ಸಮಗ್ರ ನ್ಯೂಸ್: ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ನೀಡುವ ಸಾಲದ ಮೊತ್ತವನ್ನು 5 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಲಾಗುವುದು ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಶೂನ್ಯ ಬಡ್ಡಿ ದರ ಸಾಲವನ್ನು ಮೂರು ಲಕ್ಷ ರೂ.ನಿಂದ ಐದು ಲಕ್ಷ ರೂ.ಗೆ ಹೆಚ್ಚಳ ಮಾಡುವುದಾಗಿ ಭರವಸೆ ನೀಡಲಾಗಿತ್ತು. ಅದೇ ರೀತಿ ಶೇಕಡ ಮೂರರ ಬಡ್ಡಿ ದರದಲ್ಲಿ ನೀಡುವ ಮಧ್ಯಮಾವಧಿ ಸಾಲದ ಮೊತ್ತವನ್ನು 10 ಲಕ್ಷ ರೂ.ನಿಂದ 20 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಲು ಭರವಸೆ ನೀಡಲಾಗಿದ್ದು, ಪ್ರಸಕ್ತ ಮುಂಗಾರು ಹಂಗಾಮಿನಲ್ಲಿಯೇ ಇದನ್ನು ಜಾರಿಗೊಳಿಸಿ ರೈತರಿಗೆ ಸಾಲ ಸೌಲಭ್ಯ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.
ರೈತರಿಗೆ ಗುರಿ ಮೀರಿ ಸಾಲ ನೀಡಲಾಗುತ್ತಿದೆ. ಕಳೆದ ವರ್ಷ 12,000 ಕೋಟಿ ರೂ. ಸಾಲ ನೀಡುವ ಗುರಿ ಹೊಂದಿದ್ದು, ಸುಮಾರು 20 ಸಾವಿರ ಕೋಟಿ ರೂಪಾಯಿ ಸಾಲ ವಿತರಣೆ ಮಾಡಲಾಗಿದೆ. ಅದೇ ರೀತಿ ಈ ವರ್ಷವೂ ರೈತರಿಗೆ ಯಾವುದೇ ತೊಂದರೆಯಾಗದಂತೆ ಸಾಲ ವಿತರಿಸಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ.