ಸುಂಟಿಕೊಪ್ಪ: ನಾಪತ್ತೆಯಾಗಿದ್ದ ಯುವಕ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಸಮಗ್ರ ನ್ಯೂಸ್: ಎರಡು ದಿನದಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ನೇಣುಬಿಗಿದುಕೊಂಡು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದೆ.

. Ad Widget . Ad Widget . Ad Widget .

ಕೊಡಗು ಜಿಲ್ಲೆ ಸುಂಟಿಕೊಪ್ಪದಲ್ಲಿ ಘಟನೆ ನಡೆದಿದ್ದು, ಬಾಳೆಕಾಡು ತೋಟದ ನಿವಾಸಿ ಕಪಾಲಿ ಮುರುಗೇಶ್ ಅವರ ಪುತ್ರ ವಿಜಯ (23) ಮೃತ ಯುವಕ. ಈತ ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದ. ಸೋಮವಾರ ಸಂಜೆ ತೋಟದ ಮರ ಒಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಕಾರ್ಮಿಕರು ಕೆಲಸ ಮಾಡಿ ತೆರಳುವ ವೇಳೆ ಯುವಕ ನೇಣು ಬಿಗಿದುಕೊಂಡು ಮೃತಪಟ್ಟಿರುವುದು ಕಂಡುಬಂದಿದೆ. ಸ್ಥಳಕ್ಕೆ ಸುಂಟಿಕೊಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯುವಕನ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

Leave a Comment

Your email address will not be published. Required fields are marked *