Ad Widget .

ಗೂಡ್ಸ್ ರೈಲು ಡಿಕ್ಕಿ ಹೊಡೆದು ಹಳಿ ತಪ್ಪಿದ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು| ಅಪಾರ ಸಾವು ನೋವು ಸಾಧ್ಯತೆ

ಸಮಗ್ರ ನ್ಯೂಸ್: ಕೋರಮಂಡಲ್ ಎಕ್ಸ್ಪ್ರೆಸ್ ಶುಕ್ರವಾರ ಸಂಜೆ ಒಡಿಶಾದ ಬಾಲಸೋರ್ನ ಬಹನಾಗ ನಿಲ್ದಾಣದ ಬಳಿ ಹಳಿ ತಪ್ಪಿದೆ. ಸರಕು ಸಾಗಣೆ ರೈಲಿಗೆ ಡಿಕ್ಕಿ ಹೊಡೆದಿದ್ದರಿಂದ ಹೈಸ್ಪೀಡ್ ರೈಲು ಹಳಿ ತಪ್ಪಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

Ad Widget . Ad Widget .

ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗ ರೈಲ್ವೆ ನಿಲ್ದಾಣದ ಬಳಿ ಎಕ್ಸ್ಪ್ರೆಸ್ ರೈಲು ಅಪಘಾತಕ್ಕೀಡಾಗಿದೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ತಂಡಗಳು ಸ್ಥಳಕ್ಕೆ ತೆರಳಿವೆ.

Ad Widget . Ad Widget .

ಎಲ್ಲಾ ರಕ್ಷಣಾ ಕಾರ್ಯಾಯರಣೆಯ ಅಗತ್ಯ ವ್ಯವಸ್ಥೆಗಳನ್ನು ಮಾಡಲು ಮತ್ತು ರಾಜ್ಯ ಮಟ್ಟದಿಂದ ಯಾವುದೇ ಹೆಚ್ಚುವರಿ ಸಹಾಯ ಅಗತ್ಯವಿದ್ದರೆ ಎಸ್‌ಆರ್ಸಿಗೆ ತಿಳಿಸಲು ಬಾಲಸೋರ್ ಕಲೆಕ್ಟರ್ಗೆ ನಿರ್ದೇಶಿಸಲಾಗಿದೆ ಎಂದು ವಿಶೇಷ ಪರಿಹಾರ ಆಯುಕ್ತರ ಕಚೇರಿ ತಿಳಿಸಿದೆ.

ಇದೀಗ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು ಎಷ್ಟು ಪ್ರಯಾಣಿಕರು ಸಾವನ್ನಪ್ಪಿದ್ದಾರೆ, ಗಾಯಗೊಂಡವರು ಎಷ್ಟು ಎನ್ನುವ ಬಗ್ಗೆ ಮಾಹಿತಿ ತಿಳಿದು ಬರಬೇಕಿದೆ

Leave a Comment

Your email address will not be published. Required fields are marked *