Ad Widget .

ಪಠ್ಯಪುಸ್ತಕ ಪರಿಷ್ಕರಣೆ : ಈ ಮೂರು ಅಧ್ಯಾಯ ಕೈಬಿಡಲು ರಾಜ್ಯ ಸರ್ಕಾರ ನಿರ್ಧಾರ!

ಸಮಗ್ರ ನ್ಯೂಸ್: ರಾಜ್ಯ ಕಾಂಗ್ರೆಸ್ ಸರ್ಕಾರವು ಶಾಲಾ ಪಠ್ಯಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು, ಹಿಂದಿನ ಬಿಜೆಪಿ ಸರ್ಕಾರದಲ್ಲಿ ಪರಿಷ್ಕರಿಸಿದ್ದ ಪಠ್ಯಪುಸ್ತಕಗಳಿಂದ ಪ್ರಮುಖ ಮೂರು ಅಧ್ಯಾಯಗಳನ್ನು ಕೈಬಿಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

Ad Widget . Ad Widget .

ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ, ಈ ಸಾಲಿನ ಮಟ್ಟಿಗೆ ವಿವಾದಿತ ಹಾಗೂ ಆಕ್ಷೇಪಣೆಗಳಿರುವ ಪಠ್ಯಗಳನ್ನು ಬೋಧನೆ, ಪರೀಕ್ಷೆ ಮತ್ತು ಮೌಲ್ಯಮಾಪನ ಪ್ರಕ್ರಿಯೆಯಿಂದ ಕೈಬಿಡಲು ತೀರ್ಮಾನಿಸಲಾಗಿದೆ. ಮುಂದಿನ ಸಂಪುಟದಲ್ಲಿ ಮತ್ತೊಮ್ಮೆ ಈ ವಿಷಯ ಚರ್ಚಿಸಿ ಘೋಷಣೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ ಎನ್ನಲಾಗಿದೆ.

Ad Widget . Ad Widget .

ಶಾಲಾ ಪಠ್ಯಪುಸ್ತಕಗಳಲ್ಲಿ ಆರ್ ಎಸ್‌ಎಸ್ ಸಂಸ್ಥಾಪಕ ಕೇಶವ್ ಬಲಿರಾಮ್ ಹೆಡಗೇವಾರ್, ಚಿಂತಕ ಚಕ್ರವರ್ತಿ ಸೂಲಿಬೆಲೆ ಮತ್ತು ವಿದ್ವಾಂಸ ಬನ್ನಂಜೆ ಗೋವಿಂದಾಚಾರ್ಯ ಅವರ ಪಠ್ಯಗಳೂ ಸೇರಿದಂತೆ ಹಲವು ಅಧ್ಯಾಯಗಳನ್ನು ಕೈಬಿಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಆದರೆ ಈಗಾಗಲೇ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ವಿತರಿಸಿರುವುದರಿಂದ ಪರಿಷ್ಕರಣೆ ಸಾಧ್ಯವಾಗಿಲ್ಲ. ಹೀಗಾಗಿ ಆ ಪಾಠಗಳನ್ನು ಕೈಬಿಡುವಂತೆ ಶಿಕ್ಷಕರಿಗೆ ಸೂಚಿಸುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.

ಬಿಜೆಪಿ ಸರ್ಕಾರ ಪಠ್ಯಪುಸ್ತಕ ಪರಿಷ್ಕರಿಸಿ ಸೇರಿಸಿದ್ದ ವಿಷಯಗಳನ್ನು ಹಿಂಪಡೆಯುವುದಾಗಿ ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿತ್ತು. ಸಿದ್ದರಾಮಯ್ಯ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಹಲವು ಶಿಕ್ಷಣ ತಜ್ಞರು ಸಭೆ ನಡೆಸಿ ಪಠ್ಯಪುಸ್ತಕ ಹಿಂಪಡೆಯುವಂತೆ ಮನವಿ ಸಲ್ಲಿಸಿದ್ದರು.

Leave a Comment

Your email address will not be published. Required fields are marked *