Ad Widget .

ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಐದು ನಿಯಮಗಳು ಜಾರಿ

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತವಾಗಿ ಬಸ್ ಸೇವೆ ಕಲ್ಪಿಸಲು ಕಾಂಗ್ರೆಸ್ ಸರ್ಕಾರ ಸನ್ನದ್ಧವಾಗಿದೆ. ಆದರೆ, ಇದಕ್ಕೆ ಕೆಲವು ನಿಯಮಾವಳಿಯನ್ನು ರೂಪಿಸಲಾಗಿದೆ. ಏಸಿ ಬಸ್, ಡಿಲಕ್ಸ್ ಬಸ್ ಗಳನ್ನು ಹೊರತುಪಡಿಸಿ ಸಾಮಾನ್ಯ ಬಸ್ ಗಳಲ್ಲಿ ಎಲ್ಲಾ ವರ್ಗಗಳ ಮಹಿಳೆಯರು ಕರ್ನಾಟಕ ರಾಜ್ಯದೆಲ್ಲೆಡೆ ಎಲ್ಲಿ ಬೇಕಾದರೂ ಉಚಿತವಾಗಿ ಸಂಚರಿಸಬಹುದಾಗಿದೆ. ಈ ನಿಯಮವು ಕರ್ನಾಟಕದ ಮಹಿಳೆಯರಿಗೆ ಮಾತ್ರ ಅನ್ವಯವಾಗುತ್ತದೆ.

Ad Widget . Ad Widget .

ಕಾಂಗ್ರೆಸ್ ನ ಗ್ಯಾರಂಟಿ ಕಾರ್ಡ್ ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಕೆಲವು ನಿಬಂಧನೆಗಳನ್ನು ರೂಪಿಸಲಾಗಿದೆ. ಕರ್ನಾಟಕದ ಎಲ್ಲಾ ಮಹಿಳೆಯರಿಗೆ ಕರ್ನಾಟಕದೊಳಗೆ ಸಂಚರಿಸುವ ಬಸ್ ಗಳಲ್ಲಿ ಮಾತ್ರ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಹೊರ ರಾಜ್ಯಗಳ ಮಹಿಳೆಯರಿಗೆ ಮತ್ತು ಹೊರ- ರಾಜ್ಯಗಳಿಗೆ ಹೋಗುವ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶವಿರುವುದಿಲ್ಲ ಎಂದು ತಿಳಿದುಬಂದಿದೆ.

Ad Widget . Ad Widget .

ರೇಷನ್ ಕಾರ್ಡ್, ಆಧಾರ್, ವೋಟರ್ ಐಡಿ ತೋರಿಸಿ ಮಹಿಳೆಯರಿಗೆ ಬಸ್ ಗಳಲ್ಲಿ ಪ್ರಯಾಣಿಸಬಹುದು, ಇದಕ್ಕೆಂದು ಪ್ರತ್ಯೇಕ ಪಾಸ್ ನೀಡಲಾಗುವುದಿಲ್ಲ ಎಂದು ರಾಜ್ಯ ಸರ್ಕಾರ ಹೇಳಿದೆ. ಪ್ರತ್ಯೇಕ ಪಾಸ್ ಗಳ ಬದಲಿಗೆ, ಮಹಿಳೆಯರು ತಮ್ಮ ಭಾವಚಿತ್ರ ಹಾಗೂ ವಿಳಾಸ ದೃಢೀಕರಣಗೊಂಡಿರುವ ರೇಷನ್ ಕಾರ್ಡ್, ಆಧಾರ್ ಕಾರ್ಡ್ ಅಥವಾ ಮತದಾರರ ಗುರುತಿನ ಚೀಟಿಯನ್ನು ತೋರಿಸಿ ಪ್ರಯಾಣಿಸಬಹುದಾಗಿದೆ.

ಏಸಿ ಬಸ್, ಡಿಲಕ್ಸ್ ಬಸ್ಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶವಿರುವುದಿಲ್ಲ. ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ (KSRTC) ಸಾಮಾನ್ಯ ಬಸ್ ಗಳಲ್ಲಿ ಮಾತ್ರ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶವಿರಲಿದೆ. ನಗರ ಸಾರಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಸಾಮಾನ್ಯ ಬಸ್ ಗಳಲ್ಲಿ ಮಾತ್ರ ಮಹಿಳೆಯರಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ. ಉದಾಹರಣೆಗೆ, ಬೆಂಗಳೂರು ನಗರದಲ್ಲಿ ಬಿಎಂಟಿಸಿ(BMTC) ಸಂಸ್ಥೆ ನಾಗರಿಕರಿಗೆ ಉಚಿತ ಬಸ್ ಸೇವೆ ನೀಡುತ್ತಿದೆ, ಆದರೆ ಈಗ ಬೆಂಗಳೂರು ನಗರದಲ್ಲಿ ವಾಸವಿರುವ ಮಹಿಳೆಯರು ಬಿಎಂಟಿಸಿಯ ವೋಲ್ವೊ ಬಸ್ ಗಳನ್ನು (AC Bus) ಹೊರತುಪಡಿಸಿ ಯಾವುದೇ ಸಾಮಾನ್ಯ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ.

ಹೊರ ರಾಜ್ಯಗಳಿಂದ ಕರ್ನಾಟಕಕ್ಕೆ ಸಂಬಂಧಿಕರ ಮನೆಗೆ ಇಲ್ಲವೇ ಪ್ರವಾಸಕ್ಕೆ ಬರುವಂತ ಮಹಿಳೆಯರಿಗೆ ಈ ಸೌಲಭ್ಯ ಅನ್ವಯಿಸುವುದಿಲ್ಲ. ಇಲ್ಲಿ ಅವರ ಆಧಾರ್ ಕಾರ್ಡ್, ರೇಷನ್ ಕಾರ್ಡ್ ಅಥವಾ ಮತದಾರರ ಗುರುತಿನ ಚೀಟಿ ಇದ್ದಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶವಿರುತ್ತದೆ. KSRTCಯ ಸಾಮಾನ್ಯ ಬಸ್ ಗಳಲ್ಲಿ ಪ್ರವೇಶವಿದೆ ಎಂದ ಮಾತ್ರಕ್ಕೆ ಹೊರರಾಜ್ಯಗಳಿಗೆ ಪ್ರವೇಶ ಮಾಡಲು ಅವಕಾಶವಿದೆಯೇ ಎಂಬ ಪ್ರಶ್ನೆಗೂ ಸರ್ಕಾರ ಉತ್ತರ ಕೊಟ್ಟಿದೆ. ಅಂದರೆ, ಕರ್ನಾಟಕದ ಗಡಿಯೊಳಗೆ ಮಾತ್ರ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಅನ್ಯ ರಾಜ್ಯಗಳ ಊರುಗಳಿಗೆ ಹೋಗುವ ಬಸ್ ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯವು ಅನ್ವಯಿಸುವುದಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ.

ಎಲ್ಲಾ ನಾಲ್ಕು ನಿಗಮಗಳ ಬಸ್ ಗಳಲ್ಲೂ ಉಚಿತ ಪ್ರಯಾಣದ ಅವಕಾಶ ಇರುತ್ತದೆ ಎಂದು ರಾಜ್ಯ ಸರ್ಕಾರ ಹೇಳಿದೆ. KSRTCಯ ಅಡಿಯಲ್ಲಿ ಕರ್ನಾಟಕದ ನಾಲ್ಕು ಪ್ರಾಂತ್ಯಗಳಲ್ಲಿ ನಾಲ್ಕು ಸಾರಿಗೆ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದ್ದು (ಈಶಾನ್ಯ ಸಾರಿಗೆ, ವಾಯುವ್ಯ ಸಾರಿಗೆ ಇತ್ಯಾದಿ), ಸಾಮಾನ್ಯ ಬಸ್ ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದಾಗಿದೆ.

Leave a Comment

Your email address will not be published. Required fields are marked *