Ad Widget .

ಶವಸಂಭೋಗ ಅತ್ಯಾಚಾರವೆಂದು ಪರಿಗಣಿಸಲಾಗದು – ಕರ್ನಾಟಕ ಹೈಕೋರ್ಟ್

ಸಮಗ್ರ ನ್ಯೂಸ್: ಮೃತ ಮಹಿಳೆಯ ಮೇಲಿನ ಅತ್ಯಾಚಾರವು ಐಪಿಸಿ ಸೆಕ್ಷನ್ 376 ರ ನಿಬಂಧನೆಗಳ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗುವುದಿಲ್ಲ ಎಂದು ಪರಿಗಣಿಸಿರುವ ಕರ್ನಾಟಕ ಹೈಕೋರ್ಟ್, ‘ಡೆಡ್ ಬಾಡಿ’ ಎಂಬ ಪದವನ್ನು ಪರಿಚಯಿಸಲು ಈ ಸೆಕ್ಷನ್ ಗೆ ತಿದ್ದುಪಡಿ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ.

Ad Widget . Ad Widget .

ಮೃತದೇಹಗಳ ಜೊತೆ ಸಂಭೋಗ ನಡೆಸುವವರಿಗೆ ಅತ್ಯಾಚಾರ ಅಪರಾಧದ ಅಡಿಯಲ್ಲಿ ಶಿಕ್ಷೆ ವಿಧಿಸುವ ಅವಕಾಶ ಇಲ್ಲದಿರುವ ಕಾರಣ, ಭಾರತೀಯ ದಂಡ ಸಂಹಿತೆ-1860ರ (ಐಪಿಸಿ) ಕಲಂ 377ಕ್ಕೆ (ಅಸ್ವಾಭಾವಿಕ ಲೈಂಗಿಕ ಅಪರಾಧಗಳು) ತಿದ್ದುಪಡಿ ತರಬೇಕು ಅಥವಾ ಈ ನಿಟ್ಟಿನಲ್ಲಿ ಹೊಸ ನಿಬಂಧನೆಗಳನ್ನು ರೂಪಿಸಬೇಕು‘ ಎಂದು ಹೈಕೋರ್ಟ್, ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ.

Ad Widget . Ad Widget .

ಕೆನಡಾ, ಇಂಗ್ಲೆಂಡ್, ನ್ಯೂಜಿಲೆಂಡ್ ಮತ್ತು ದಕ್ಷಿಣ ಆಫ್ರಿಕಾ ಸೇರಿದಂತೆ ಹಲವು ದೇಶಗಳಲ್ಲಿ ಮಹಿಳೆಯರ ಮೃತದೇಹದ ಜೊತೆ ಎಸಗುವ ಅಪರಾಧ ಶಿಕ್ಷಾರ್ಹ ಎನಿಸಿದೆ. ಇಂತಹ ನಿಯಮಗಳನ್ನು ಭಾರತದಲ್ಲಿಯೂ ಪರಿಚಯಿಸಬೇಕಿದೆ. ಇದರಿಂದ ಮೃತದೇಹದ ಘನತೆಯನ್ನು ರಕ್ಷಣೆ ಮಾಡಿದಂತಾಗುತ್ತದೆ ಎಂದು ಕೋರ್ಟ್ ಹೇಳಿದೆ.

ಪ್ರಕರಣವೊಂದರ ವಿಚಾರಣೆಗೆ ಸಂಬಂಧಿಸಿದಂತೆ ನ್ಯಾಯಾಲಯ, ಆರೋಪಿಯು ಮೊದಲು ಸಂತ್ರಸ್ತೆಯನ್ನು ಕೊಂದು ನಂತರ ಮೃತದೇಹದೊಂದಿಗೆ ಲೈಂಗಿಕ ಸಂಭೋಗ ನಡೆಸಿದ್ದಾನೆ ಎಂದು ಹೇಳಿದೆ. IPC ಸೆಕ್ಷನ್ 375 ಮತ್ತು 377 ರ ಅಡಿಯಲ್ಲಿ ವ್ಯಾಖ್ಯಾನಿಸಲಾದ ಅಸ್ವಾಭಾವಿಕ ಲೈಂಗಿಕ ಕ್ರಿಯೆ ಅಪರಾಧವೆಂದು ಪರಿಗಣಿಸಲಾಗುವುದಿಲ್ಲ .IPC ಯ ಸೆಕ್ಷನ್ 376 ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧ ಎಂದು ಕರೆಯಲಾಗುವುದಿಲ್ಲ. ಅಂತಿಮವಾಗಿ, ಇದನ್ನು ಸ್ಯಾಡಿಸಂ ಮತ್ತು ನೆಕ್ರೋಫಿಲಿಯಾ ಎಂದು ಪರಿಗಣಿಸಬಹುದು ಎಂಬುದಾಗಿ ತಿಳಿಸಿದೆ.

Leave a Comment

Your email address will not be published. Required fields are marked *