Ad Widget .

ಸಿಇಟಿ ಫಲಿತಾಂಶ ಪ್ರಕಟ|ಈ ಬಾರಿಯೂ ಬಾಲಕಿಯರೇ ಮೇಲುಗೈ| ಫಲಿತಾಂಶ ನೋಡೋದು ಹೀಗೆ…

ಸಮಗ್ರ ನ್ಯೂಸ್: 2023-24ನೇ ಸಾಲಿನ ವೃತ್ತಿಪರ ಕೋರ್ಸ್​ಗಳ ಪ್ರವೇಶಕ್ಕೆ ನಡೆದಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ-ಸಿಇಟಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಇಂದು(ಜೂನ್ 15) ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ್​ ಅವರು ಬೆಂಗಳೂರಿನ ಮಲ್ಲೇಶ್ವರಂನ ಕೆಇಎ ಕಚೇರಿಯಲ್ಲಿ ಸಿಇಟಿ ಫಲಿತಾಂಶ ಪ್ರಕಟಿಸಿದ್ದು, ಈ ಬಾರಿ ಸಿಇಟಿಯಲ್ಲೂ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ. ಇಂಜಿನಿಯರಿಂಗ್ ಕೋರ್ಸ್​ಗೆ- 2,03,381 ವಿದ್ಯಾರ್ಥಿಗಳು ಆಯ್ಕೆಯಾಗಿದ್ದರೆ, ಕೃಷಿ ವಿಜ್ಞಾನ ಕೋರ್ಸಿಗೆ- 1,64,187, ಪಶುಸಂಗೋಪನೆ- 166756, ಯೋಗ ಮತ್ತು ನ್ಯಾಚುರೋಪತಿಗೆ- 2,06191, ಬಿ.ಪಾರ್ಮ್ ಮತ್ತು ಡಿ.ಪಾರ್ಮ್ ಕೋರ್ಸ್ ಗೆ- 2,06,340, ನರ್ಸಿಂಗ್ ಕೋರ್ಸಿಗೆ – 1,66,808 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ ಎಂದು ಸಚಿವ ಡಾ.ಸುಧಾಕರ್​ ಮಾಹಿತಿ ನೀಡಿದರು.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಇಂಜಿನಿಯರಿಂಗ್ ವಿಭಾಗದಲ್ಲಿ​ ವಿಘ್ನೇಶ್​ ಟಾಪರ್‌ ಆಗಿ ಹೊರಹೊಮ್ಮಿದ್ದಾರೆ. ಅರ್ಜುನ್ ಕೃಷ್ಣಸ್ವಾಮಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ​ ಇನ್ನು ತೃತೀಯ ಸ್ಥಾನವನ್ನು ಮೃದ್ಧ್​ ಶೆಟ್ಟಿ ಹಾಗೂ ಎಸ್.ಸುಮೇಧ್​ಗೆ 4ನೇ ಸ್ಥಾನ ಪಡೆದುಕೊಂಡಿದ್ದರೆ, ಮಾಧವ ಸೂರ್ಯಗೆ 5ನೇ ಸ್ಥಾನ ಲಭಿಸಿದೆ.

Ad Widget . Ad Widget . Ad Widget .

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೇ 20 ಹಾಗೂ 21ರಂದು ಇಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶುಸಂಗೋಪನೆ, ಯೋಗ, ನ್ಯಾಚುರೋಪತಿ, ಡಿ ಫಾರ್ಮ ಕೋರ್ಸ್​ ಹಾಗೂ ಬಿಎಸ್ಸಿ ನರ್ಸಿಂಗ್​ಗೆ ಪ್ರವೇಶ ಪರೀಕ್ಷೆ ನಡೆಸಿತ್ತು. ಒಟ್ಟು 2,44,345 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

karresults.nic.in ಹಾಗೂ cetonline.karnataka.gov.in ವೆಬ್​ಸೈಟ್​ನಲ್ಲಿ ಬೆಳಗ್ಗೆ 11 ಗಂಟೆ ನಂತರ ಫಲಿತಾಂಶ ಲಭ್ಯವಾಗಲಿದೆ.

Leave a Comment

Your email address will not be published. Required fields are marked *