Ad Widget .

ಮಂಗಳೂರು:ಪೊಲೀಸ್ ಠಾಣೆಯ ಪಕ್ಕದಲ್ಲೇ ‘ಫಸ್ಟ್‌ ನೈಟ್‌’ ಸಂಭ್ರಮದ ಬ್ಯಾನರ್ ಅಳವಡಿಸಿದ ಪೋಲಿ ಗೆಳೆಯರು..! “ರಾತ್ರಿಯಿಡೀ ಹೋರಾಡಿ ಗೆದ್ದು ಬಾ” ಎಂದು ಹಾರೈಸಿದ ಬ್ಯಾನರ್ ವೈರಲ್‌..!

ಸಮಗ್ರ ನ್ಯೂಸ್: ಮದುವೆಗೆ ಶುಭಾಶಯ ಬ್ಯಾನರ್ ಹಾಕುವುದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕನ ಫಸ್ಟ್‌ ನೈಟ್‌ ಗೆ (ಮೊದಲ ರಾತ್ರಿ) ಪೊಲೀಸ್ ಸ್ಟೇಷನ್‌ ಪಕ್ಕದಲ್ಲೇ ಸ್ನೇಹಿತರು ಬ್ಯಾನರ್‌ ಅಳವಡಿಸಿದ್ದು ಭಾರಿ ವೈರಲ್ ಆಗಿದೆ.

Ad Widget . Ad Widget .

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕದ್ರಿ ಪೊಲೀಸ್‌ ಠಾಣೆಯ ಕಂಪೌಂಡ್ ಗೋಡೆಗೆ ತಾಗಿಕೊಂಡಂತೆ ಈ ಬ್ಯಾನರ್ ಹಾಕಲಾಗಿದೆ. ಯುವಕನೊಬ್ಬನ ಮದುವೆಯ ಮೊದಲ ರಾತ್ರಿಯ ಸಂಭ್ರಮ ಎಂದು ಬ್ಯಾನರ್‌ನಲ್ಲಿ ಬರೆಯಲಾಗಿದೆ. ರಾತ್ರಿಯಿಡೀ ಹೋರಾಡಿ ಗೆದ್ದು ಬಾ ಎಂದು ಗೆಳೆಯರು ಹಾರೈಸಿ ಸರಕಾರಿ ಜಾಗದಲ್ಲಿ ದೊಡ್ಡ ಸಾಧನೆ ಎಂಬಂತೆ ಹೋರ್ಡಿಂಗ್ ಹಾಕಿರುವುದಕ್ಕೆ ಟೀಕೆಗಳು ವ್ಯಕ್ತವಾಗಿದೆ.

Ad Widget . Ad Widget .

ಸರಕಾರಿ ಜಾಗದಲ್ಲಿ ಯಾವುದೇ ಅನುಮತಿ ಇಲ್ಲದೆ ತಮಗೆ ಇಷ್ಟ ಬಂದಂತೆ ಅಶ್ಲೀಲ ಸಂದೇಶ ಸಾರುವ, ಮುಜುಗರ ತರುವ ಜಾಹೀರಾತು ಹಾಕುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಜೊತೆಗೆ ಮಳೆಗೆ ಚಳಿಗೆ ಕಚೇರಿಯಲ್ಲಿ ಕುಳಿತಿರುವ ಅಧಿಕಾರಿಗಳು ಮೈಚಳಿ ಬಿಟ್ಟು ಇಂತಹ ಅನಧಿಕೃತ ಮತ್ತು ಅಶ್ಲೀಲ ಬ್ಯಾನರ್‌ಗಳ ವಿರುದ್ದ ದಂಡ ಅಥವಾ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಂಗಳೂರಿನ ಪ್ರಜ್ಞಾವಂತ ನಾಗರಿಕರು ಆಗ್ರಹಿಸಿದ್ದಾರೆ.

Leave a Comment

Your email address will not be published. Required fields are marked *