ಕಡಬ: ವಿದ್ಯುತ್ ಕಂಬದಲ್ಲಿ ದುರಸ್ತಿ ವೇಳೆ ಕರೆಂಟ್ ಶಾಕ್| ಪವರ್ ಮ್ಯಾನ್ ಗಂಭೀರ; ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ವಿದ್ಯುತ್ ಕಂಬವೇರಿ ಲೈನ್ ದುರಸ್ತಿ ಮಾಡುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಪವರ್ ಮ್ಯಾನ್ ಒಬ್ಬರು ಗಂಭೀರ ಗಾಯಗೊಂಡ ಘಟನೆ ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ತಲೆಕ್ಕಿ ಎಂಬಲ್ಲಿ ನಡೆದಿದೆ.

Ad Widget ... ..

ಗಾಯಗೊಂಡ ಪವರ್ ಮ್ಯಾನ್ ಅನ್ನು ಬಾಗಲಕೋಟೆ ಜಿಲ್ಲೆಯ ದ್ಯಾಮಣ್ಣ ದೊಡ್ಮನಿ ಎಂದು ಗುರುತಿಸಲಾಗಿದೆ. ಇವರು
ತಲೆಕ್ಕಿ ಬಳಿ ವಿದ್ಯುತ್ ಕಂಬ ಹತ್ತಿ ದುರಸ್ತಿ ಮಾಡುತ್ತಿದ್ದ ವೇಳೆ ಹಠಾತ್ ವಿದ್ಯುತ್ ಪ್ರವಹಿಸಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

Ad Widget

ಸ್ಥಳೀಯರು ಮರದ ಕೋಲಿನ ಸಹಾಯದಿಂದ ಮೇಲಿನಿಂದ ಅವರನ್ನು ಕೆಳಗಿಳಿಸಿದ್ದು ಬಳಿಕ ಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಥಳಕ್ಕೆ ‌ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *