Ad Widget .

ಉಚಿತ ವಿದ್ಯುತ್ ಘೋಷಣೆ ಬೆನ್ನಲ್ಲೇ ಯೂನಿಟ್ ದರ ಏರಿಕೆ ಶಾಕ್

ಸಮಗ್ರ ನ್ಯೂಸ್: ಗೃಹಜ್ಯೋತಿ ಯೋಜನೆಯಡಿ 200 ಯುನಿಟ್ ಉಚಿತ ವಿದ್ಯುತ್ ಘೋಷಣೆ ಜೊತೆಗೆ ರಾಜ್ಯ ಸರ್ಕಾರ ಜನತೆಗೆ ಶಾಕ್ ನೀಡಿದೆ.

Ad Widget . Ad Widget .

ಮತ್ತೆ ವಿದ್ಯುತ್ ದರ ಏರಿಸುವ ಮೂಲಕ ಸರಕಾರ ಮತ್ತೆ ಹೊರೆ ಏರಿದೆ. ಆದಾಯದ ಕೊರತೆ ಮತ್ತು ನಷ್ಟವನ್ನು ಸರಿದೂಗಿಸಿಕೊಳ್ಳಲು ಪ್ರತಿ ಯೂನಿಟ್ ದರವನ್ನು ಏರಿಸಿ ಇಂಧನ ಇಲಾಖೆ ಆದೇಶ ಹೊರಡಿಸಿದೆ. ಅದರಂತೆ, ಬೆಸ್ಕಾಂ ಗ್ರಾಹಕರು ಜುಲೈ 1 ರಿಂದ ಸೆಪ್ಟೆಂಬರ್ ವರೆಗೆ ಪ್ರತಿ ಯೂನಿಟ್ಗೆ 51 ಪೈಸೆ ಹೆಚ್ಚುವರಿ ಹಣ ಪಾವತಿಸಬೇಕಾಗುತ್ತದೆ. ಅಕ್ಟೋಬರ್ 1 ರಿಂದ ಡಿಸೆಂಬರ್ 31 ರವರೆಗೆ ಪ್ರತಿ ಯೂನಿಟ್ 50 ಪೈಸೆ ಏರಿಕೆ ಮಾಡಲಾಗಿದೆ.

Ad Widget . Ad Widget .

ಈ ಏರಿಕೆ ಇಂಧನ ಹೊಂದಾಣಿಕೆ ಶುಲ್ಕವನ್ನು ಮರುಪಡೆಯಲು ಮಾಡಿದ ವಾರ್ಷಿಕ ಪರಿಷ್ಕರಣೆಯ ಭಾಗವಾಗಿದೆ ಎಂದು ಇಲಾಖೆ ಹೇಳಿದೆ. ಆದೇಶವು ಎಲ್ಲಾ ಎಸ್ಕಾಮ್ಗಳಿಗೆ ಅನ್ವಯಿಸುತ್ತದೆ. ಇಂಧನ ಹೊಂದಾಣಿಕೆ ವೆಚ್ಚದಲ್ಲಿ ಜುಲೈ 1 ರಿಂದ ಡಿಸೆಂಬರ್ 31, 2023 ರವರೆಗೆ ಬದಲಾವಣೆ ಇರುತ್ತದೆ ಎಂದು ಆದೇಶದಲ್ಲಿ ಉಲ್ಲೇಖಿಸಿದೆ, ಜುಲೈ 1 ರಿಂದ ಗ್ರಾಹಕರು ಹೆಚ್ಚಿನ ಹಣವನ್ನು ಪಾವತಿಸಬೇಕಾಗುತ್ತದೆ.

Leave a Comment

Your email address will not be published. Required fields are marked *