ಚಾರ್ಮಾಡಿ: ಬಸ್ ನ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸಾವು

ಸಮಗ್ರ ನ್ಯೂಸ್: ಸರ್ಕಾರಿ ಬಸ್ಸಿನ ಹಿಂಬದಿ ಚಕ್ರಕ್ಕೆ ಸಿಲುಕಿ ಸ್ಕೂಟಿ ಸವಾರ ಸಾವನ್ನಪ್ಪಿದ ಘಟನೆ ಚಾರ್ಮಾಡಿ ಘಾಟಿಯ ಮೂರನೇ ತಿರುವಿನಲ್ಲಿ ನಡೆದಿದೆ. ಘಾಟಿಯ ರಸ್ತೆ ತಿರುವಿನಲ್ಲಿ ನಿಯಂತ್ರಣ ತಪ್ಪಿ ಸವಾರನು ಬಿದ್ದು ಸಾವನ್ನಪ್ಪಿದ್ದಾನೆ.

Ad Widget ... ..

ಸಾವನ್ನಪ್ಪಿರುವ ವ್ಯಕ್ತಿಯನ್ನು ಮಾಗುಂಡಿ ಗ್ರಾಮದ ಇರ್ಫಾನ್ (29) ಎನ್ನಲಾಗಿದ್ದು ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ಸರ್ಕಾರಿ ಬಸ್ ಧರ್ಮಸ್ಥಳದಿಂದ ಹರಪ್ಪನ ಹಳ್ಳಿಗೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ. ಚಿಕ್ಕಮಗಳೂರು ಹಾಗೂ ದಕ್ಷಿಣ ಕನ್ನಡಕ್ಕೆ ಸಂಪರ್ಕ ಕಲ್ಪಿಸುವ ಚಾರ್ಮುಡಿ ಘಾಟ್ ನಲ್ಲಿ ಈ ದುರ್ಘಟನೆ ಸಂಭವಿಸಿದೆ.

Ad Widget

Leave a Comment

Your email address will not be published. Required fields are marked *