ಎಲ್ಲರಿಗೂ 200 ಯೂನಿಟ್ ಉಚಿತ ವಿದ್ಯುತ್ – ಸಿಎಂ ಸಿದ್ದರಾಮಯ್ಯ ಘೋಷಣೆ

ಸಮಗ್ರ ನ್ಯೂಸ್: ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್​​ ಘೋಷಿಸಿದ್ದ ಐದು ಗ್ಯಾರಂಟಿಗಳಲ್ಲಿ ಒಂದಾಗಿರುವ ಗೃಹಜ್ಯೋತಿ ಮೊದಲ ಗ್ಯಾರಂಟಿ ಯೋಜನೆಯನ್ನು ಉಚಿತವಾಗಿ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಣೆ ಮಾಡಿದ್ದಾರೆ.

Ad Widget ... ..

ಸಚಿವ ಸಂಪುಟದಲ್ಲಿ ಬಳಿಕ ಸಿದ್ದರಾಮಯ್ಯ ಸುದ್ದಿಗೋಷ್ಠಿಯಲ್ಲಿ ಮತನಾಡಿದ್ದು, ಗೃಹಲಕ್ಷ್ಮೀ, ಅನ್ನಭಾಗ್ಯ, ಗೃಹಜ್ಯೋತಿ, ಯುವನಿಧಿ, ಮಹಿಳೆಯರಿಗೆ ಉಚಿತ ಬಸ್​ ಯೋಜನೆಯ ಯಾವುದೇ ಜಾತಿ, ಧರ್ಮ, ಭಾಷೆ ಇಲ್ಲದೆ ಎಲ್ಲರಿಗೂ ಅನ್ವಯ ಆಗುವ ಹಾಗೆ ಗ್ಯಾರಂಟಿ ಜಾರಿ‌ ಮಾಡುತ್ತೇವೆ ಎಂದು ಹೇಳಿದ್ದಾರೆ.

Ad Widget

ಮೊದಲ ಗ್ಯಾರಂಟಿಯಾಗಿರುವ, ಗೃಹಜ್ಯೋತಿ ಜಾರಿಗೆ ಸಂಪುಟ ಸಭೆ ನಿರ್ಧರಿಸಿದ್ದು, ಎಲ್ಲರಿಗೂ 200 ಯುನಿಟ್​ ವರೆಗೂ ಉಚಿತವಾಗಿ ವಿದ್ಯುತ್ ನೀಡಲಾಗುವುದು. 12 ತಿಂಗಳ ಸರಾಸರಿ ಆಧಾರದಲ್ಲಿ ವಿದ್ಯುತ್​ ಬಿಲ್​ ಪರಿಗಣೆ ಮಾಡಲಾಗುತ್ತಿದ್ದು, 12 ತಿಂಗಳಲ್ಲಿ ಎಷ್ಟು ಬಳಸುತ್ತಾರೋ ಅದರ ವಾರ್ಷಿಕ ಸರಾಸರಿ ನೋಡಿ ಅದರ ಮೇಲೆ 10% ಹೆಚ್ಚು ವಿದ್ಯುತ್ ನೀಡುತ್ತೇವೆ ಎಂದು ತಿಳಿಸಿದರು.

Leave a Comment

Your email address will not be published. Required fields are marked *