಪಥ‌ ಹೆದ್ದಾರಿಯ ರಾಮನಗರ ಸಮೀಪ ಭೀಕರ ಅಪಘಾತ| ಇಬ್ಬರು ಸ್ಥಳದಲ್ಲೇ ಸಾವು; ಮತ್ತೋರ್ವ ಗಂಭೀರ

ಸಮಗ್ರ ನ್ಯೂಸ್: ಬೆಂಗಳೂರು- ಮೈಸೂರು ದಶಪಥ ಹೆದ್ದಾರಿ ರಾಮನಗರ ತಾಲೂಕಿನ ಜಯಪುರ ಗೇಟ್ ಬಳಿ ನಿಂತಿದ್ದ ಕಾರಿಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದು, ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ. ಒಂದೇ ಬೈಕ್‌ನಲ್ಲಿದ್ದ ಮೂವರಿಗೆ ಹಿಂಬದಿಯಿಂದ ಬಂದ ಮತ್ತೊಂದು ‌ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ರಸ್ತೆಗೆ ಬಿದ್ದ ಯುವಕರ ಮೇಲೆ ಮತ್ತೊಂದು ಕಾರು ಹರಿದಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಸ್ಥಳಕ್ಕೆ ರಾಮನಗರ ಪೊಲೀಸರು ಭೇಟಿ ನೀಡಿದ್ದು, ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಮತ್ತೊಬ್ಬನ

ದಶಪಥ‌ ಹೆದ್ದಾರಿಯ ರಾಮನಗರ ಸಮೀಪ ಭೀಕರ ಅಪಘಾತ| ಇಬ್ಬರು ಸ್ಥಳದಲ್ಲೇ ಸಾವು; ಮತ್ತೋರ್ವ ಗಂಭೀರ Read More »

ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಮುಸ್ಲಿಂ ವಿದ್ಯಾರ್ಥಿನಿ| ಪೊಲೀಸ್ ಹುಡುಗನ ಜೊತೆಗಿನ ಸ್ನೇಹವೇ ಮುಳುವಾಯಿತೇ?

ಸಮಗ್ರ ನ್ಯೂಸ್: ವಿದ್ಯಾರ್ಥಿನಿಯೊಬ್ಬಳು ಡೆತ್ ನೋಟ್ ಬರೆದಿಟ್ಟು ಏಳನೇ ಮಹಡಿ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಬಿನ್ನಿ ಮಿಲ್ ಬಳಿಯ ಪೊಲೀಸ್ ಕ್ವಾರ್ಟರ್ಸ್ನಲ್ಲಿ ನಡೆದಿದೆ. ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಬಿ.ಎಸ್ ಸಿ ಕಂಪ್ಯೂಟರ್ ಸೈನ್ಸ್ ಓದುತ್ತಿದ್ದ ಆಯಿಶಾ ಬಿ.ಆರ್ ಮೃತ ವಿದ್ಯಾರ್ಥಿನಿ. ಇಂದು(ಏ.30) ಬೆಳಗ್ಗೆ ಬಿನ್ನಿ ಮಿಲ್ ಸಮೀಪದ ಪೊಲೀಸ್ ಕ್ವಾರ್ಟರ್ಸ್ನ ಏಳನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅಲ್ಲದೇ ಕೈ ಮೇಲೆ ಭೀಮೇಶ್ ಎನ್ನುವ ಹೆಸರಿನ ಜೊತೆಗೆ ಆತನ ಮೊಬೈಲ್ ನಂಬರ್ ಕೂಡ

ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಮುಸ್ಲಿಂ ವಿದ್ಯಾರ್ಥಿನಿ| ಪೊಲೀಸ್ ಹುಡುಗನ ಜೊತೆಗಿನ ಸ್ನೇಹವೇ ಮುಳುವಾಯಿತೇ? Read More »