Ad Widget .

ಪ.ಪೂ ಕಾಲೇಜು ಅತಿಥಿ ಉಪನ್ಯಾಸಕರ ನೇಮಕಾತಿಗೆ ಇಲಾಖೆ ಸೂಚನೆ

ಸಮಗ್ರ ನ್ಯೂಸ್: 2023 -24ನೇ ಶೈಕ್ಷಣಿಕ ಸಾರಿಗೆ 4055 ಅತಿಥಿ ಉಪನ್ಯಾಸಕರ ನೇಮಕ ಮಾಡಿಕೊಳ್ಳುವ ಪ್ರಕ್ರಿಯೆಗೆ ಚಾಲನೆ ನೀಡುವಂತೆ ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ಕಾಲೇಜುಗಳಿಗೆ ಸೂಚನೆ ನೀಡಲಾಗಿದೆ.

Ad Widget . Ad Widget .

ಬಡ್ತಿ, ನಿಧನ, ವಯೋ ನಿವೃತ್ತಿ, ಖಾಲಿ ಇರುವ ಹುದ್ದೆ ಸೇರಿದಂತೆ ವಿವಿಧ ಕಾರಣಗಳಿಂದಾಗಿ ಖಾಲಿ ಇರುವ ಸ್ಥಾನಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಬೇಕು. ಕಾರ್ಯಭಾರ ಹೆಚ್ಚಾಗುವ ಹಿನ್ನೆಲೆಯಲ್ಲಿ ಒಟ್ಟಾರೆ 4055 ಅತಿಥಿ ಉಪನ್ಯಾಸಕರ ನೇಮಕ ಮಾಡಿಕೊಳ್ಳಲು ತಿಳಿಸಲಾಗಿದೆ.

Ad Widget . Ad Widget .

ಸಂಬಂಧಿಸಿದ ಜಿಲ್ಲಾ ಉಪ ನಿರ್ದೇಶಕರಿಗೆ, ಕಾಲೇಜುಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸೂಚನೆ ನೀಡಿದ್ದು, ತಿಂಗಳಿಗೆ 12,000 ರೂ.ವೇತನದಂತೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಬೇಕು. ಕಳೆದ ಬಾರಿ ನೇಮಕಾತಿ ಸಂದರ್ಭದಲ್ಲಿ ನಿಯಮ ಪಾಲನೆಯಾಗಿಲ್ಲ ಎಂಬ ಆರೋಪವಿದ್ದು, ಈ ಬಾರಿ ನಿಯಮ ನಿಯಮ ಉಲ್ಲಂಘಿಸಿದರೆ ಸಂಬಂಧಿಸಿದವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಲಾಗಿದೆ.

Leave a Comment

Your email address will not be published. Required fields are marked *