Ad Widget .

ಪ್ರಿಯತಮೆಯನ್ನು ಕತ್ತರಿಸಿ ಕುಕ್ಕರ್ ನಲ್ಲಿ ಬೇಯಿಸಿದ ಪ್ರಿಯಕರ

ಸಮಗ್ರ ನ್ಯೂಸ್: ಪ್ರಿಯತಮೆಯನ್ನು ಹತ್ಯೆಗೈದು, ದೇಹದ ಭಾಗವನ್ನು ತುಂಡು ಮಾಡಿ ಕುಕ್ಕರ್ ನಲ್ಲಿ ಬೇಯಿಸಿರುವ ಭೀಕರ ಘಟನೆ ಮುಂಬಯಿಯಲ್ಲಿ ನಡೆದಿದೆ.

Ad Widget . Ad Widget .

ಕೊಲೆ ಮಾಡಿದ ಆರೋಪಿಯನ್ನು ಮನೋಜ್ ಸಹಾನಿ (56) ಎಂದು ಗುರುತಿಸಲಾಗಿದ್ದು, ಈತ ತನ್ನ ಲಿವ್ ಇನ್ ಗೆಳತಿ ಸರಸ್ವತಿ ವೈದ್ಯ(36) ಎಂಬ ಮಹಿಳೆಯನ್ನು ಕೊಲೆ ಮಾಡಿದ್ದಾನೆ.

Ad Widget . Ad Widget .

ಆರೋಪಿ ಕಳೆದ ಮೂರು ವರ್ಷಗಳಿಂದ ಗೀತಾ ನಗರ 7ನೇ ಹಂತದ ಗೀತಾ ಆಕಾಶ್ ದೀಪ್ ಕಟ್ಟಡದಲ್ಲಿ 704 ಫ್ಲಾಟ್‌ನಲ್ಲಿ ಮನೋಜ್ ಸಹಾನಿ ಮತ್ತು ಸರಸ್ವತಿ ವೈದ್ಯ ಅವರು ಲಿವ್-ಇನ್ ರಿಲೇಶನ್‌ಶಿಪ್‌ನಲ್ಲಿದ್ದರು. ಕೆಲವು ವಿಷಯಕ್ಕೆ ಇಬ್ಬರ ನಡುವೆ ಜಗಳವಾಗಿದೆ. ಇದೇ ವಿಚಾರಕ್ಕೆ ಈ ಕೃತ್ಯ ನಡೆದಿರಬಹುದು. ಆಕೆಯ ದೇಹವನ್ನು ಮರ ಕಟ್‌ ಮಾಡುವ ಮಿಷನ್‌ ನಿಂದ ತುಂಡು ಮಾಡಲಾಗಿದೆ. ಶಂಕಿತ ಆರೋಪಿ ಸಾಕ್ಷ್ಯವನ್ನು ಮರೆಮಾಡಲು ಪ್ರಯತ್ನಿಸುವ ಸಲುವಾಗಿ ಈ ರೀತಿ ದೇಹದ ಭಾಗವನ್ನು ಕುಕ್ಕರ್‌ ನಲ್ಲಿ ಬೇಯಿಸಿರಬಹುದು” ಎಂದು ಪೊಲೀಸ್ ಉಪ ಆಯುಕ್ತ ಜಯಂತ್ ಬಜ್ಬಲೆ ಅವರು ಹೇಳಿದ್ದಾರೆ. ಬುಧವಾರ ಸಂಜೆ ಫ್ಲಾಟ್‌ ನ ಇತರೆ ಸದಸ್ಯರು ಮನೋಜ್‌ ಅವರ ನಿವಾಸದಿಂದ ಕೆಟ್ಟ ವಾಸನೆ ಬರುತ್ತಿರುವುದರಿಂದ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸದ್ಯ ಪೊಲೀಸರು ಆರೋಪಿ ಮನೋಜ್ ಸಹಾನಿಯನ್ನು ಬಂಧಿಸಿದ್ದಾರೆ.

Leave a Comment

Your email address will not be published. Required fields are marked *