ಗುಂಡ್ಯ: ನಿಯಂತ್ರಣ ತಪ್ಪಿ ಹೊಳೆಗೆ ಉರುಳಿದ ಕಾರು| ಓರ್ವ ಸಾವು; ಮತ್ತೊಬ್ಬ ಗಂಭೀರ

ಸಮಗ್ರ ನ್ಯೂಸ್: ಚಾಲಕನ ನಿಯಂತ್ರಣ ತಪ್ಪಿದ ಮಾರುತಿ ಎರ್ಟಿಗಾ ಕಾರು ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ರಸ್ತೆ ಬದಿಯ ಹೊಳೆಗೆ ಉರುಳಿ ಬಿದ್ದ ಘಟನೆ ಭಾನುವಾರ ಬೆಳಗಿನ ಜಾವ ನಡೆದಿದೆ.

Ad Widget ... ..

ಘಟನೆಯಲ್ಲಿ ಕಾರಿನಲ್ಲಿದ್ದ ಹೊಸೂರು ನಿವಾಸಿ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುವನ್ನು ಅಶ್ವಿನಿ ಆಂಬ್ಯುಲೆನ್ಸ್ ಮೂಲಕ ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ನೀರಿನಲ್ಲಿ ಮುಳುಗಿದೆ ಎಂದು ತಿಳಿದುಬಂದಿದೆ.

Ad Widget

Leave a Comment

Your email address will not be published. Required fields are marked *