ಸಮಗ್ರ ನ್ಯೂಸ್: ಗ್ಯಾರಂಟಿ ಯೋಜನೆಗಳ ಪೈಕಿ ನಂ.2 ಗೃಹ ಲಕ್ಷ್ಮೀ ಇದನ್ನು ಜಾರಿಗೊಳಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಮಾಹಿತಿ ತಿಳಿಸಿದ್ದಾರೆ.
ಗೃಹಲಕ್ಷ್ಮಿ ಯೋಜನೆಗೆ ಬ್ಯಾಂಕ್ ಅಕೌಂಟ್ಸ್, ಆಧಾರ್ ಕಾರ್ಡ್ ಒದಗಿಸಬೇಕಾಗುತ್ತದೆ. ಯಾರು ಮನೆಯ ಯಜಮಾನಿ ಎಂಬುದು ತೀರ್ಮಾನಿಸಬೇಕಾಗಿದೆ. ನಾವು ಹೇಳಿರುವಂತದ್ದು ಮನೆಯ ಯಜಮಾನಿಗೆ ತಿಂಗಳಿಗೆ 2,000 ರೂ ಜಮಾ ಮಾಡುತ್ತೇವೆ ಎಂದಿದ್ದೆವು. ಆದ್ದರಿಂದ ಅಕೌಂಟ್ ಮಾಹಿತಿ, ಆಧಾರ್ ಕಾರ್ಡ್, ಅರ್ಜಿ ಸಲ್ಲಿಸಬೇಕು. ಜೂನ್ 15 ರಿಂದ ಜುಲೈ 15ರ ಒಳಗಾಗಿ ಮನೆ ಒಡತಿಯ ಮಾಹಿತಿ ನೀಡಬೇಕು. ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
ಇದು ಆದಮೇಲೆ ಜುಲೈ 15ರಿಂದ ಆಗಸ್ಟ್ 15ರ ಒಳಗಡೆ ಪ್ರೋಸಸ್ ಮಾಡಿ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯಂದು ಮನೆಯ ಯಜಮಾನಿ ಖಾತೆಗೆ 2000 ರೂ ಜಮಾ ಮಾಡುತ್ತೇವೆ ಎಂದರು.
ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ದಾರರ ಮನೆಯ ಒಡತಿಯ ಖಾತೆಗೆ ಗೃಹ ಲಕ್ಷ್ಮೀ ಯೋಜನೆ ಜಾರಿಗೊಳಿಸಲಾಗುತ್ತದೆ. ಮನೆಯ ಯಜಮಾನಿ ಯಾರು ಎನ್ನುವ ಬಗ್ಗೆ ಕುಟುಂಬಸ್ಥರೇ ಮಾಹಿತಿಯನ್ನು ನೀಡಬೇಕು. ಆ ಮಾಹಿತಿ ಆಧಾರದ ಮೇಲೆ ಪ್ರತಿ ತಿಂಗಳು 2000 ರೂ ಖಾತೆಗೆ ಜಮಾ ಮಾಡಲಾಗುತ್ತದೆ ಎಂದು ಹೇಳಿದರು.