ಸಮಗ್ರ ನ್ಯೂಸ್: ಭಾರತೀಯ ಹವಾಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆಯಂತೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನಲೆಯಲ್ಲಿ ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರೀ ಮಳೆ ಹಾಗೂ ಸಮುದ್ರ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ. ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ತರ್ತು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು ಅದರಂತೆ, ಜೂ. 11 ರವರೆಗೆ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಕೋರಲಾಗಿದೆ.
ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ, ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆವಹಿಸುವುದು. ಮೀನುಗಾರರಿಗೆ ಕಡ್ಡಾಯವಾಗಿ ಮೀನುಗಾರಿಕೆಗಾಗಿ ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಿದೆ. ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದು. ಪ್ರವಾಸಿಗರು, ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ ತೆರಳದಂತೆ ಎಚ್ಚರಿಕೆವಹಿಸುವುದು. ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಈ ಟೋಲ್ ಫ್ರೀ ಸಂಖ್ಯೆ 24/7 ಕಂಟ್ರೋಲ್ ರೂಮ್- 1077/0824-2442590 ಸಂಪರ್ಕಿಸುವಂತೆ ತಿಳಿಸಿದೆ.
ತುರ್ತು ಸೇವೆಗೆ ನಿಯಂತ್ರಣ ಕೊಠಡಿಗಳ ವಿವರ:-
ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಂಟ್ರೋಲ್ ರೂಮ್ ದೂರವಾಣಿ ಸಂಖ್ಯೆ-1077 (0824- 2442590) 24/7 ಕಾರ್ಯಾಚರಣೆಯಲ್ಲಿರುತ್ತದೆ.
ವಿಪತ್ತು ನಿರ್ವಹಣೆ ಕುರಿತಾಗಿ ನಿರ್ದೇಶನಗಳನ್ನು ನೀಡಲು, ತುರ್ತಾಗಿ ಮಾಹಿತಿಯನ್ನು ಸಂಗ್ರಹಿಸಲು ಹಾಗೂ ಸಂಬಂಧಿಸಿದವರಿಗೆ ವಿನಿಮಯ ಮಾಡಿಕೊಳ್ಳಲು ಪ್ರತ್ಯೇಕವಾಗಿ ಜಿಲ್ಲಾ ಮಟ್ಟದ, ಉಪ ವಿಭಾಗ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳನ್ನೊಳಗೊಂಡ ವಾಟ್ಸಪ್ ಗ್ರೂಪ್ ರಚಿಸಲಾಗಿದೆ.
ಜಿಲ್ಲೆಯ ಎಲ್ಲಾ ಉಪ-ವಿಭಾಗಾಧಿಕಾರಿಗಳ ಹಾಗೂ ಎಲ್ಲಾ ತಹಶೀಲ್ದಾರರ ಕಾರ್ಯಾಲಯದಲ್ಲಿ ಕಂಟ್ರೋಲ್ ರೂಮ್ ಗಳನ್ನು ತೆರೆದು 24/7 ಕಾಲ ಕಾಯನಿರ್ವಹಿಸುವ ಮೂಲಕ ಪ್ರತಿ ದಿನ ಮಳೆ ಮತ್ತು ಮಳೆಹಾನಿ ಮಾಹಿತಿಯನ್ನು ಜಿಲ್ಲಾಡಳಿತಕ್ಕೆ ಕಡ್ಡಾಯವಾಗಿ ಸಲ್ಲಿಸುವಂತೆ ನಿರ್ದೇಶನ ನೀಡಲಾಗಿರುತ್ತದೆ.
ತಾಲೂಕು ವಿಪತ್ತು ನಿರ್ವಹಣಾ ಪ್ರಾಧಿಕಾರದ ನಿಯಂತ್ರಣ ಕೊಠಡಿ ಸಂಖ್ಯೆಗಳು:-
ಮಂಗಳೂರು-0824-2220587/596, ಉಳ್ಳಾಲ-0824-2204424, ಬಂಟ್ವಾಳ- 08255-232120/232500, ಪುತ್ತೂರು- 08251-230349/232799, ಬೆಳ್ತಂಗಡಿ-08256-232047/233123, ಸುಳ್ಯ- 08257-231231/230330/298330, ಮೂಡಬಿದ್ರೆ- 08258-238100/239900, ಕಡಬ-08251-260435, ಮುಲ್ಕಿ- 0824-2294496 ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.