Ad Widget .

ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರನ್ನು ಪ್ರಾಣದ ಹಂಗು ತೊರೆದು ರಕ್ಷಿಸಿದ ಶಾಸಕ

ಸಮಗ್ರ ನ್ಯೂಸ್: ಮುಳುಗುತ್ತಿದ್ದ ಮೂವರು ಯುವಕರನ್ನು ಬಿಜೆಪಿ ಶಾಸಕರೊಬ್ಬರು ಸಮುದ್ರಕ್ಕೆ ಹಾರಿ ರಕ್ಷಿಸಿರುವ ಘಟನೆ ನಡೆದಿದ್ದು, ಶಾಸಕರು ಜನರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

Ad Widget . Ad Widget .

ಗುಜರಾತ್‌ನ ಅಮ್ರೇಲಿ ಜಿಲ್ಲೆಯಲ್ಲಿ ರಾಜುಲಾ ಶಾಸಕ ಹೀರಾ ಸೋಲಂಕಿ ಯುವಕರನ್ನು ರಕ್ಷಿಸಿದ್ದಾರೆ. ಬುಧವಾರ ಮಧ್ಯಾಹ್ನ ನಾಲ್ವರು ಯುವಕರು ಸಮುದ್ರ ಕೊಲ್ಲಿಯಲ್ಲಿ ಸ್ನಾನಕ್ಕೆ ತೆರಳಿದ್ದು, ಈ ಸಮಯದಲ್ಲಿ, ಅವರು ಆಳವಾದ ನೀರಿನಲ್ಲಿ ಮುಳುಗುತ್ತಿದ್ದರು. ಇದನ್ನು ಕಂಡ ಸ್ಥಳೀಯರು ಕಡಲ ತೀರದಲ್ಲಿರುವ ರಾಜುಲಾ ಬಿಜೆಪಿ ಶಾಸಕ ಹೀರಾ ಸೋಲಂಕಿ ಅವರಿಗೆ ಮಾಹಿತಿ ನೀಡಿದ್ದಾರೆ.

Ad Widget . Ad Widget .

ಶಾಸಕ ಬೋಟ್ ಸಹಾಯದಿಂದ ಸ್ಥಳಕ್ಕಾಗಮಿಸಿ ನೀರಿನಲ್ಲಿ ಮುಳುಗುತ್ತಿದ್ದ ಯುವಕರನ್ನು ರಕ್ಷಿಸಲು ಸಮುದ್ರಕ್ಕೆ ಹಾರಿದ್ದು, ಮೂವರು ಯುವಕರು ಸಕಾಲದಲ್ಲಿ ಹೊರಬಂದಿದ್ದಾರೆ. ಅದೇ ಸಮಯದಲ್ಲಿ, ಒಬ್ಬ ಯುವಕ ಪತ್ತೆಯಾಗಿಲ್ಲ, ಅವರ ಹುಡುಕಾಟದಲ್ಲಿ ಸುಮಾರು 2 ಗಂಟೆಗಳ ಕಾಲ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಲಾಯಿತು. ಇದಾದ ಬಳಿಕ ನಾಲ್ಕನೇ ಯುವಕನ ಮೃತದೇಹ ಪತ್ತೆಯಾಗಿದೆ.

Leave a Comment

Your email address will not be published. Required fields are marked *