ಸಮಗ್ರ ನ್ಯೂಸ್: ದ.ಕ.ಜಿಲ್ಲಾಧಿಕಾರಿ ಕಚೇರಿಯ ವಾಹನ ಚಾಲಕರೋರ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಾಲಕ ಬಾಲಕೃಷ್ಣ (58) ಎಂಬವರು ಗುರುವಾರ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.
ಮಾಲಾಡಿ ಕೋರ್ಟ್ ಬಳಿಯ ರಾಘವೇಂದ್ರ ನಿಲಯ ಎಂಬಲ್ಲಿ ವಾಸಿಸುತ್ತಿದ್ದ ಅವರು ಈ ಹಿಂದೆ ಆರೋಗ್ಯ ಇಲಾಖೆಯಲ್ಲಿ ಚಾಲಕರಾಗಿದ್ದರು. ಬಳಿಕ ಅಪರ ಜಿಲ್ಲಾಧಿಕಾರಿಯ ಕಾರಿನ ಚಾಲಕರಾಗಿ ಕೆಲಸ ಮಾಡುತ್ತಿದ್ದರು.
ಹೃದಯ ಹಾಗೂ ಕರುಳಿನ ಸಮಸ್ಯೆಯಿಂದ ಬಾಲಕೃಷ್ಣ ಅವರು ಬಳಲುತ್ತಿದ್ದರು ಎನ್ನಲಾಗಿದೆ. ಅವರು ಇದಕ್ಕೆ ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ. ಗುರುವಾರ ತನ್ನ ಮನೆಯ ಮಹಡಿಗೆ ಹೋದವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಈ ಕುರಿತು ಅವರ ಪುತ್ರ ಚೇತನ್ ನೀಡಿದ ದೂರಿನಂತೆ ಕಾವೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿರುವ ಬಗ್ಗೆ ವರದಿಯಾಗಿದೆ.