Ad Widget .

ಮಡಿಕೇರಿ ಜಿಲ್ಲಾಸ್ಪತ್ರೆಗೆ ಶಾಸಕ ಡಾ.ಮಂತರ್ ಗೌಡ ಭೇಟಿ| ವೈದ್ಯಕೀಯ ಸೇವೆಗಳು ಜನಸ್ನೇಹಿಯಾಗಿರಬೇಕು

ಸಮಗ್ರ ನ್ಯೂಸ್:ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಮಡಿಕೇರಿ ಜಿಲ್ಲಾಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿಗಳೊಂದಿಗೆ ಭೇಟಿ ನೀಡಿ ಆಸ್ಪತ್ರೆಯನ್ನು ಪರಿಶೀಲಿಸಿ, ಚಿಕಿತ್ಸೆಗೆ ದಾಖಲಾಗಿರುವ ರೋಗಿಗಳ ಯೋಗ ಕ್ಷೇಮ ವಿಚಾರಿಸಿದರು.‌

Ad Widget . Ad Widget .

ಜಿಲ್ಲಾ ಆಸ್ಪತ್ರೆಯ ಕಟ್ಟಡವನ್ನು ಪರಿಶೀಲಿಸಿದ ಶಾಸಕರು ಸೂಕ್ತ ರೀತಿಯ ನಿರ್ವಹಣೆ ಮಾಡಿ ಶುಚಿತ್ವವನ್ನು ಕಾಪಾಡಲು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಸ್ವತಃ ವೈದ್ಯರಾಗಿರುವ ಡಾ. ಮಂತರ್ ಗೌಡ ವೈಜ್ಞಾನಿಕ ಯಂತ್ರೋಪಕರಣಗಳ ಪರಿಶೀಲನೆ ನಡೆಸಿ, ಸಿಬ್ಬಂದಿ ವರ್ಗಕ್ಕೆ ಸಲಹೆ ನೀಡಿದರು. ವೈದ್ಯಕೀಯ ಸೇವೆಗಳು ಜನಸ್ನೇಹಿಯಾಗಿರಬೇಕು, ಗ್ರಾಮೀಣ ಭಾಗಗಳಿಂದ ಚಿಕಿತ್ಸೆಗೆ ಆಗಮಿಸುವ ರೋಗಿಗಳಿಗೆ ಸೂಕ್ತ ಚಿಕಿತ್ಸೆಯ ಮೂಲಕ ಸ್ಪಂದನೆ ನೀಡಬೇಕೆಂದು ಶಾಸಕರು ಸಲಹೆ ನೀಡಿದರು. ಮಳೆಗಾಲ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸೂಕ್ತ ವ್ಯವಸ್ಥೆಗಳನ್ನು ಅಳವಡಿಸಿ ರೋಗಿಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕೆಂದು ಸಿಬ್ಬಂದಿ ವರ್ಗದವರಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿಗಳಾದ ಡಾ. ಸತೀಶ್, ಡಾ.ನಂಜುಂಡಯ್ಯ ಹಾಗೂ ವೈದ್ಯರು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Ad Widget . Ad Widget .

Leave a Comment

Your email address will not be published. Required fields are marked *