Ad Widget .

ಬಂಟ್ವಾಳ: ಕೌಟುಂಬಿಕ ಮನಸ್ತಾಪ| ಪತ್ನಿ, ಮಾವನಿಗೆ ಚೂರಿ ಇರಿದು ವ್ಯಕ್ತಿ ಪರಾರಿ

ಸಮಗ್ರ ನ್ಯೂಸ್: ಕುಟುಂಬದ ಮನಸ್ತಾಪದ ವಿಚಾರಕ್ಕೆ ಸಂಬಂಧಿಸಿ ಪತ್ನಿ ಹಾಗೂ ಮಾವನಿಗೆ ಆರೋಪಿ ಪತಿ ಚೂರಿಯಿಂದ ಇರಿದು ಪರಾರಿಯಾದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ತುಂಬೆ ಜಂಕ್ಷನ್‌ ನಲ್ಲಿ ನಡೆದಿದೆ.

Ad Widget . Ad Widget .

ಜೂನ್ 15 ರಂದು ರಾತ್ರಿ 10.30 ರ ಸುಮಾರಿಗೆ ತುಂಬೆ ನಿವಾಸಿಗಳಾದ ರಾಜೀವ ಹಾಗೂ ಅವರ ಪುತ್ರಿ ದಿವ್ಯ ಅವರು ಅಟೋ ರಿಕ್ಷಾದಲ್ಲಿ ಮನೆಯಿಂದ ಬಂಟ್ವಾಳ ‌ಕಡೆಗೆ ಆಗಮಿಸುವ ವೇಳೆ ದಿವ್ಯಳ ಗಂಡ ಆರೋಪಿ ಕುಮಾರ ಆಟೋವನ್ನು ತುಂಬೆ ಜಂಕ್ಷನ್ ನಲ್ಲಿ ತಡೆದು, ಚೂರಿ ಹಿಡಿದುಕೊಂಡು ಬಂದು ಪತ್ನಿ ದಿವ್ಯಳಿಗೆ ಇರಿಯಲು ಯತ್ನಿಸಿದ್ದಾನೆ.

Ad Widget . Ad Widget .

ಈ ವೇಳೆ ಬಿಡಿಸಲು ಹೋದ ಮಾವ ರಾಜೀವ ರಿಗೆ ಚೂರಿಯಿಂದ ಇರಿದಿದ್ದು, ಮೂವರ ಮಧ್ಯೆಯೂ ತಳ್ಳಾಟ ನಡೆದು ರಾಜೀವ ಹಾಗೂ ದಿವ್ಯ ಗಂಭೀರವಾಗಿ ಗಾಯಗೊಂಡು, ತಕ್ಷಣ ತುಂಬೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಘಟನೆಯ ಕುರಿತು ಅಟೋ ಚಾಲಕ ಯಶೋಧರ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ದೂರು ನೀಡಿದ್ದಾನೆ. ಕೌಟುಂಬಿಕ ಮನಸ್ತಾಪದಿಂದಲೇ ಘಟನೆ ನಡೆದಿದೆ ಎನ್ನಲಾಗಿದೆ.

Leave a Comment

Your email address will not be published. Required fields are marked *