ಸಮಗ್ರ ನ್ಯೂಸ್: ಪುಣ್ಚತ್ತಾರು ವಿಷ್ಣುಪುರ ಕರಿಮಜಲು ಶ್ರೀ ವಿಷ್ಣುಮೂರ್ತಿ ದೈವಸ್ಥಾನ, ಶ್ರೀ ಕಾಳಿಕಾಂಬ ದೇವಿ ದೇವಸ್ಥಾನದಲ್ಲಿ ಶ್ರೀ ವಿಷ್ಣುಮೂರ್ತಿ ದೈವ, ಶ್ರೀ ಕಾಳಿಕಾಂಬ ದೇವಿ ಮತ್ತು ಪರಿವಾರ ದೈವಗಳ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಜೂ.1ರಂದು ಸಂಭ್ರಮದ ಚಾಲನೆ ನೀಡಲಾಯಿತು.
ಶ್ರೀ ಕ್ಷೇತ್ರದ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಕೆಮ್ಮಿಂಜೆ ಬ್ರಹ್ಮಶ್ರೀ ವೇದಮೂರ್ತಿ ತಂತ್ರಿ ಸುಬ್ರಹ್ಮಣ್ಯ ಬಳ್ಳಕ್ಕುರಾಯರ ನೇತೃತ್ವದಲ್ಲಿ ಜೂ.11ರಿಂದ ಜೂ13ರವರೆಗೆ ನಡೆಯಲಿದ್ದು, ಜೂ.11ರಂದು ಸಂಜೆ ಕಾಣಿಯೂರು ಶ್ರೀ ಅಮ್ಮನವರ ದೇವಸ್ಥಾನದಿಂದ ಪುಣ್ಚತ್ತಾರು ಕರಿಮಜಲು ದೈವಸ್ಥಾನದವರೆಗೆ ಶ್ರೀ ವಿಷ್ಣುಮೂರ್ತಿ ದೈವದ ಬೆಳ್ಳಿಯ ಮೊಗ ಮತ್ತು ಹಸಿರು ಹೊರೆಕಾಣಿಕೆ ನಡೆಯಿತು. ಪ್ರಾರಂಭದಲ್ಲಿ ಕಾಣಿಯೂರು ಶ್ರೀ ಅಮ್ಮನವರ ದೇವಸ್ಥಾನದಲ್ಲಿ ಅರ್ಚಕರಾದ ಬಾಲಕೃಷ್ಣ ಅಸ್ರಣ್ಣ ಅವರು ವಿಷೇಶ ಪ್ರಾರ್ಥನೆ ಸಲ್ಲಿಸಿದರು. ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಮಾಜಿ ಅಧ್ಯಕ್ಷ ಪದ್ಮಯ್ಯ ಗೌಡ ಅನಿಲ ಉಪಸ್ಥಿತರಿದ್ದರು. ಬಳಿಕ ಕಾಣಿಯೂರು ಮುಖ್ಯ ರಸ್ತೆಯಾಗಿ ಪುಣ್ಚತ್ತಾರುವರೆಗೆ ಮೆರವಣಿಗೆ ನಡೆಯಿತು.

ಈ ಸಂದರ್ಭದಲ್ಲಿ ಗೌರವಾಧ್ಯಕ್ಷರಾದ ಶ್ರೀ ಕೃಷ್ಣಗುರೂಜಿ ಶ್ರೀ ಕ್ಷೇತ್ರ ಕುಕ್ಕಾಜೆ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶೇಷಪ್ಪ ಗೌಡ ಬೆದ್ರಂಗಳ, ಕ್ಷೇತ್ರದ ಮೊಕ್ತೇಸರರಾದ ವೆಂಕಟ್ರಮಣ ಆಚಾರ್ಯ ಕರಿಮಜಲು, ಜನಾರ್ಧನ ಆಚಾರ್ಯ ಕರಿಮಜಲು, ಗೌರವ ಸಲಹೆಗಾರರಾದ ನಿರಂಜನ ಆಚಾರ್, ಲಕ್ಷ್ಮಣ ಗೌಡ ಕರಂದ್ಲಾಜೆ, ಸಂಜೀವ ರೈ ಪೈಕ, ಗಣೇಶ್ ಉದನಡ್ಕ, ಸೀತರಾಮ ಗೌಡ ಮರಕ್ಕಡ, ರವೀಂದ್ರನಾಥ್ ರೈ ನೋಲ್ಮೆ, ವಾಸುದೇವ ಆಚಾರ್ಯ ಕಿಲಂಗೋಡಿ, ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಮೋನಪ್ಪ ಬಂಡಾಜೆ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ರೈ ಕಾಸ್ಟಾಡಿ ಗುತ್ತು, ಜೀರ್ಣೋದ್ಧಾರ ಸಮಿತಿ ಉಪಾಧ್ಯಕ್ಷ ಪ್ರದೀಪ್ ಬೊಬ್ಬೆಕೇರಿ, ಹರೀಶ್ ಪೈಕ ಕಟೀಲ್, ವಿಶ್ವನಾಥ್ ರೈ ಮಾಳ, ಜತೆ ಕಾರ್ಯದರ್ಶಿ ಮೋಹನ ಕರಿಮಜಲು, ಕೋಶಾಧಿಕಾರಿ ಭವಿಷ್ ಕರಿಮಜಲು, ಬ್ರಹ್ಮಕಲಶೋತ್ಸವ ಸಮಿತಿ ಉಪಾಧ್ಯಕ್ಷ ಪುಟ್ಟಣ್ಣ ಗೌಡ ಪೈಕ, ನಾಗೇಶ್ ರೈ ಮಾಳ, ಪ್ರಶಾಂತ್ ಮುರುಳ್ಯ, ಕುಮಾರ್ ಆಚಾರ್ಯ ದೋಳ್ಪಾಡಿ, ಕೋಶಾಧಿಕಾರಿ ರಾಜೇಶ್ ಕರಿಮಜಲು ಹಾಗೂ ಜೀರ್ಣೋದ್ಧಾರ ಸಮಿತಿ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ವಿವಿಧ ಸಂಚಾಲಕರು, ಸದಸ್ಯರು ಮತ್ತು ಊರ-ಪರವೂರ ಭಕ್ತಾಧಿಗಳು ದೇವರ ಕೃಪೆಗೆ ಪಾತ್ರರಾದರು.
ತಂತ್ರಿಗಳಿಗೆ ಪೂರ್ಣಕುಂಭ ಸ್ವಾಗತ: ಕ್ಷೇತ್ರದ ತಂತ್ರಿಗಳಾದ ಕೆಮ್ಮಿಂಜೆ ಬ್ರಹ್ಮಶ್ರೀ ವೇದಮೂರ್ತಿ ತಂತ್ರಿ ಸುಬ್ರಹ್ಮಣ್ಯ ಬಳ್ಳಕ್ಕುರಾಯ ಅವರನ್ನು ಪುಣ್ಚತ್ತಾರಿನಿಂದ ಕರಿಮಜಲು ವಿಷ್ಣುಪುರ ಶ್ರೀ ವಿಷ್ಣುಮೂರ್ತಿ ದೈವಸ್ಥಾನ, ಶ್ರೀ ಕಾಳಿಕಾಂಬ ದೇವಿ ದೇವಸ್ಥಾನದವರೆಗೆ ಪೂರ್ಣಕುಂಭದೊಂದಿಗೆ ಸ್ವಾಗತಿಸಲಾಯಿತು.ಧಾರ್ಮಿಕ ಮುಖಂಡ ಅರುಣ್ ಕುಮಾರ್ ಪುತ್ತಿಲ ಈ ಸಂದರ್ಭದಲ್ಲಿ ಉಪಸ್ಥಿತರಿದ್ಧರು.
ಶ್ರೀ ಸುಬ್ರಹ್ಮಣ್ಯ ಭಜನಾ ಮಂಡಳಿ ನಾವೂರು ಮತ್ತು ಶ್ರೀ ಹರಿ ಭಜನಾ ಮಂಡಳಿ ಪುಣ್ಚತ್ತಾರು ಇವರಿಂದ ಕುಣಿತಾ ಭಜನಾ ಕಾರ್ಯಕ್ರಮ, ಚಾರ್ವಾಕ ಶ್ರೀ ಕಪಿಲೇಶ್ವರ ಸಿಂಗಾರಿ ಮೇಳ ತಂಡದಿಂದ ಚೆಂಡೆ ವಾದನ ಮೆರವಣಿಗೆಯಲ್ಲಿ ಮೆರುಗು ತಂದವು.

ಕಾರ್ಯಕ್ರಮಗಳು: ಕ್ಷೇತ್ರದಲ್ಲಿ ರಾತ್ರಿ ಪ್ರಾಸಾದ ಪರಿಗ್ರಹ, ಪ್ರಾರ್ಥಣೆ, ಸ್ಥಳಶುದ್ಧಿ ಪ್ರಸಾದಶುದ್ಧಿ, ರಕ್ಷೋಗ್ನ ಹೋಮ, ವಾಸ್ತು ಹೋಮ, ವಾಸ್ತುಬಲಿ, ಬಿಂಬಾಧಿವಾಸ, ದಿಕ್ಬಾಲಬಲಿ, ಅನ್ನಸಂತರ್ಪಣೆ ನಡೆಯಿತು.
ಇಂದು ಜೂ12ರಂದು ಕ್ಷೇತ್ರದಲ್ಲಿ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ:
ಕ್ಷೇತ್ರದಲ್ಲಿ ಬೆಳಿಗ್ಗೆ ಗಣಹೋಮ ಕಲಶಪೂಜೆ ನಡೆದು ಬೆಳಿಗ್ಗೆ ಗಂಟೆ 9-02ಕ್ಕೆ ನಡೆಯುವ ಮಿಥುನ ಲಗ್ನದ ಶುಭ ಮುಹೂರ್ತದಲ್ಲಿ ಪ್ರತಿಷ್ಠೆ, ಕಲಶಾಭಿಷೇಕ, ತಂಬಿಲ ಸೇವೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಶ್ರೀ ವಿಷ್ಣುಮೂರ್ತಿ ದೈವದ ಭಂಡಾರ ತೆಗೆಯುವುದು. ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಕಡಬ ತಾಲೂಕಿನ ಕಾರ್ಯದರ್ಶಿ ಸದಾನಂದ ಆಚಾರ್ಯ ಕಾಣಿಯೂರು ಇವರು ತರಬೇತುಗೊಳಿಸಿದ ತಂಡದಿಂದ ಕುಣಿತ ಭಜನಾ ಕಾರ್ಯಕ್ರಮ, ರಾತ್ರಿ ಅನ್ನಸಂತರ್ಪಣೆ, ಬಳಿಕ ನಕ್ಷತ್ರ ನೃತ್ಯ ಕಲಾತಂಡ ದೇವಿನಗರ ಆಲಂಕಾರು ಇವರು ಪ್ರಸ್ತುತ ಪಡಿಸುವ “ಪುಣ್ಚತ್ತಾರು ನಾಟ್ಯಗಾನ ವೈಭವ” ಶ್ರೀ ವಿಷ್ಣುಮೂರ್ತಿ ದೈವದ ಕುಳಿಚ್ಚಾಟ, ರಾತ್ರಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.