Ad Widget .

ವಿಧಾನ ಪರಿಷತ್ ಚುನಾವಣೆ| ಕಾಂಗ್ರೆಸ್ ನಿಂದ ಶೆಟ್ಟರ್ ಸೇರಿ ಮೂರು ಮಂದಿಗೆ ಟಿಕೆಟ್

ಸಮಗ್ರ ನ್ಯೂಸ್: ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡು ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಈ ಚುನಾವಣೆಯಲ್ಲಿ ಪರಾಭವಗೊಂಡರೂ ಸಹ ಜೂನ್ 30 ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಪಡೆದುಕೊಂಡಿದ್ದಾರೆ.

Ad Widget . Ad Widget .

ಜೂನ್ 30ರಂದು ವಿಧಾನ ಪರಿಷತ್ತಿನ ಮೂರು ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ಜಗದೀಶ್ ಶೆಟ್ಟರ್, ತಿಪ್ಪಣ್ಣಪ್ಪ ಕಮಕನೂರು ಹಾಗೂ ಎನ್ ಎಸ್ ಬೋಸರಾಜು ಅವಕಾಶ ಪಡೆದುಕೊಂಡಿದ್ದಾರೆ. ಸಂಖ್ಯಾಬಲದ ಆಧಾರದಲ್ಲಿ ಈ ಮೂರೂ ಸ್ಥಾನಗಳನ್ನು ಕಾಂಗ್ರೆಸ್ ನಿರಾಯಸವಾಗಿ ಪಡೆದುಕೊಳ್ಳಲಿದೆ ಎಂದು ಹೇಳಲಾಗಿದೆ.

Ad Widget . Ad Widget .

ಮುಂದಿನ ವರ್ಷ ಲೋಕಸಭಾ ಚುನಾವಣೆ ನಡೆಯಲಿದ್ದು, ಉತ್ತರ ಕರ್ನಾಟಕದ ಪ್ರಭಾವಿ ಲಿಂಗಾಯತ ನಾಯಕರಾದ ಜಗದೀಶ್ ಶೆಟ್ಟರ್ ಅವರಿಗೆ ವಿಧಾನ ಪರಿಷತ್ ಸದಸ್ಯತ್ವ ಕಲ್ಪಿಸಿಕೊಡುವ ಮೂಲಕ ಕಾಂಗ್ರೆಸ್ ಈಗಿನಿಂದಲೇ ಚುನಾವಣೆಗೆ ತಯಾರಿ ನಡೆಸಿದೆ.

Leave a Comment

Your email address will not be published. Required fields are marked *