4 ಮಕ್ಕಳನ್ನು ಕ್ರೂರವಾಗಿ ಕೊಂದ ತಾಯಿ ನೇಣಿಗೆ ಶರಣು

ಸಮಗ್ರ ನ್ಯೂಸ್: ಮಹಿಳೆಯೊಬ್ಬಳು ತನ್ನ 4 ಮಕ್ಕಳನ್ನು ಡ್ರಮ್‌ನಲ್ಲಿ ಕೂಡಿ ಹಾಕಿ ಕೊಂದ ಬಳಿಕ ತಾನೂ ನೇಣಿಗೆ ಶರಣಾಗಿರುವ ಆಘಾತಕಾರಿ ಘಟನೆ ರಾಜಸ್ಥಾನದಲ್ಲಿ ನಡೆದಿದೆ.

Ad Widget ... ..

ಜೇಥರಾಮ್ ಎಂಬವರ ಪತ್ನಿ ಊರ್ಮಿಳಾ ಶನಿವಾರ ತನ್ನ 4 ಮಕ್ಕಳೊಂದಿಗೆ ಮನೆಯಲ್ಲಿದ್ದಾಗ ತನ್ನ ಮಕ್ಕಳಾದ ಭಾವನಾ (8), ವಿಕ್ರಮ್ (5), ವಿಮಲಾ (3), ಮತ್ತು ಮನಿಶಾ (2) ರನ್ನು ಧಾನ್ಯದ ಡ್ರಮ್‌ನಲ್ಲಿ ಕೂಡಿ ಹಾಕಿ ಬೀಗ ಹಾಕಿದ್ದಾಳೆ. ಬಳಿಕ ಮನೆಯೊಳಗೆ ನೇಣು ಬಿಗಿದುಕೊಂಡು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.

Ad Widget

ಸಂಜೆಯವರೆಗೂ ಮಕ್ಕಳು ಮತ್ತು ಮಹಿಳೆ ಕಾಣದಿದ್ದಾಗ ಅಕ್ಕಪಕ್ಕದಲ್ಲಿ ವಾಸಿಸುತ್ತಿದ್ದ ಅವರ ಸಂಬಂಧಿಕರು ಊರ್ಮಿಳಾ ಮನೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಉರ್ಮಿಳಾ ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ. ಮಕ್ಕಳನ್ನು ಧಾನ್ಯದ ಡ್ರಮ್‌ನಲ್ಲಿ ಕೂಡಿಹಾಕಿರುವುದು ಬೆಳಕಿಗೆ ಬಂದಿದೆ.

ತಕ್ಷಣ ಗ್ರಾಮಸ್ಥರು ಹಾಗೂ ಸಂಬಂಧಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿ 5 ಮೃತದೇಹಗಳನ್ನು ಕಲ್ಯಾಣಪುರ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. ಉರ್ಮಿಳಾ ಚಿಕ್ಕಪ್ಪ ದುರ್ಗಾರಾಮ್ ಕಳೆದ 5 ವರ್ಷಗಳಿಂದ ಆಕೆಯ ಪತಿ ಹಾಗೂ ಅತ್ತೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದುದಾಗಿ ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮರಣೋತ್ತರ ಪರೀಕ್ಷೆಯ ಬಳಿಕ ಮೃತದೇಹಗಳನ್ನು ಸಂಬಂಧಿಕರಿಗೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

Leave a Comment

Your email address will not be published. Required fields are marked *