ತುಂಗೆಯಲ್ಲಿ ಈಜಲು ತೆರಳಿದ ಉಪನ್ಯಾಸಕರು ನೀರುಪಾಲು

ಸಮಗ್ರ ನ್ಯೂಸ್: ನಿಟ್ಟೆಯ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿರುವ ಇಬ್ಬರು ಉಪನ್ಯಾಸಕರು ತುಂಗಾ ನದಿಗೆ ಈಜಲು ತೆರಳಿದ್ದಾಗ, ನೀರಿನ ಸೆಳೆತಕ್ಕೆ ಸಿಲುಕಿ ಬಾರದಲೋಕಕ್ಕೆ ಪಯಣ ಬೆಳೆಸಿದ್ದಾರೆ. ಸದ್ಯ ಒಬ್ಬ ಉಪನ್ಯಾಸಕರ ಮೃತದೇಹ ಪತ್ತೆಯಾಗಿದೆ.

. Ad Widget . Ad Widget . Ad Widget .

ಮೃತ ದುರ್ದೈವಿಗಳು ಕಾರ್ಕಳ ನಿಟ್ಟೆ ಕಾಲೇಜಿನಲ್ಲಿ ಉಪನ್ಯಾಸಕರಾದ ಪುನೀತ್‌ (38 ವರ್ಷ) ಮತ್ತು ಬಾಲಾಜಿ (36 ವರ್ಷ) ಎಂದು ಗುರುತಿಸಲಾಗಿದೆ. ಇಬ್ಬರು ಉಪನ್ಯಾಸಕರು ತಮ್ಮ ಗೆಳಯರೊಂದಿಗೆ ಪ್ರವಾಸಕ್ಕೆ ಹೋಗಿದ್ದರು. ತೀರ್ಥಹಳ್ಳಿಯ ತೀರ್ಥಮತ್ತೂರು ಮಠದ ಸಮೀಪ ಇರುವ ಹೋಂ ಸ್ಟೇಯಲ್ಲಿ ಉಳಿದುಕೊಂಡಿದ್ದರು.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ತೀರ್ಥಹಳ್ಳಿ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ತೀರ್ಥಹಳ್ಳಿ ತಾಲೂಕು ತೀರ್ಥಮತ್ತೂರು ಗ್ರಾಮದ ಬಳಿ ತುಂಗಾ ನದಿಯಲ್ಲಿ ಘಟನೆ ಸಂಭವಿಸಿರುತ್ತದೆ. ಸದ್ಯ ಈ ರಕ್ಷಣಾ ಕಾರ್ಯಾಚರಣೆ ವೇಳೆ ಒಬ್ಬರ ಮೃತದೇಹ ಪತ್ತೆಯಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಿಥುನ್‌ ಕುಮಾರ್‌ ತಿಳಿಸಿದ್ದಾರೆ.

Leave a Comment

Your email address will not be published. Required fields are marked *