ಸಮಗ್ರ ನ್ಯೂಸ್: ರಾಜ್ಯ ಸರ್ಕಾರಿ ನೌಕರರು ಈಗಾಗಲೇ ಎನ್ ಪಿಎಸ್ ರದ್ದುಗೊಳಿಸಿ, ಓಪಿಎಸ್ ಜಾರಿಗೊಳಿಸುವ ಬಗ್ಗೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಆ ಬಗ್ಗೆ ಸರ್ಕಾರದ ಹಂತದಲ್ಲಿ ಚರ್ಚೆ ನಡೆಯುತ್ತಿದೆ. ಮತ್ತೊಂದೆಡೆ ರಾಜ್ಯದ ಸಾರಿಗೆ ಸಿಬ್ಬಂದಿಗಳಿಗೆ ಭರ್ಜರಿ ಸಿಹಿ ಸುದ್ದಿ ಎನ್ನುವಂತೆ ಶೇ.15ರಷ್ಟು ವೇತನ ಹೆಚ್ಚಳಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ವಿಧಾನಸೌಧದಲ್ಲಿ ನಡೆದಂತ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಅದರಲ್ಲಿ ಪಠ್ಯಪುಸ್ತಕ ಪರಿಷ್ಕರಣೆ, ಮತಾಂತರ ನಿಷೇಧ ಕಾಯ್ದೆ ರದ್ದು, ಎಪಿಎಂಸಿ ತಿದ್ದುಪಡಿ ಕಾಯ್ದೆ ರದ್ದು ಸೇರಿದಂತೆ ಹಲವು ನಿರ್ಧಾರಗಳಿಗೆ ಒಪ್ಪಿಗೆ ಸೂಚಿಸಲಾಗಿದೆ.
ಇದಲ್ಲದೇ ಸಾರಿಗೆ ಸಿಬ್ಬಂದಿಗಳ ವೇತನವನ್ನು ಶೇ.15ರಷ್ಟು ಹೆಚ್ಚು ಮಾಡಲು ಇಂದು ನಡೆದಂತ ಸಿಎಂ ಸಿದ್ಧರಾಮಯ್ಯ ನೇತೃತ್ವದ ಸಚಿವ ಸಂಪುಟ ಅನುಮೋದನೆ ನೀಡಿದೆ. ಹೀಗಾಗಿ ಏಪ್ರಿಲ್ ತಿಂಗಳಿನಿಂದ ಪೂರ್ವಾನ್ವಯ ಆಗುವಂತೆ ಸಾರಿಗೆ ನೌಕರರಿಗೆ ಶೇ.15ರಷ್ಟು ವೇತನ ಹೆಚ್ಚಳವಾಗಲಿದೆ. ಈ ಮೂಲಕ ವೇತನ ಹೆಚ್ಚಳದ ನಿರೀಕ್ಷೆಯಲ್ಲಿದ್ದಂತ ಸಾರಿಗೆ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ.