ವರ್ಕಾಡಿ ಗ್ರಾಮದ ಕಿಶನ್‌ ಕುಮಾರ್‌ ಶೆಟ್ಟಿ ನಾಪತ್ತೆ; ಪತ್ತೆಗಾಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಸಮಗ್ರ ನ್ಯೂಸ್: ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ವರ್ಕಾಡಿ ಗ್ರಾಮದ ನಿವಾಸಿ ಕಿಶನ್ ಕುಮಾರ್ ಶೆಟ್ಟಿ (29 ವರ್ಷ) ಎಂಬವರು 2023ರ ಮಾ.30ರಿಂದ ಕಾಣೆಯಾಗಿರುವ ಬಗ್ಗೆ ಮಂಗಳೂರಿನ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

. Ad Widget . Ad Widget . Ad Widget

ಎತ್ತರ 5.9 ಅಡಿ, ಗೋಧಿ ಮೈ ಬಣ್ಣ, ಕೋಲು ಮುಖ, ಸಾಧಾರಣ ಶರೀರ ಹೊಂದಿರುತ್ತಾರೆ ಹಾಗೂ ಕಪ್ಪು ತಲೆ ಕೊದಲು ಮತ್ತು ಗಡ್ಡ ಬಿಟ್ಟಿರುತ್ತಾರೆ. ಕಾಣೆಯಾದ ದಿನ ಕಪ್ಪು ಮತ್ತು ಬಿಳಿ ಬಣ್ಣದ ಉದ್ದ ತೋಳಿನ ಶರ್ಟ್ ಮತ್ತು ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದಾರೆ. ಕನ್ನಡ, ತುಳು ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಕಾಣೆಯಾದ ವ್ಯಕ್ತಿ ಪತ್ತೆಯಾದಲ್ಲಿ ಮಂಗಳೂರಿನ ಕೊಣಾಜೆ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಠಾಣೆಯ ಪೊಲೀಸ್ ಉಪ ನಿರೀಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

. Ad Widget .

Leave a Comment

Your email address will not be published. Required fields are marked *