Ad Widget .

ಅರಮನೆಗಯ: ಅಂಬೇಡ್ಕರ್ ರಕ್ಷಣಾ ಸಮಿತಿಯಿಂದ ಸೇತುವೆ ನಿರ್ಮಿಸುವಂತೆ ಮನವಿ| ತಕ್ಷಣ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿದ ಶಾಸಕಿ ಭಾಗೀರಥಿ ಮುರುಳ್ಯ

ಸಮಗ್ರ ನ್ಯೂಸ್: ಜೂ.10ರಂದು ಅಡ್ತಲೆಯಲ್ಲಿ ನಡೆದ ಕಾಮಗಾರಿಗಳ ಉದ್ಘಾಟನೆಗೆ ಆಗಮಿಸಿದ ವೇಳೆ ಶಾಸಕಿ ಭಾಗೀರಥಿ ಮುರುಳ್ಯರವರಿಗೆ ಅರಮನೆಗಯ ಸೇತುವೆ ನಿರ್ಮಿಸುವಂತೆ ಅಂಬೇಡ್ಕರ್ ರಕ್ಷಣಾ ಸಮಿತಿಯಿಂದ ಮನವಿ ನೀಡಲಾಯಿತು ಈ ವೇಳೆ ತಕ್ಷಣ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿದ್ದಾರೆ.

Ad Widget . Ad Widget .

ಸ್ಥಳ ಪರಿಶೀಲನೆ ಮಾಡಿ ಸರಕಾರದಿಂದ ಬರುವ ಮೊದಲ ಅನುದಾನದಲ್ಲಿ ಸೇತುವೆ ನಿರ್ಮಿಸುವ ಭರವಸೆಯನ್ನು ನೀಡಿದರು. ಹಾಗೂ ಈ ವರ್ಷದ ಮಳೆಗಾಲದಲ್ಲಿ ತಾತ್ಕಾಲಿಕವಾಗಿ ದುರಸ್ಥಿ ಕಾರ್ಯವನ್ನು ಪಂಚಾಯತ್ ಮುಖಾಂತರ ಮಾಡಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಬಿ. ಜೆ. ಪಿ. ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಅರಂತೋಡು ಗ್ರಾಮ ಪಂಚಾಯತ್ ಸದಸ್ಯ ಕೇಶವ ಅಡ್ತಲೆ, ಮರ್ಕಂಜ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಗೋವಿಂದ ಅಳವುಪಾರೆ, ಅರಂತೋಡು ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ಶೇಖರ ಚೋಡಿಪಣೆ, ವಿನಯ ಬೆದ್ರುಪಣೆ ಮತ್ತು ಅಂಬೇಡ್ಕರ್ ರಕ್ಷಣಾ ವೇದಿಕೆಯ ಸದಸ್ಯರು, ನಾಗರಿಕರು ಉಪಸ್ಥಿತರಿದ್ದರು.

Ad Widget . Ad Widget .

Leave a Comment

Your email address will not be published. Required fields are marked *