Ad Widget .

ಒಡಿಶಾ ರೈಲು ದುರಂತ| ಸಾವಿನ ಸಂಖ್ಯೆ 233 ಕ್ಕೆ ಏರಿಕೆ| ಸಾವಿರದ ಸನಿಹದಲ್ಲಿ ಗಾಯಾಳುಗಳು

ಸಮಗ್ರ ನ್ಯೂಸ್: ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಸಂಭವಿಸಿದ ಭೀಕರ ರೈಲು ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 233ಕ್ಕೆ ಏರಿಕೆಯಾಗಿದೆ.

Ad Widget . Ad Widget .

ಘಟನೆಯಲ್ಲಿ 900ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಈ ಹಿನ್ನೆಲೆ ಒಡಿಶಾ ಸರ್ಕಾರ ಒಂದು ದಿನ ಶೋಕಾಚರಣೆ ಘೋಷಣೆ ಮಾಡಿದೆ. ರಾಜ್ಯದಲ್ಲಿ ಇಂದು (ಜೂ.03) ಯಾವುದೇ ಸಂಭ್ರಮಾಚರಣೆ ಮಾಡುವಂತಿಲ್ಲ ಎಂದು ಸೂಚನೆ ನೀಡಲಾಗಿದೆ. ಇನ್ನು ಘಟನಾ ಸ್ಥಳಕ್ಕೆ ಇಂದು ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಭೇಟಿ ನೀಡಲಿದ್ದಾರೆ.

Ad Widget . Ad Widget .

ಬಹನಾಗಾ ರೈಲು ನಿಲ್ದಾಣದ ಬಳಿ 3 ರೈಲು ಮಾರ್ಗಗಳಿದ್ದವು, ಕೋಲ್ಕತಾದ ಶಾಲಿಮಾರ್ ರೈಲು ನಿಲ್ದಾಣದಿಂದ ಚೆನ್ನೈಗೆ ಮೇನ್ ಲೈವ್​ನಲ್ಲಿ ನಿನ್ನೆ (ಜೂ.02) ಸಂಜೆ 7.30ಕ್ಕೆ ಹೊರಟಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್, (ರೈಲು ಸಂಖ್ಯೆ 12841) ಒಡಿಶಾದ ಬಹನಗಾ ಬಜಾರ್‌ನಲ್ಲಿರುವ ರೈಲು ನಿಲ್ದಾಣದ ಬಳಿ ಹಳಿ ತಪ್ಪಿ ಪಕ್ಕದ ಹಳಿಯಲ್ಲಿ ನಿಂತಿದ್ದ ಗೂಡ್ಸ್‌ ರೈಲಿಗೆ ಮೊದಲು ಡಿಕ್ಕಿ ಹೊಡೆದಿತ್ತು. ಇದರಿಂದಾಗಿ ಕೋರಮಂಡಲ್ ಎಕ್ಸ್‌ಪ್ರೆಸ್‌ನ 12 ಬೋಗಿಗಳು ಹಳಿ ತಪ್ಪಿ ಮೂರನೇ ರೈಲು ಮಾರ್ಗದ ಮೇಲೂ ಬಿದ್ದಿವೆ.

ಕೆಲ ಸಮಯದ ಬಳಿಕ ಇದೇ ಮಾರ್ಗವಾಗಿ ಇನ್ನೊಂದು ಹಳಿಯಲ್ಲಿ ವಿರುದ್ಧ ದಿಕ್ಕಿನಿಂದ ಆಗಮಿಸಿದ ಬೆಂಗಳೂರು-ಹೌರಾ ಎಕ್ಸಪ್ರೆಸ್​ (ರೈಲು ಸಂಖ್ಯೆ 12864) ಸಹ ಹಳಿತಪ್ಪಿದ್ದ ಕೋರಮಂಡಲ್​​ನ ಬೋಗಿಗಳಿಗೆ ಡಿಕ್ಕಿ ಹೊಡೆದಿದ್ದು, ನಾಲ್ಕು ಬೋಗಿಗಳು ಹಳಿತಪ್ಪಿವೆ ಎಂದು ರೈಲ್ವೆ ಸಚಿವಾಲಯದ ವಕ್ತಾರ ಅಮಿತಾಭ್​ ಶರ್ಮಾ ಹೇಳಿದ್ದಾರೆ.

Leave a Comment

Your email address will not be published. Required fields are marked *