May 2023

ಉಜಿರೆ: ಕಾಂಗ್ರೆಸ್ ಮುಖಂಡ ಸಂಚರಿಸುತ್ತಿದ್ದ ಕಾರಿಗೆ ಕಲ್ಲೇಟು

ಸಮಗ್ರ ನ್ಯೂಸ್: ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಸಂಚರಿಸುತ್ತಿದ್ದ ಕಾರಿನ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ಮಾಡಿದ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಬಾರ್‌& ರೆಸ್ಟೋರೆಂಟ್ ಮಾಲೀಕ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿರುವ ಪ್ರವೀಣ್ ಫರ್ನಾಂಡೀಸ್ ಸಂಚರಿಸುತ್ತಿದ್ದ ಪಜಿರೋ ಕಾರಿಗೆ ಉಜಿರೆ ಅನುಗ್ರಹ ಶಾಲೆಯ ಬಳಿ ಕಲ್ಲು ತೂರಾಟ ನಡೆಸಿದ್ದಾರೆ. ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಆಪ್ತರಾಗಿ ಗುರುತಿಸಿಕೊಂಡಿದ್ದ ಪ್ರವೀಣ್ ಚುನಾವಣಾ ಪ್ರಚಾರಕ್ಕೆ ಜೊತೆಯಲ್ಲಿ ಹೋಗುತ್ತಿದ್ದರು. ಇದೇ ವಿಚಾರದಲ್ಲಿ […]

ಉಜಿರೆ: ಕಾಂಗ್ರೆಸ್ ಮುಖಂಡ ಸಂಚರಿಸುತ್ತಿದ್ದ ಕಾರಿಗೆ ಕಲ್ಲೇಟು Read More »

ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ| ಹಲವು ಉಚಿತಗಳಿಗೆ ಮೊರೆಹೋದ ಕೇಸರಿ ಪಾಳಯ

ಸಮಗ್ರ ನ್ಯೂಸ್: ಬಿಜೆಪಿ ಪ್ರಜಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಗಿದೆ. ಈ ವೇಳೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಬಿಜೆಪಿ ಪ್ರಜಾ ಪ್ರಣಾಳಿಕೆ ಬಿಡುಗಡೆ ಮಾಡಿದರು. ಈ ವೇಳೆ ಸಿಎಂ ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಡಿ.ವಿ. ಸದಾನಂದಗೌಡ ಮೊದಲಾದವರು ಉಪಸ್ಥಿತರಿದ್ದರು. ಬಿಜೆಪಿ ಪ್ರಜಾ ಪ್ರಣಾಳಿಕೆಯಲ್ಲಿ ಕೃಷಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಈಗಾಗಲೇ ಬಜೆಟ್ ನಲ್ಲಿಯೂ ಕೃಷಿಗೆ ಆದ್ಯತೆ ನೀಡಿದ್ದೇವೆ. ಸುಮಾರು 2 ವರ್ಷ ಕೊರೊನಾ ದಿಂದಾಗಿ ಆರ್ಥಿಕ

ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ| ಹಲವು ಉಚಿತಗಳಿಗೆ ಮೊರೆಹೋದ ಕೇಸರಿ ಪಾಳಯ Read More »

ಹವಾಮಾನ ವರದಿ; ಇಂದಿನಿಂದ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ| 11 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್

ಸಮಗ್ರ ನ್ಯೂಸ್: ಇಂದಿನಿಂದ ರಾಜ್ಯದ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಗಳಿವೆ. ಹೀಗಾಗಿ ರಾಜ್ಯ ಹವಾಮಾನ ಇಲಾಖೆ 11 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ ಘೋಷಿಸಿದೆ. ಬಾಗಲಕೋಟೆ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಮೈಸೂರು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ನ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿ ವೇಳೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ. ಭಾನುವಾರ ಬೆಳಿಗ್ಗೆ

ಹವಾಮಾನ ವರದಿ; ಇಂದಿನಿಂದ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ| 11 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ Read More »

‘ನಾನು ದೇವೇಗೌಡರ ನಿಯತ್ತಿನ ನಾಯಿ’| ಶಾಸಕರ ಮಾತಿಗೆ ಭಾವುಕರಾದ ದೇವೇಗೌಡ್ರು

ಸಮಗ್ರ ನ್ಯೂಸ್: ಮಾಗಡಿ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಎ.ಮಂಜುನಾಥ್‌ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಕಣ್ಣೀರು ಹಾಕಿದ ಪ್ರಸಂಗ ನಡೆಯಿತು. ಪಟ್ಟಣದ ಕೋಟೆ ಮೈದಾನದಲ್ಲಿ ಶನಿವಾರ ಪ್ರಚಾರ ಸಭೆಯಲ್ಲಿ ಮಂಜುನಾಥ್‌ ಮಾತುಗಳನ್ನು ಆಲಿಸುತ್ತಿದ್ದ ದೇವೇಗೌಡರು ಒಂದ್‌ಕ್ಷಣ ಭಾವೋದ್ವೇಗಕ್ಕೆ ಒಳಗಾದರು. ಕಾಂಗ್ರೆಸ್‌ ಪಕ್ಷದಲ್ಲಿ ನನಗೆ ಅನ್ಯಾಯವಾಗುತ್ತಿದೆ ಎಂದು ನನಗೆ ಕರೆ ಮಾಡಿ ದೇವೇಗೌಡರು ಕರೆದು 2018ರಲ್ಲಿ ಜೆಡಿಎಸ್‌ ಶಾಸಕನಾಗಿ ಮಾಡಿದರು. ಸಮ್ಮಿಶ್ರ ಸರ್ಕಾರದಲ್ಲಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ನೀಡಿದ ಅನುದಾನದಲ್ಲಿ ಕ್ಷೇತ್ರದಲ್ಲಿ

‘ನಾನು ದೇವೇಗೌಡರ ನಿಯತ್ತಿನ ನಾಯಿ’| ಶಾಸಕರ ಮಾತಿಗೆ ಭಾವುಕರಾದ ದೇವೇಗೌಡ್ರು Read More »

ಗುಡ್ ನ್ಯೂಸ್; ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಇಳಿಕೆ

ಸಮಗ್ರ ನ್ಯೂಸ್: ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 171.50 ರೂ.ಗೆ ಇಳಿಕೆಯಾಗಿದ್ದು, ಗ್ರಾಹಕರಿಗೆ ಕೊಂಚ ನಿರಾಳವಾಗಿದೆ. ಇದರೊಂದಿಗೆ 19 ಕೆಜಿ ಎಲ್ ಪಿಜಿ ಸಿಲಿಂಡರ್ ಬೆಲೆ 1856.50 ರೂ.ಗೆ ಇಳಿಕೆಯಾಗಿದೆ. ಮೇ. 1 ರ ಇಂದು 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 171.50 ರೂ.ಗೆ ಇಳಿಸಲಾಗಿದೆ. ಈ ಮೂಲಕ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 1,856.50 ರೂ.ಇದೆ ಆದಾಗ್ಯೂ, ದರಗಳ ಕಡಿತವು ವಾಣಿಜ್ಯ ಅನಿಲ ಸಿಲಿಂಡರ್ ಬಳಕೆದಾರರಿಗೆ ಮಾತ್ರ. ದೇಶೀಯ ಎಲ್ಪಿಜಿ

ಗುಡ್ ನ್ಯೂಸ್; ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಇಳಿಕೆ Read More »

ಉಪ್ಪಿನಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ಕಾಲೇಜು ವಿದ್ಯಾರ್ಥಿ ಸಾವು

ಸಮಗ್ರ ನ್ಯೂಸ್: ಕೆಂಪಿಮಜಲು ನೇತ್ರಾವತಿ ನದಿಯ ಸನ್ಯಾಸಿ ಕಯ ಎಂಬಲ್ಲಿ ಸಂಬಂಧಿಕನ ಜೊತೆ ಮೀನು ಹಿಡಿಯಲು ತೆರಳಿದ್ದ ಕಾಲೇಜು ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ವರದಿಯಾಗಿದೆ. ಮೃತಪಟ್ಟ ವಿದ್ಯಾರ್ಥಿಯನ್ನು ಬಜತ್ತೂರು ನಿವಾಸಿ ಓಡಿಯಪ್ಪ ಮತ್ತು ಗೋಪಿ ಎಂಬವರ ಪುತ್ರ ರೂಪೇಶ್ (17) ಎಂದು ಗುರುತಿಸಲಾಗಿದೆ. ರೂಪೇಶ್ ಉಪ್ಪಿನಂಗಡಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿದ್ದಾನೆ. ಕಟ್ಟೆಚ್ಚಾರ್ ಎಂಬಲ್ಲಿನ ತನ್ನ ಸಂಬಂಧಿಕರ ಮನೆಗೆ ಹೋಗಿದ್ದ ರೂಪೇಶ್, ಅಲ್ಲಿಂದ ಭಾನುವಾರ ಸಂಬಂಧಿಕ ಅಖಿಲೇಶ್ ಎಂಬಾತನೊಂದಿಗೆ ನೇತ್ರಾವತಿ

ಉಪ್ಪಿನಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ಕಾಲೇಜು ವಿದ್ಯಾರ್ಥಿ ಸಾವು Read More »