ಕಾರ್ಕಳ: ಮರಕ್ಕೆ ಡಿಕ್ಕಿ ಹೊಡೆದ ಲಾರಿ| ಇಬ್ಬರು ಗಂಭೀರ ಗಾಯ

ಸಮಗ್ರ ನ್ಯೂಸ್: ಕಾರ್ಕಳ ತಾಲೂಕಿನ ನಲ್ಲೂರಿನ ಪರಪ್ಪಾಡಿಯಲ್ಲಿ ಮೀನು ಸಾಗಿಸುತ್ತಿದ್ದ ಲಾರಿಯ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.

Ad Widget ... ..

ಮಲ್ಪೆಯಿಂದ ಬೆಂಗಳೂರಿನ ಕಡೆಗೆ ಮೀನು ಸಾಗಿಸುತ್ತಿದ್ದ ಲಾರಿ ಪಾಜೆಗುಡ್ಡೆ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿದ ರಭಸಕ್ಕೆ ಲಾರಿ ಜಖಂಗೊಂಡಿದ್ದು ಅದರಲ್ಲಿದ್ದ ಮೀನುಗಳು ಚೆಲ್ಲಾಪಿಲ್ಲಿಯಾಗಿ ಹೋಗಿದ್ದವು.

Ad Widget

ಲಾರಿ ಚಾಲಕ ಸೇರಿದಂತೆ ಮೂವರು ಇದ್ದು, ಅವರಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಗ್ರಾಮ ಪಂಚಾಯತ್ ನ ಸದಸ್ಯರಾದ ಸುಮಿತ್‌ ನಲ್ಲೂರು ಸೇರಿದಂತೆ ಅವರನ್ನು ಸ್ಥಳೀಯರು ಕಾರ್ಕಳ ಆಸ್ಪತ್ರೆಗೆ ದಾಖಲಿಸಿದ್ದಾರೆ.

Leave a Comment

Your email address will not be published. Required fields are marked *