Ad Widget .

ರೈಲು ದುರಂತ; ಕಳಸದ 110 ಮಂದಿ ಬಚಾವ್

ಸಮಗ್ರ ನ್ಯೂಸ್: ಒಡಿಶಾದ ಬಾಲಸೋರ್​ ಜಿಲ್ಲೆ ಬಹನಾಗ ಬಳಿ ಸಂಭವಿಸಿದ ಅಪಘಾತಕ್ಕೀಡಾದ ಬೆಂಗಳೂರು-ಹೌರ ಸೂಪರ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಕಳಸದ 110 ಮಂದಿ ಇದ್ದರು. ಈ ಪ್ರಯಾಣಿಕರು ಅದೃಷ್ಟವಶಾತ್‌ ಮೃತ್ಯು ದವಡೆಯಿಂದ ಪಾರಾಗಿದ್ದಾರೆ.

Ad Widget . Ad Widget .

ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ 110 ಜನ ಬೈಯಪ್ಪನಹಳ್ಳಿ ಸರ್​​ ಎಂ. ವಿಶ್ವೇಶ್ವರಯ್ಯ ಟರ್ಮಿನಲ್​-ಹೌರಾ ಎಕ್ಸಪ್ರೆಸ್​​​​ನಲ್ಲಿ ಪ್ರಯಾಣಿಸುತ್ತಿದ್ದರು.

Ad Widget . Ad Widget .

ಇವರು ಬೆಂಗಳೂರಿನಿಂದ ಕೊನೆಯ S5, S6, S7 ಬೋಗಿಯಲ್ಲಿ ಇದ್ದರು. ರೈಲು ನಿನ್ನೆ ಮಧ್ಯಾಹ್ನ ಕೋಲ್ಕತ್ತಾ ಬಳಿ ಇಂಜಿನ್​ ಬದಲಿಸಿದೆ. ಇದರಿಂದಾಗಿ ಕೊನೆಯ ಬೋಗಿ ಮೊದಲ ಬೋಗಿಯಾಗಿದೆ. ಕಳಸ ತಾಲೂಕಿನ 110 ಜನ ರೈಲಿನ ಮೊದಲ ಬೋಗಿಗೆ ಶಿಫ್ಟ್ ಆಗಿದ್ದರು. ಮೊದಲ ಬೋಗಿಗೆ ಶಿಫ್ಟ್ ಆದ ಹಿನ್ನೆಲೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದಲ್ಲಿ ಕೊನೆಯ 4 ಬೋಗಿಗಳಿಗೆ ರೈಲು ಡಿಕ್ಕಿ ಹೊಡೆದಿದೆ. ಇನ್ನು ಈ ನಿಲ್ದಾಣದ ರೈಲಿನಲ್ಲಿ 1294 ಪ್ರಯಾಣಿಕರು ತೆರಳಿದ್ದರು. 1294 ಪ್ರಯಾಣಿಕರ ಪೈಕಿ 994 ಜನ ಟಿಕೆಟ್‌ ಬುಕ್ ಮಾಡಿಸಿದ್ದರು.

Leave a Comment

Your email address will not be published. Required fields are marked *