ಸಮಗ್ರ ನ್ಯೂಸ್: ಮುಂದಿನ ಒಂದು ವಾರ ಬೆಂಗಳೂರು ಹಾಗೂ ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದ್ದು, ಇತರೆ ಜಿಲ್ಲೆಗಳ ಕೆಲವು ಕಡೆಗಳಲ್ಲಿ ವರುಣ ಅಬ್ಬರಿಸುವ ಸಾಧ್ಯತೆ ಇದೆ.
ಬೆಂಗಳೂರು, ತುಮಕೂರು, ಕೋಲಾರ, ರಾಮನಗರ, ಮಂಡ್ಯ, ದಕ್ಷಿಣ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ ಎರಡು ದಿನಗಳಲ್ಲಿ ನೆರೆಯ ತಮಿಳುನಾಡಿನ ಚೆನ್ನೈ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ವರುಣ ಆರ್ಭಟಿಸುತ್ತಿದ್ದಾನೆ. ಭಾರಿ ಮಳೆಯ ಹಿನ್ನೆಲೆಯಲ್ಲಿ ಹಿನ್ನೆ ತಮಿಳುನಾಡಿನ ಹಲವೆಡೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಇಂದು ಕೂಡ ಕೆಲವು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿರುವ ವರದಿಯಾಗಿದೆ. ಚೆನ್ನೈನಲ್ಲಿ ಮಳೆಯಾಗುತ್ತಿರುವುದರಿಂದ ಬೆಂಗಳೂರಿನಲ್ಲಿ ಭಾರಿ ಮಳೆಯಾಗುವ ಸಂಭವ ಇದೆ ಎಂದು ಐಎಂಡಿ ಮಾಹಿತಿ ನೀಡಿದೆ.
ರಾಜ್ಯಕ್ಕೆ ಮಾನ್ಸೂನ್ ಮಾರುತಗಳು ಬಂದಿದ್ದು, ಮುಂಗಾರು ಮಳೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮುಂದಿನ 5 ದಿನಗಳು ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಈ ಬಾರಿಯೂ ವಾಡಿಕೆಯಷ್ಟು ಮುಂಗಾರು ಮಳೆಯಾಗಲಿದೆ.
ರಾಜ್ಯದ ದಕ್ಷಿಣ ಒಳನಾಡಿನ ಐದು ಜಿಲ್ಲೆಗಳಾದ ಮಂಡ್ಯ, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಯಗಳಲ್ಲಿ ಯಲ್ಲೋ (ಹಳದಿ) ಅಲರ್ಟ್ ಘೋಷಣೆ ಮಾಡಲಾಗಿದ್ದು, ಭಾರೀ ಮಳೆ ಮುನ್ಸೂಚನೆಯನ್ನು ನೀಡಲಾಗಿದೆ. ಈ ಬಾರಿಯೂ ವಾಡಿಕೆಯಂತೆ ಮುಂಗಾರು ಮಳೆಯಾಗಲಿದೆ. ಮುಂಗಾರು ಕೈಕೊಡುವ, ಕಡಿಮೆಯಾಗುವ ಯಾವುದೇ ಮುನ್ಸೂಚನೆ ಇಲ್ಲ. ಜೂನ್ 21ರಿಂದ ರಾಜ್ಯದಲ್ಲಿ ಮುಂಗಾರು ಮಳೆ ಚುರುಕು ಪಡೆಯಲಿದೆ ಎಂದು ಮಾಹಿತಿಯನ್ನು ನೀಡಿದರು.