Ad Widget .

ಬಸ್ ನ ಮೆಟ್ಟಿಲಿಗೆ ನಮಸ್ಕರಿಸಿದ ಅಜ್ಜಿಯ ಫೋಟೋ ವೈರಲ್| ಬಹುಕಾಲ ನೆನಪುಳಿಯುವ ಫೋಟೋ ಎಂದ ಸಿಎಂ ಸಿದ್ದು

ಸಮಗ್ರ ನ್ಯೂಸ್: ಉಚಿತ ಬಸ್ ಪ್ರಯಾಣ ಯೋಜನೆ ನಿನ್ನೆಯಿಂದ ಜಾರಿಯಾಗಿದ್ದು, ಮೊದಲ ದಿನ ಮೆಟ್ಟಿಲಿಗೆ ನಮಸ್ಕರಿಸಿ ಬಸ್ ಹತ್ತಿದ ಅಜ್ಜಿ ಫೋಟೋ ಭಾರಿ ವೈರಲ್ ಆಗಿದೆ. ಬಸ್ ಹತ್ತುವ ಮುನ್ನ ಮೆಟ್ಟಿಲಿಗೆ ನಮಸ್ಕಾರ ಮಾಡಿ ಅಜ್ಜಿ ಬಸ್ ಹತ್ತಿದ್ದು, ಸೋಶಿಯಲ್ ಮೀಡಿಯಾದಲ್ಲಿ ವ್ಯಾಪಕ ಮೆಚ್ಚುಗೆಗೆ ವ್ಯಕ್ತವಾಗಿದೆ.

Ad Widget . Ad Widget .

ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದು, ನೆನಪಿನಲ್ಲಿ ಉಳಿಯುವ ಚಿತ್ರ ಇದು ಎಂದು ಟ್ವೀಟ್ ಮಾಡಿದ್ದಾರೆ.

Ad Widget . Ad Widget .

ನಾವು ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಘೋಷಿಸಿದಾಗ ಶ್ರಮಪಡದೆ ಸಮಾಜದ ಎಲ್ಲಾ ವಿಧದ ಸೌಲಭ್ಯಗಳನ್ನು ಕೂತಲ್ಲಿಯೇ ಅನುಭವಿಸುತ್ತಿರುವ ಜನರಿಂದ ತರತರನಾದ ಟೀಕೆಗಳು, ಕುಹಕ, ವ್ಯಂಗ್ಯಗಳು ವ್ಯಕ್ತವಾದವು. ಅದ್ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ಇಂದು ಶಕ್ತಿ ಯೋಜನೆಯನ್ನು ಜಾರಿಗೆ ಕೊಟ್ಟೆವು. ನಮ್ಮ ಯೋಜನೆ ಜಾರಿಗೊಂಡ ನಂತರ ತಾಯಿಯೊಬ್ಬರು ಧಾರವಾಡ ಬಸ್ ನಿಲ್ದಾಣದಲ್ಲಿ ಬಸ್ಸಿಗೆ ನಮಸ್ಕರಿಸಿ ಅತ್ಯಂತ ಸಂತೋಷದಿಂದ ಉಚಿತ ಪ್ರಯಾಣ ಬೆಳೆಸಿದರು. ನಾವು ಎಷ್ಟು ಅನುದಾನ ಖರ್ಚು ಮಾಡುತ್ತೇವೆ ಎನ್ನುವುದಕ್ಕಿಂತ ಯಾರಿಗಾಗಿ ಆ ಹಣ ವಿನಿಯೋಗಿಸುತ್ತಿದ್ದೇವೆ ಎಂಬುದು ಮುಖ್ಯ. ಈ ಕ್ಷಣ ಇನ್ನೂ ನೂರು ವಿಧದಲ್ಲಿ ಟೀಕೆಗಳು ಎದುರಾದರೂ ಅದ್ಯಾವುದಕ್ಕೂ ಕುಗ್ಗದಂತೆ ನನ್ನನ್ನು ಗುರಿಯೆಡೆಗೆ ಮತ್ತಷ್ಟು ದೃಢವಾಗಿಸಿದೆ. ಯೋಜನೆ ಜಾರಿಗೆ ಕೊಟ್ಟ ನನಗೆ ಸಂತೃಪ್ತಿ ನೀಡಿದ ಜೊತೆಗೆ ಬಹುಕಾಲ ನೆನಪಿನಲ್ಲಿ ಉಳಿಯುವ ಚಿತ್ರವಿದು ಎಂದು ಟ್ವೀಟ್ ಮಾಡಿದ್ದಾರೆ.

Leave a Comment

Your email address will not be published. Required fields are marked *