ಮಂಡ್ಯ: ದಶಪಥ ಹೆದ್ದಾರಿಯಲ್ಲಿ ಮೂರು ಸುತ್ತು ಪಲ್ಟಿ ಹೊಡೆದ ಕಾರು | ಐವರು ಜಖಂ; ಇಬ್ಬರು ಗಂಭೀರ

ಸಮಗ್ರ ನ್ಯೂಸ್: ಬೆಂಗಳೂರು- ಮೈಸೂರು ದಶಪಥ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಗಂಭೀರ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.

. Ad Widget . Ad Widget . Ad Widget .

ಟೈರ್ ಸ್ಫೋಟಗೊಂಡ ಪರಿಣಾಮ ಚಲಿಸುತ್ತಿದ್ದ ಕಾರೊಂದು ಮೂರು ಸುತ್ತು ಪಲ್ಟಿ ಹೊಡೆದಿರುವ ಘಟನೆ ಮಂಡ್ಯ ಜಿಲ್ಲೆಯ ಚಿಕ್ಕಮಂಡ್ಯ ಬಳಿಯ ದಶಪಥ ಎಕ್ಸ್ ಪ್ರೆಸ್‍ವೇನಲ್ಲಿ ನಡೆದಿದೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಕಾರು ಬೆಂಗಳೂರು ಕಡೆಯಿಂದ ಮೈಸೂರಿನತ್ತ ತೆರಳುತ್ತಿತ್ತು. ಭೀಕರ ಅಪಘಾತದಲ್ಲಿ ಐವರು ಗಂಭಿರವಾಗಿ ಗಾಯಗೊಂಡಿದ್ದಾರೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಮಂಡ್ಯದ ಮಿಮ್ಸ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರಿನಲ್ಲಿದ್ದವರೆಲ್ಲ ಬೆಂಗಳೂರು ಮೂಲದವರು ಎನ್ನಲಾಗಿದೆ.

ಅದೃಷ್ಟವಶಾತ್ ಅಪಘಾತಕ್ಕೀಡಾದ ಕಾರಿನ ಮುಂದೆ-ಹಿಂದೆ ಯಾವುದೇ ವಾಹನ ಸಂಚರಿಸದ ಕಾರಣ ದೊಡ್ಡ ದುರಂತವೊಂದು ತಪ್ಪಿದೆ. ದಶಪಥ ಹೆದ್ದಾರಿಯಿಂದ ಅಪಘಾತದ ಕಾರು ತೆರವು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಮಂಡ್ಯ ಸೆಂಟ್ರಲ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Comment

Your email address will not be published. Required fields are marked *