ಸಮಗ್ರ ನ್ಯೂಸ್: ‘ಮಂಗಳೂರು ಕಮಿಷನರ್ ವ್ಯಾಪ್ತಿಯಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ ಮಾಡುತ್ತೇವೆ’ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರಾವಳಿ ಮಾತ್ರವಲ್ಲ ಕೋಮು ವೈಷಮ್ಯ ಇರುವ ಕಡೆ ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ ಮಾಡುತ್ತೇವೆ. ಅದರ ರೂಪುರೇಷೆ ಕಮಿಷನರ್ ತಯಾರಿಸುತ್ತಾರೆ. ಇದರ ಮುಖ್ಯ ಉದ್ದೇಶ ಅನೈತಿಕ ಪೊಲೀಸ್‌ಗಿರಿ ಹತ್ತಿಕ್ಕುವುದು. ನೈತಿಕ ಪೊಲೀಸ್ ಗಿರಿ ನಡೆಯಲು ಅವಕಾಶವೇ ಕೊಡಬಾರದು. ಇಲ್ಲಿ ಯಶಸ್ವಿಯಾದರೆ ಇಡೀ ರಾಜ್ಯದಲ್ಲಿ ವಿಸ್ತರಣೆ ಮಾಡುತ್ತೇವೆ ಎಂದು ಹೇಳಿದರು.