Ad Widget .

ಹೆಬ್ರಿ: ಕಾರು-ಖಾಸಗಿ ಬಸ್ ನಡುವೆ ಭೀಕರ ಅಪಘಾತ| ಇಬ್ಬರು ಶಿಕ್ಷಕರ ದಾರುಣ ಸಾವು

ಸಮಗ್ರ ನ್ಯೂಸ್: ಹೆಬ್ರಿ ಸಮೀಪದ ಸೀತಾನದಿ ಎಂಬಲ್ಲಿ ಬಸ್ಸೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಶಿಕ್ಷಕರು ದಾರುಣವಾಗಿ ಮೃತಪಟ್ಟ ಘಟನೆ ಜೂ.11ರ ಮಧ್ಯಾಹ್ನ ನಡೆದಿದೆ.

Ad Widget . Ad Widget .

ಮೃತರನ್ನು ಉಡುಪಿ ಶಿಕ್ಷಣ ಇಲಾಖೆಯ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಬ್ಬಣ್ಣ ಗಾಣಿಗ ಹಾಗೂ ಉಡುಪಿ ಇಂದಿರಾ ನಗರ ಶಾಲೆಯ ದೈಹಿಕ ಶಿಕ್ಷಕ, ಸೋಮಶೇಖರ್ ಎಂದು ಗುರುತಿಸಲಾಗಿದೆ. ಇವರೊಂದಿಗೆ ಕಾರಿನಲ್ಲಿದ್ದ ಶಿಕ್ಷಕ ಸುದರ್ಶನ ಹಾಗೂ ಕಾರು ಚಾಲಕ ಸತೀಶ್ ತೀವ್ರವಾಗಿ ಗಾಯಗೊಂಡಿದ್ದಾರೆ. ಇವರಿಬ್ಬರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Ad Widget . Ad Widget .

ಇವರು ದಾವಣಗೆರೆ ಜಿಲ್ಲೆಯ ಚೆನ್ನಗಿರಿಯಲ್ಲಿನ ಸ್ನೇಹಿತ ಶಿಕ್ಷಕನ ಮದುವೆ ಮುಗಿಸಿ ವಾಪಾಸ್ ಉಡುಪಿಗೆ ಬರುತ್ತಿರುವಾಗ ಈ ಅಪಘಾತ ಸಂಭವಿಸಿದೆ.

ಆಗುಂಬೆ ಕಡೆಗೆ ಹೋಗುತ್ತಿದ್ದ ಮಿನಿ ಬಸ್, ಎದುರಿನಿಂದ ಬರುತ್ತಿದ್ದ ಕಾರಿಗೆ ಎದುರಿನಿಂದ ಡಿಕ್ಕಿ ಹೊಡೆಯಿತು. ಇದರಿಂದ ಇಬ್ಬರು ಗಂಭೀರ ವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟರು. ಸ್ಥಳಕ್ಕೆ ಹೆಬ್ರಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *