ಸಮಗ್ರ ನ್ಯೂಸ್: ಕೆಎಸ್ಸಾರ್ಟಿಸಿ ಬಸ್ಸಿಗೆ ಬೈಕ್ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬುಧವಾರ ಬೆಳಗ್ಗೆ ಗರ್ಡಾಡಿ ಗ್ರಾಮದ ನಂದಿಬೆಟ್ಟ ಸಮೀಪ ಸಂಭವಿಸಿದೆ. ಮೃತ ಯುವಕ ಓಡೀಲು ನಿವಾಸಿಯಾಗಿರುವ ದೀಕ್ಷಿತ್ ಎಂದು ಗುರುತಿಸಲಾಗಿದೆ.
ಇಂದು ದೀಕ್ಷಿತ್ ನ ಹುಟ್ಟುಹಬ್ಬವಾಗಿದ್ದು ಈ ಹಿನ್ನಲೆಯಲ್ಲಿ ಬೆಳಿಗ್ಗೆ ವೇಣೂರಿನ ದೇವಸ್ಥಾನಕ್ಕೆ ಹೋಗಿ ಹಿಂತಿರುಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಯುವಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.