Ad Widget .

ಭೀಕರ ಅಪಘಾತ| ಮಲೆಯಾಳಂ ನಟ ಕೊಲ್ಲಂ ಸುಧಿ ದುರ್ಮರಣ

ಸಮಗ್ರ ನ್ಯೂಸ್: ಕಾರು ಮತ್ತು ಪಿಕಪ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಲಯಾಳಂ ನಟ ಮತ್ತು ಮಿಮಿಕ್ರಿ ಕಲಾವಿದ ಕೊಲ್ಲಂ ಸುಧಿ ಸಾವನ್ನಪ್ಪಿದ್ದಾರೆ.

Ad Widget . Ad Widget .

ತ್ರಿಶೂರ್​ನ ಕೈಪಮಂಗಲಂ ಪಣಾಂಬಿಕುನ್​ನಲ್ಲಿ ಬೆಳಗಿನ ಜಾವ 4.30ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಕೊಲ್ಲ ಸುಧಿ ಮತ್ತು ತಂಡ ಕೋಯಿಕ್ಕೋಡ್​ನ ವಡಕಾರದಲ್ಲಿ ಖಾಸಗಿ ವಾಹಿನಿಯೊಂದರಲ್ಲಿ ಕಾರ್ಯಕ್ರಮವನ್ನು ಮುಗಿಸಿ ಮುಂಜಾನೆ ಹಿಂತಿರುಗುತ್ತಿದ್ದ ವೇಳೆ ಅವರು ಪ್ರಯಾಣಿಸುತ್ತಿದ್ದ ಕಾರು ಎದುರಿನಿಂದ ಬರುತ್ತಿದ್ದ ಪಿಕಪ್​ಗೆ ಡಿಕ್ಕಿ ಹೊಡೆದಿದೆ.

Ad Widget . Ad Widget .

ಅಪಘಾತದಲ್ಲಿ ಸುಧಿ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ದುರದೃಷ್ಟವಶಾತ್​ ಅವರನ್ನು ಬದುಕಿಸಲು ಸಾಧ್ಯವಾಗಲಿಲ್ಲ. ಇನ್ನೂ ಸುಧಿ ಜೊತೆ ನಟ ಬಿನು ಅಡಿಮಲಿ, ಉಲ್ಲಾಸ್​ ಆರೂರ್​ ಮತ್ತು ಮಹೇಶ್​ ಕೂಡ ಜೊತೆಗಿದ್ದರು. ಅವರಿಗೂ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Comment

Your email address will not be published. Required fields are marked *