Ad Widget .

‘ಮೈತ್ರಿ ಬಗ್ಗೆ ಮಾತುಕತೆ ನನಗೆ ಗೊತ್ತಿಲ್ಲ’|ಕುಕ್ಕೆಯಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ

ಸಮಗ್ರ ನ್ಯೂಸ್: ದೇವೆಗೌಡರು ದೆಹಲಿಗೆ ತೆರಳಿ ಮೈತ್ರಿ ಬಗ್ಗೆ ಮಾತನಾಡಿದ್ದಾರೆಯೋ, ಇಲ್ಲವೋ ಅದು ಮಾಧ್ಯಮದವರು ಹೇಳುತ್ತಿರುವುದು ನಿಮಗೆ ಗೊತ್ತಿರುವ ವಿಷಯ, ಅದರ ಬಗ್ಗೆ ನನಗೇನೂ ಗೊತ್ತಿಲ್ಲ ಎಂದು ಮಾಜಿ ಸಚಿವ ಜೆಡಿಎಸ್‌ನ ಎಚ್.ಡಿ.ರೇವಣ್ಣ ಹೇಳಿದರು.

Ad Widget . Ad Widget .

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ರವಿವಾರ ಭೇಟಿ ನೀಡಿದ್ದ ಅವರು ಶ್ರೀ ದೇವರ ದರುಶನ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ಚುನಾವಣೆಯಲ್ಲಿ ಜನರ ತೀರ್ಪಿಗೆ ತಲೆಬಾಗುತ್ತೇವೆ. ಮುಂದೆ ಜೆಡಿಎಸ್ ಪಕ್ಷವನ್ನು ಕಟ್ಟುತ್ತೇವೆ, ಬೆಳೆಸುತ್ತೇವೆ. ಇವತ್ತೇ ಮುಗಿದು ಹೋಗಲ್ಲ. ದೇವೆಗೌಡರು, ಕುಮಾರಣ್ಣ ಎಲ್ಲರೂ ಸೇರಿಕೊಂಡು ಮತ್ತೆ ಪಕ್ಷವನ್ನು ಬಲಿಷ್ಠಗೊಳಿಸುತ್ತೇವೆ ಎಂದರು.

Ad Widget . Ad Widget .

ನೂತನ ಸರಕಾರ ಅಧಿಕಾರಿಗಳ ವರ್ಗಾವಣೆ ದಂಧೆ ಮಾಡುತ್ತಿದೆ ಎಂಬ ಕುಮಾರಸ್ವಾಮಿ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ರೇವಣ್ಣ, ಈ ಬಗ್ಗೆ ನನಗೆ ಗೊತ್ತಿಲ್ಲ, ಇದರ ಬಗ್ಗೆ ಪ್ರತಿಕ್ರಿಯೆ ನೀಡಲ್ಲ ಎಂದರು. ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಅವರು ಒಳ್ಳೆಯ ಕೆಲಸ ಮಾಡಲಿ, ಬಡವರ ಪರವಾಗಿರಲಿ ಎಂದರು.

ಕ್ಷೇತ್ರಕ್ಕೆ ಭೇಟಿ ನೀಡಿದ ಹೆಚ್.ಡಿ.ರೇವಣ್ಣ ಅವರು ಶ್ರೀ ದೇವರ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು. ಸಂಸದ ಪ್ರಜ್ವಲ್ ರೇವಣ್ಣ, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ, ಸುಬ್ರಹ್ಮಣ್ಯದ ಜೆಡಿಎಸ್ ಮುಖಂಡ ಕಿಶೋರ್ ಕುಮಾರ್ ಆರಂಪಾಡಿ, ಡಿಸಿಸಿ ಬ್ಯಾಂಕ್ ಮ್ಯಾನೇಜರ್ ಚಂದ್ರಪ್ರಕಾಶ್ ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *