Ad Widget .

ಚಲಿಸುತ್ತಿರುವ ಸ್ಕೂಟರ್ ನಲ್ಲಿ ಗಂಡು ಹೈಕ್ಳ ಡೀಪ್ ಲಿಪ್ ಲಾಕ್| ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಯ್ತು ವಿಡಿಯೋ

ಸಮಗ್ರ ನ್ಯೂಸ್: ಸೋಷಿಯಲ್ ಮೀಡಿಯಾದಲ್ಲಿ ಪ್ರತಿದಿನ ಒಂದಿಲ್ಲೊಂದು ವಿಡಿಯೋಗಳು ಸಖತ್ ವೈರಲ್ ಆಗುತ್ತಲೇ ಇರುತ್ತೇವೆ. ಸದ್ಯ, ಉತ್ತರ ಪ್ರದೇಶದಲ್ಲಿ ಅಂತಹದ್ದೇ ವಿಡಿಯೋವೊಂದು ಹಲ್ ಚಲ್
ಸೃಷ್ಟಿಸಿದ್ದು ಇದನ್ನು ನೋಡಿ, ನೆಟ್ಟಿಗರು ಕಿಡಿಕಾರಿದ್ದು, ಇಂತಹ ಕೆಲಸ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರನ್ನು ಒತ್ತಾಯಿಸಿದ್ದಾರೆ.

Ad Widget . Ad Widget .

ಈ ಘಟನೆ ಉತ್ತರ ಪ್ರದೇಶದ ರಾಂಪುರ ಜಿಲ್ಲೆಯಲ್ಲಿ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ವಿಡಿಯೋದಲ್ಲಿ ಮೂವರು ಯುವಕರು ಸ್ಕೂಟರ್‌ ಹೋಗುತ್ತಿರುವುದನ್ನು ಕಾಣಬಹುದು. ಹಿಂಬದಿಯ ಇಬ್ಬರು ಸವಾರರು ಪ್ರಪಂಚದ ಪರಿವೇ ಇಲ್ಲವೆಂಬಂತೆ ಲಿಪ್ ಲಾಕ್‌ ಮಾಡಿದ್ದಾರೆ. 7 ಸೆಕೆಂಡ್‌ಗಳ ವಿಡಿಯೋ ಕ್ಲಿಪ್‌ ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಮಟ್ಟದಲ್ಲಿ ವೈರಲ್‌ಗೊಂಡ ಬಳಿಕ, ಅಲ್ಲಿನ ಪೊಲೀಸರು ಫುಲ್ ಅಲರ್ಟ್ ಆಗಿದ್ದಾರೆ.

Ad Widget . Ad Widget .

ವಿಡಿಯೋ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಾಂಪುರ ಪೊಲೀಸರು, ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಟ್ವಿಟ್ ಮಾಡಿ ತಿಳಿಸಿದ್ದು, ಜೊತೆಗೆ ಸಂಬಂಧಪಟ್ಟ ಇಲಾಖೆಗೂ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ. ಜೊತೆಗೆ ಈ ಕೃತ್ಯ ವೆಸಗಿದ ಯುವಕರ ಪತ್ತೆಗೂ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.

ಕಳೆದ ತಿಂಗಳ ಆರಂಭದಲ್ಲಿ ಇದೇ ರೀತಿಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಯುವತಿಯರಿಬ್ಬರೂ ಜೀವದ ಮೇಲೆ ಭಯವಿಲ್ಲ ಎಂಬಂತೆ ಬೈಕ್‌ನಲ್ಲಿ ಸ್ಟಂಟ್ ಮಾಡುತ್ತಾ ಸ್ವಲ್ಪವು ನಾಚಿಕೆ ಇಲ್ಲದಂತೆ ಚುಂಬಿಸಿಕೊಂಡಿದ್ದರು. ಅಷ್ಟಕ್ಕೂ ಈ ಘಟನೆ ಎಲ್ಲಿ ನಡೆದಿದೆ ಎಂಬುದರ ಬಗ್ಗೆ ತಿಳಿದಿಲ್ಲ. ಆದರೂ, ವಾಹನದ ನೋಂದಣಿ ಸಂಖ್ಯೆಯನ್ನು ನೋಡಿದಾಗ ತಮಿಳುನಾಡಿನದ್ದು ಎಂದು ಹೇಳಲಾಗಿದೆ.

ಇದಕ್ಕೂ ನೆಟ್ಟಿಗರು ತೀವ್ರವಾಗಿ ಕಿಡಿಕಾರಿದ್ದರು. ಆದರೆ, ವೈರಲ್ ಆದ ಈ ವಿಡಿಯೋವನ್ನು ಜಾರ್ಖಂಡ್ ಮೂಲದ ಇನ್‌ಸ್ಟಾಗ್ರಾಮ್ ಪೇಜ್ ನಲ್ಲಿ ಶೇರ್ ಮಾಡಲಾದ ಹಿನ್ನೆಲೆ, ಸಂಬಂಧಪಟ್ಟ ಅಧಿಕಾರಿಗಳು ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ, ಹಲವಾರು ಜಾರ್ಖಂಡ್ ಪೊಲೀಸರಿಗೆ ಟ್ಯಾಗ್ ಮಾಡಿದ್ದರು. ಸದ್ಯ, ಈ ಘಟನೆ ಕುರಿತಂತೆ ಹೆಚ್ಚಿನ ವಿವರ ಲಭ್ಯವಾಗಿಲ್ಲ.

ಇನ್ನು, ಕೆಲವೇ ದಿನಗಳ ಹಿಂದೆಯಷ್ಟೇ ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಯುವಕನೊಬ್ಬ ತನ್ನ ಗೆಳತಿಯೊಂದಿಗೆ ತಡರಾತ್ರಿ ವೇಗವಾಗಿ ಚಲಿಸುವ ಬುಲೆಟ್ ಬೈಕ್ ನಲ್ಲಿ ಕುಳಿತುಕೊಂಡು ರೋಮ್ಯಾನ್ಸ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿತ್ತು. ಇದನ್ನು ಮಮತಾ ತ್ರಿಪಾಠಿ ಎಂಬುವವರು ತಮ್ಮ ಟ್ವಿಟರ್ ಖಾತೆಯಲ್ಲಿ ಶೇರ್ ಮಾಡಿದ್ದರು. ಜೊತೆಗೆ ಅಲ್ಲಿನ ಪೊಲೀಸ್ ಅಧಿಕಾರಿಗಳಿಗೆ ಟ್ಯಾಗ್ ಮಾಡಿ, ಸೂಕ್ತ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದರು.

Leave a Comment

Your email address will not be published. Required fields are marked *