May 2023

ಅಳಿವಿನಂಚಿನಲ್ಲಿರುವ ನಕ್ಷತ್ರ ಆಮೆ ನೀವು ನೋಡಿದ್ದೀರಾ?

ಸಮಗ್ರ ನ್ಯೂಸ್: ಕೆಲವರು ಚಿಪ್ಪು ಮತ್ತು ಮಾಂಸಕ್ಕಾಗಿ ಆಮೆಯನ್ನು ಕಳ್ಳ ಬೇಟೆಯಾಡುತ್ತಾರೆ. ಇದರಿಂದಾಗಿ ಈ ಪ್ರಾಣಿಯು ಅಳಿವಿನಂಚಿನಲ್ಲಿದೆ ಎಂದು ಅರಣ್ಯ ಇಲಾಖೆ ಮಾಹಿತಿ ನೀಡಿದೆ. ಪ್ರಖ್ಯಾತ ವನ್ಯಜೀವಿಧಾಮ ಕಪ್ಪತಗುಡ್ಡದ ಅಂಚಿನಲ್ಲಿರುವ ಶೆಟ್ಟಿಕೆರೆಯಲ್ಲಿ ಅಪರೂಪದ ಆಮೆಯೊಂದು ಕಾಣಿಸಿಕೊಂಡಿದೆ. ಅಳಿವಿನಂಚಿನಲ್ಲಿರುವ ನಕ್ಷತ್ರ ಆಮೆ ಶೆಟ್ಟಿಕೆರೆಯಲ್ಲಿ ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಕುತೂಹಲ ಹುಟ್ಟಿಸಿದೆ. ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಶೆಟ್ಟಿಕೆರಿ ಗ್ರಾಮದಲ್ಲಿರುವ ಕಾಣಿಸಿಕೊಂಡಿರುವ ನಕ್ಷತ್ರ ಆಮೆ “ಟೆಸ್ಟುಡಿನಿಡೆ” ಕುಟುಂಬಕ್ಕೆ ಸೇರಿದೆ ಎಂದು ಹೇಳಲಾಗಿದೆ. ಇದರ ವೈಜ್ಞಾನಿಕ ಹೆಸರು “ಜಿಯೋಚಲೋನ್ ಎಲಗನ್ಸ್” ಎಂದಾಗಿದ್ದು ಇದರ […]

ಅಳಿವಿನಂಚಿನಲ್ಲಿರುವ ನಕ್ಷತ್ರ ಆಮೆ ನೀವು ನೋಡಿದ್ದೀರಾ? Read More »

ಮಹಿಳೆ ಜತೆ ಬಸ್ ಏರಿದ ಶ್ವಾನ…!

ಸಮಗ್ರ ನ್ಯೂಸ್: ನಿತ್ಯ ಪ್ರೀತಿಯಿಂದ ಆರೈಕೆ ಮಾಡುವ ಮನೆ ಕೆಲಸದ ಮಹಿಳೆಯೊಂದಿಗೆ ಶ್ವಾನವು ಬಸ್ ಏರಿದ ಘಟನೆ ಬ್ರಹ್ಮಾವರದ ಉಳ್ಳೂರು ಅಮ್ಮುಂಜೆ ಬಳಿ ನಡೆದಿದೆ. ನಿತ್ಯ ಅನ್ನ ಹಾಕುವ ಮಹಿಳೆಯ ಮೇಲಿನ ಪ್ರೀತಿ ಹಾಗೂ ನಿಷ್ಠೆಯಿಂದ ಮನೆಯಿಂದ ತೆರಳುವಾಗ ಶ್ವಾನವೂ ಬಸ್‌ ನಿಲ್ದಾಣಕ್ಕೆ ಬಂದಿದೆ. ಮಹಿಳೆ ಬಸ್‌ ಏರಿದಾಗ ತಾನೂ ಹತ್ತಿದ್ದು ನಿರ್ವಾಹಕರು, ಪ್ರಯಾಣಿಕರು ಗದರಿಸಿದರೂ ಬಗ್ಗಲಿಲ್ಲ. ಜೋರು ಮಾಡಿದಾಗ ವಿರೋಧಿಸಿ ಬೊಗಳಿತು ಏನಃ ಇಳಿಯಲು ಒಪ್ಪಲಿಲ್ಲ. ಕೊನೆಗೆ ಮಹಿಳೆಯೇ ಇಳಿದಾಗ ಆಕೆಯೊಂದಿಗೆ ಶ್ವಾನ ಖುಷಿಯಿಂದ ಕೆಳಗಿಳಿದ

ಮಹಿಳೆ ಜತೆ ಬಸ್ ಏರಿದ ಶ್ವಾನ…! Read More »

ಸಿದ್ದರಾಮಯ್ಯ ಸಂಪುಟ ಭರ್ತಿ| 24 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕಾರ

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದ ಸಚಿವರಾಗಿ 24 ಮಂದಿ ಪ್ರಮಾಣವಚನ ಸ್ವೀಕರಿಸಿದ್ದು, ಈ ಮೂಲಕ ರಾಜ್ಯ ಸರ್ಕಾರದ ಸಂಪೂರ್ಣ ಸಚಿವ ಸಂಪುಟ ಅಸ್ತಿತ್ವಕ್ಕೆ ಬಂದಿದೆ. ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಸಚಿವರಿಗೆ ರಾಜ್ಯಪಾಲ ಥಾವರ್ಚಂದ್ ಗೆಹಲೋಟ್ ಅವರು ಪ್ರಮಾಣವಚನ ಭೋದಿಸಿದರು. ಶಾಸಕರಾದ ಎಚ್.ಕೆ.ಪಾಟೀಲ, ಕೃಷ್ಣ ಬೈರೇಗೌಡ, ಎನ್.ಚಲುವರಾಯಸ್ವಾಮಿ, ಕೆ.ವೆಂಕಟೇಶ್, ಡಾ.ಎಚ್.ಸಿ.ಮಹದೇವಪ್ಪ, ಈಶ್ವರ ಖಂಡ್ರೆ, ಕೆ.ಎನ್.ರಾಜಣ್ಣ, ದಿನೇಶ್ ಗುಂಡೂರಾವ್, ಶರಣಬಸಪ್ಪ ದರ್ಶನಾಪುರ, ಶಿವಾನಂದ ಪಾಟೀಲ, ಆರ್.ಬಿ.ತಿಮ್ಮಾಪುರ, ಎಸ್.ಎಸ್.ಮಲ್ಲಿಕಾರ್ಜುನ,ಶಿವರಾಜ ತಂಗಡಗಿ, ಶರಣ ಪ್ರಕಾಶ ಪಾಟೀಲ, ಮಂಕಾಳ ಸುಬ್ಬ

ಸಿದ್ದರಾಮಯ್ಯ ಸಂಪುಟ ಭರ್ತಿ| 24 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕಾರ Read More »

ಕಾಣಿಯೂರು: ಪುಣ್ಚತ್ತಾರು ಶ್ರೀ ವಿಷ್ಣುಮೂರ್ತಿ ದೈವಸ್ಥಾನ, ಶ್ರೀ ಕಾಳಿಕಾಂಬ ದೇವಿ ದೇವಸ್ಥಾನದಲ್ಲಿ ಸುದರ್ಶನ ಹೋಮ

ಸಮಗ್ರ ನ್ಯೂಸ್: ಪುಣ್ಚತ್ತಾರು ವಿಷ್ಣುಪುರ ಕರಿಮಜಲು ಶ್ರೀ ವಿಷ್ಣುಮೂರ್ತಿ ದೈವಸ್ಥಾನ ಮತ್ತು ಶ್ರೀ ಕಾಳಿಕಾಂಬ ದೇವಿ ದೇವಸ್ಥಾನ ಮತ್ತು ಪರಿವಾರ ದೈವಗಳ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಜೂ.11ರಿಂದ ಜೂ.13ರವರೆಗೆ ನಡೆಯಲಿದ್ದು, ಆ ಪ್ರಯುಕ್ತ ವೇದಮೂರ್ತಿ ಶ್ರೀ ಸುಬ್ರಹ್ಮಣ್ಯ ಬಳ್ಳುಕ್ಕುರಾಯರವರ ನೇತೃತ್ವದಲ್ಲಿ ಕ್ಷೇತ್ರದಲ್ಲಿ ಸುದರ್ಶನ ಹೋಮ ಹಾಗೂ ಉಚ್ಚಾಟನ ಹೋಮ ಮೇ.25ರಂದು ನಡೆಯಿತು. ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಶೇಷಪ್ಪ ಗೌಡ ಬೆದ್ರಂಗಳ,ಆಡಳಿತ ಮೊಕ್ತೇಸರರು, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ವೆಂಕಟ್ರಮಣ

ಕಾಣಿಯೂರು: ಪುಣ್ಚತ್ತಾರು ಶ್ರೀ ವಿಷ್ಣುಮೂರ್ತಿ ದೈವಸ್ಥಾನ, ಶ್ರೀ ಕಾಳಿಕಾಂಬ ದೇವಿ ದೇವಸ್ಥಾನದಲ್ಲಿ ಸುದರ್ಶನ ಹೋಮ Read More »

ಪೇರಾಲು: ವಿಜೃಂಭಣೆಯ ಶ್ರೀ ಬಜಪ್ಪಿಲ ನೇಮೋತ್ಸವ (ಮಡಕ ಜಾತ್ರೆ)

ಸಮಗ್ರ ನ್ಯೂಸ್: ಮಂಡೆಕೋಲು ಗ್ರಾಮದ ಪೇರಾಲು ಶ್ರೀ ಬಜಪ್ಪಿಲ ಉಳ್ಳಾಕುಲು, ಶ್ರೀ ಧೂಮಾವತಿ ಮತ್ತು ಪರಿವಾರ ದೈವಗಳ ಕ್ಷೇತ್ರದಲ್ಲಿ ಶ್ರೀ ಬಜಪ್ಪಿಲ ನೇಮೋತ್ಸವ (ಮಡಕ ಜಾತ್ರೆ) ಮೇ26ರಂದು ನಡೆಯಿತು. ಬೆಳಗ್ಗೆ 8ಕ್ಕೆ ಭಂಡಾರ ತೆಗೆದ ಬಳಿಕ ಕುತ್ಯಾಡಿಯಲ್ಲಿ ಇತಿಹಾಸ ಪ್ರಸಿದ್ಧ ಅಡ್ಡನಪೆಟ್ಟು ನಡೆದ ಬಳಿಕ ಮಾಡಕ್ಕೆ ಭಂಡಾರ ಬಂದು ಶ್ರೀ ದೈವಗಳ ನೇಮೋತ್ಸವ ನಡೆಯಿತು. ಈ ವೇಳೆ ನೂರಾರು ಭಕ್ತರು ಸಿರಿಮುಡಿ ಗಂಧ ಪ್ರಸಾದ ಸ್ವೀಕರಿಸಿದರು.

ಪೇರಾಲು: ವಿಜೃಂಭಣೆಯ ಶ್ರೀ ಬಜಪ್ಪಿಲ ನೇಮೋತ್ಸವ (ಮಡಕ ಜಾತ್ರೆ) Read More »

ಸಂಪಾದಕೀಯ; ಕರಾವಳಿಗೆ ಕೈ ಕೊಟ್ಟ ಕಾಂಗ್ರೆಸ್

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭೆ ಚುನಾವಣೆ ಕಳೆದು ಸಿದ್ದರಾಮಯ್ಯ ನೇತೃತ್ವದ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಸೇರಿದಂತೆ 10 ಮಂದಿ ಈಗಾಗಲೇ ಸಂಪುಟ ರಚನೆ ಮಾಡಿದ್ದು, ಇಂದು(ಮೇ.27) 24 ಮಂದಿ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಬಾರಿ ಮಂತ್ರಿ ಸ್ಥಾನದ ಆಕಾಂಕ್ಷಿಗಳ ದಂಡು ಜಾಸ್ತಿನೇ ಇದ್ದರೂ ಕರಾವಳಿಗೆ ಒಂದಾದರೂ ಮಂತ್ರಿ ಸ್ಥಾನ ಲಭಿಸುವ ನಿರೀಕ್ಷೆ ಇತ್ತು. ಅವಿಭಜಿತ ದ.ಕ ಜಿಲ್ಲೆಯಲ್ಲಿ ಎರಡೇ ಸ್ಥಾನ ಗೆದ್ದಿರುವ ಕಾಂಗ್ರೆಸ್ ಉಳ್ಳಾಲ

ಸಂಪಾದಕೀಯ; ಕರಾವಳಿಗೆ ಕೈ ಕೊಟ್ಟ ಕಾಂಗ್ರೆಸ್ Read More »

ಕೈತಪ್ಪಿದ ಸಚಿವ ಸ್ಥಾನ| ರಾಜೀನಾಮೆಗೆ ಮುಂದಾದ ಬಿ.ಕೆ ಹರಿಪ್ರಸಾದ್

ಸಮಗ್ರ ನ್ಯೂಸ್: ಸಚಿವ ಸ್ಥಾನ ಆಕಾಂಕ್ಷಿಯಾಗಿದ್ದ ಹಿರಿಯ ಕಾಂಗ್ರೆಸ್ ಮುಖಂಡ, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕರಾಗಿದ್ದ ಬಿ.ಕೆ. ಹರಿಪ್ರಸಾದ್‌ಗೆ ಸಚಿವ ಸ್ಥಾನ ಕೈ ತಪ್ಪಿದ್ದು, ಇದರಿಂದ ಕೆಂಡಾಮಂಡಲವಾಗಿರುವ ಅವರು ರಾಜೀನಾಮೆಗೆ ಮುಂದಾಗಿದ್ದಾರೆ. ಬಿಜೆಪಿ ವಿರುದ್ಧ ಸೈದ್ಧಾಂತಿಕವಾಗಿ ತೀವ್ರ ವಾಗ್ದಾಳಿ ನಡೆಸುತ್ತಿದ್ದ ಹರಿಪ್ರಸಾದ್ ಅವರಿಗೆ ಕಾಂಗ್ರೆಸ್ ‌ಅಧಿಕಾರಕ್ಕೆ ಬಂದರೆ ಸಚಿವ ಸ್ಥಾನ ಸಿಗಲಿದೆ ಎಂಬ ನಿರೀಕ್ಷೆ ಇತ್ತು, ಅದರಂತೆ ಮೊದಲ ಸಚಿವ ಸಂಪುಟ ರಚನೆಯಲ್ಲಿಯೇ ಅವಕಾಶ ಸಿಗಲಿದೆ ಎಂಬ ಮಾತುಗಳು ಕೇಳಿ ಬಂದಿತ್ತು. ಆದರೆ ಮೊದಲ ಸಂಪುಟ ರಚನೆಯಲ್ಲೂ

ಕೈತಪ್ಪಿದ ಸಚಿವ ಸ್ಥಾನ| ರಾಜೀನಾಮೆಗೆ ಮುಂದಾದ ಬಿ.ಕೆ ಹರಿಪ್ರಸಾದ್ Read More »

ಹವಾಮಾನ ವರದಿ| ಕರಾವಳಿ ಮತ್ತು ದ. ಒಳನಾಡಿನ ಹಲವೆಡೆ ಮಳೆ ಸಾಧ್ಯತೆ

ಸಮಗ್ರ ನ್ಯೂಸ್’: ರಾಜ್ಯದಲ್ಲಿ ಮುಂದಿನ ಮೂರ್ನಾಲ್ಕು ದಿನ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ. ತಿಂಗಳಾಂತ್ಯದಿಂದ ಹೆಚ್ಚಿನ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 30 ಹಾಗೂ 31ರಂದು ಹೆಚ್ಚಿನ ಮಳೆಯಾಗಲಿದ್ದು, ಮೇ 31ರಿಂದ ಉತ್ತರ ಒಳನಾಡು ಜಿಲ್ಲೆಗಳಲ್ಲಿಯೂ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಗುರುವಾರ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಅತಿ ಹೆಚ್ಚು 5 ಸೆಂ.ಮೀ. ಮಳೆಯಾದ ವರದಿಯಾಗಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ, ಹಾಸನದ ಕೊಣನೂರು, ವಿಜಯ ನಗರದ

ಹವಾಮಾನ ವರದಿ| ಕರಾವಳಿ ಮತ್ತು ದ. ಒಳನಾಡಿನ ಹಲವೆಡೆ ಮಳೆ ಸಾಧ್ಯತೆ Read More »

ಬದಲಾದ ಸರ್ಕಾರ; ಕೆಲಸ ಕಳೆದುಕೊಂಡ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ

ಸಮಗ್ರ ನ್ಯೂಸ್: ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ಹಿನ್ನಲೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ ಅವರಿಗೆ ಕೆಲಸದಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ವರದಿಯಾಗಿದೆ. ಪ್ರವೀಣ್ ಹತ್ಯೆಯಾದ ಬಳಿಕ ಈ ಹಿಂದೆ ಬಿಜೆಪಿ ಸರಕಾರ ಆಡಳಿತದಲ್ಲಿದ್ದಾಗ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ಮಾನವೀಯ ನೆಲೆಯಲ್ಲಿ ಮುಖ್ಯಮಂತ್ರಿ ವಿಶೇಷಾಧಿಕಾರ ಬಳಸಿ ಕೆಲಸ ಕೊಡಿಸುವುದಾಗಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ದ.ಕ.ಸಂಸದ ನಳಿನ್ ಕುಮಾರ್ ಕಟೀಲ್ ಅವರು

ಬದಲಾದ ಸರ್ಕಾರ; ಕೆಲಸ ಕಳೆದುಕೊಂಡ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ Read More »

ಬೆಳ್ತಂಗಡಿ: ಪ್ರಯಾಣಿಕರ ಕಾರು ಬ್ರೇಕ್ ಫೈಲ್ ಆಗಿ ಧರೆಗೆ ಡಿಕ್ಕಿ

ಸಮಗ್ರನ್ಯೂಸ್: ಇಲ್ಲಿಯ ಚಾರ್ಮಾಡಿಯ ಕೃಷ್ಣನಗರ ಪಾಂಡಿಕಟ್ಟೆಯಲ್ಲಿ ಪ್ರಯಾಣಿಕರ ಕಾರು ಬ್ರೇಕ್ ಫೈಲ್ ಆಗಿ ಧರೆಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಓರ್ವರು ಗಂಭೀರ ಗಾಯಗೊಂಡ ಘಟನೆ ಮೇ.26 ರಂದು ಮಧ್ಯಾಹ್ನ ನಡೆದಿದೆ.ಸಾಗರ ಕಡೆಯಿಂದ ಕುಟುಂಬವೊಂದು ಕಾರಿನಲ್ಲಿ ಬರುತ್ತಿರುವ ಸಮಯ ಕಾರು ಬ್ರೇಕ್ ಫೈಲ್ ಆಗಿ ಘಾಟಿಯ ಧರೆಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಕಾರಿನಲ್ಲಿದ್ದ ವಿನೋದ್ ಸಾಗರ ಎಂಬುವವರು ಗಂಭೀರ ಗಾಯಗೊಂಡಿದ್ದು, ಕಾರಿನಲ್ಲಿದ್ದ ನಾಲ್ಕು ಮಂದಿ ಮಹಿಳೆಯರಿಗೂ ಗಾಯಗಳಾಗಿದೆ. ಕಕ್ಕಿಂಜೆ ಕೃಷ್ಣ ಆಸ್ಪತ್ರೆಗೆ ತಕ್ಷಣ ದಾಖಲಿಸಿದ್ದು, ವಿನೋದ್ ಅವರನ್ನು

ಬೆಳ್ತಂಗಡಿ: ಪ್ರಯಾಣಿಕರ ಕಾರು ಬ್ರೇಕ್ ಫೈಲ್ ಆಗಿ ಧರೆಗೆ ಡಿಕ್ಕಿ Read More »