Ad Widget .

ಕುಕ್ಕೆ ಸುಬ್ರಹ್ಮಣ್ಯ: ಸಾರಿಗೆ ಬಸ್ ತಡೆದು ತಿವಿದ ಕಾಡಾನೆ| ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಸ್ಲೀಪರ್ ಬಸ್ ಗೆ ಕಾಡಾನೆಯೊಂದು ತಡೆದು ದಂತದಿಂದ ತಿವಿದ ಹಿನ್ನೆಲೆಯಲ್ಲಿ ಬಸ್ ಗೆ ಹಾನಿಯಾದ ಘಟನೆ ಕುಕ್ಕೆಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯ ಕೆಂಜಾಳ ಸಮೀಪದ ಅನಿಲ ಎಂಬಲ್ಲಿ ಗುರುವಾರ(ಜೂ.1) ತಡರಾತ್ರಿ ನಡೆದಿದೆ.

Ad Widget . Ad Widget .

ಪುತ್ತೂರಿನಿಂದ ಕಾಣಿಯೂರು ಮಾರ್ಗವಾಗಿ ಸುಬ್ರಹ್ಮಣ್ಯ ಮೂಲಕ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಚಾಲಕ ಅನಿಲ ಎಂಬಲ್ಲಿ ರಸ್ತೆ ಬದಿ ನಿಂತಿದ್ದ ಕಾಡಾನೆಯನ್ನು ಕಂಡು ತಪ್ಪಿಸಲು ಯತ್ನಿಸಿದರಾದರೂ, ಆನೆಯು ಬಸ್ಸಿನ ಎಡಭಾಗಕ್ಕೆ ದಂತದಿಂದ ತಿವಿದಿದೆ.

Ad Widget . Ad Widget .

ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದು, ಬಸ್ಸಿಗೆ ಹಾನಿಯಾಗಿದೆ‌. ಸ್ಥಳಕ್ಕೆ ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Comment

Your email address will not be published. Required fields are marked *