ಸಮಗ್ರನ್ಯೂಸ್: ಹವಾಮಾನ ಮುನ್ಸೂಚನೆಯಂತೆ ಜೂ. 6 ರಿಂದ 11ರ ವರೆಗೆ ಬಿಪೊರ್ ಜಾಯ್ ಚಂಡಮಾರುತದಿಂದಾಗಿ ಅರಬ್ಬಿ ಸಮುದ್ರವು ಪ್ರಕ್ಷುಬ್ಧಗೊಂಡಿರುತ್ತದೆ.
ಈ ಸಂದರ್ಭದಲ್ಲಿ ಸಂಭವಿಸುವ ಅನಾಹುತಗಳನ್ನು ತಡೆಗಟ್ಟುವ ಸಲುವಾಗಿ ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರಿಕೆ ದೋಣಿಗಳು ಕೂಡಲೇ ದಡ ಸೇರುವಂತೆ ಮೀನುಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.